ಅ.10 ಮಡಿಕೇರಿಯಲ್ಲಿ ಜಾನಪದ ದಸರಾ: ಕಲಾ ತಂಡದ ಅರ್ಜಿ ಸಲ್ಲಿಕೆಗೆ ಇಲ್ಲಿದೆ ಸಂಪೂರ್ಣ ವಿವರ
ಮಡಿಕೇರಿ, ಸೆಪ್ಟೆಂಬರ್ 14: ಮೈಸೂರಿನಲ್ಲಿ ನಡೆಯುವ ವಿಶ್ವವಿಖ್ಯಾತ ದಸರಾದಂತೆ ಕೊಡುಗು ಜಿಲ್ಲೆಯ ಮಡಿಕೇರಿಯಲ್ಲಿಯೂ ಅದ್ಧೂರಿಯಾಗಿ ದಸರಾ ಆಚರಿಸಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಮಡಿಕೇರಿ ದಸರಾ ಜನಪ್ರಿಯವಾಗುತ್ತಿದ್ದು, ಈ ಸಂಭ್ರಮ ವೀಕ್ಷಿಸಲು ರಾಜ್ಯದ ಮೂಲೆ ಮೂಲೆಯಿಂದ ಲಕ್ಷಾಂತರ ಜನರು ಕೊಡು ಜಿಲ್ಲೆಗೆ ಆಗಮಿಸುತ್ತಾರೆ. ಇದೀಗ ಈ ವರ್ಷದ ಮಡಿಕೇರಿ ದಸರಾ ಆಚರಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ.
ಮಡಿಕೇರಿ ದಸರಾ ಅಂಗವಾಗಿ ಅಕ್ಟೋಬರ್ 10 ರಂದು ಜಾನಪದ ದಸರಾ ಉತ್ಸವ ನಡೆಯಲಿದೆ. ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಅಕ್ಟೋಬರ್ 10ರಂದು ಜಾನಪದ ದಸರಾ ಉತ್ಸವವನ್ನು ಮಡಿಕೇರಿ ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ತಿಳಿಸಿದ್ದಾರೆ.

ಈ ಬಗ್ಗೆ ಸವಿವರದೊಂದಿಗೆ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಜಾನಪದ ಪರಿಷತ್, ಕಳೆದ 4 ವರ್ಷಗಳಿಂದ ಮಡಿಕೇರಿ ದಸರಾ ಉತ್ಸವದಲ್ಲಿ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕರ್ನಾಟಕ ಕೊಡವ ಸಾಹಿತ್ಯ ಸಂಸ್ಕೃತಿ ಅಕಾಡೆಮಿ, ಕರ್ನಾಟಕ ಅರೆಭಾಷಾ ಸಾಹಿತ್ಯ ಸಂಸ್ಕೃತಿ ಅಕಾಡೆಮಿ, ಕರ್ನಾಟಕ ಬ್ಯಾರಿ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಜಾನಪದ ದಸರಾದಲ್ಲಿ ಈ ವರ್ಷವೂ ಕೊಡಗಿನ ಜಾನಪದ ಕಲಾವಿದರಿಗೆ ಕಲಾ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ.
ಅಕ್ಟೋಬರ್ 10 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಕಾರ್ಯಕ್ರಮಗಳು ನಡೆಯುತ್ತವೆ ಎಂದೂ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಅಲ್ಲದೇ ಜಾನಪದ ದಸರಾ ಉತ್ಸವದಲ್ಲಿ ಭಾಗಿಯಾಗ ಬಯಸುವ ಕೊಡಗಿನ ಜಾನಪದ ಕಲಾವಿದರಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಸೆಪ್ಟೆಂಬರ್ 25 ರೊಳಗಾಗಿ ಅರ್ಜಿಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ - 571201 ಇಲ್ಲಿಗೆ ಕಳುಹಿಸಬೇಕು. ಜಾನಪದ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆಗಳು - 9886181613 ಹಾಗೂ 9448614999ಕ್ಕೆ ಕರೆ ಮಾಡಬಹುದು ಎಂದು ಕೊಡಗು ಜಿಲ್ಲಾ ಜಾನಪದ ಪರಿಷತ್ ತಿಳಿಸಿದೆ.












Click it and Unblock the Notifications