ಮಡಿಕೇರಿ ದಸರಾ: ಮಕ್ಕಳ ಸಂತೆ, ಅಂಗಡಿ, ಮಂಟಪ ಸ್ಪರ್ಧೆಗಳ ಸಂಪೂರ್ಣ ವಿವರ ಇಲ್ಲಿದೆ

ಮಡಿಕೇರಿ, ಸೆಪ್ಟೆಂಬರ್‌ 16: ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅಕ್ಟೋಬರ್ 5 ರಂದು ಶನಿವಾರ ನಗರದ ಗಾಂಧಿ ಮೈದಾನದಲ್ಲಿ 11ನೇ ವರ್ಷದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ ಮಕ್ಕಳ ದಸರಾ ಸ್ಪರ್ಧೆಗಳು ಅಕ್ಟೋಬರ್ 5ರಂದು ಶನಿವಾರ ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ. ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.

Madikeri Dasara 2024 Makkala Dasara In Madikeri Held On October 5

ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಒಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದೆ. ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾರ್ಥಗಳ ಮಾರಾಟಕ್ಕೆ ಆದ್ಯತೆ ನೀಡಬೇಕಿದ್ದು, ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದೆ.

ಮಕ್ಕಳ ಮಂಟಪ ಸ್ಪರ್ಧೆ ಕೂಡ ಆಯೋಜನೆ ಮಾಡಲಾಗಿದ್ದು, 10 ನಿಮಿಷದ ಪ್ರದರ್ಶನಾವಧಿಯುಳ್ಳ ಮಂಟಪ ಸ್ಪರ್ಧೆಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯಂಥ ಅಪಾಯಕಾರಿ ವಸ್ತುಗಳನ್ನು ಬಳಸಿ ಪ್ರದರ್ಶನ ನೀಡುವಂತಿಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.

Madikeri Dasara 2024 Makkala Dasara In Madikeri Held On October 5

ಇನ್ನು ಛದ್ಮವೇಶ ಸ್ಪರ್ಧೆಯಲ್ಲಿ ಎಲ್ ಕೆ.ಜಿ. ಮತ್ತು ಯುಕೆಜಿ ವಿದ್ಯಾಥಿ೯ಗಳ ವಿಭಾಗ, 1ನೇ ತರಗತಿಯಿಂದ 4 ನೇ ತರಗತಿ, 5 ರಿಂದ 7 ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಇದರಲ್ಲಿ ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ. 5 ರಿಂದ 7ನೇ ತರಗತಿ ಹಾಗೂ 8 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪರ್ಧೆ ಆಯೋಜಿತವಾಗಿದೆ.

ಈ ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಬಯಸುವ ವಿದ್ಯಾರ್ಥಿಗಳು ಅಕ್ಟೋಬರ್ 5 ರಂದು ಶನಿವಾರ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಹಾಜರಿರಬೇಕು. ಎಲ್ಲಾ ಸ್ಪರ್ಧೆಗಳು ಬೆಳಗ್ಗೆ 9.30 ಗಂಟೆಯಿಂದ ಪ್ರಾರಂಭವಾಗಲಿದೆ. ಹೆಸರು ನೋಂದಾಯಿಸಲು ಬಯಸುವವರು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಮಕ್ಕಳ ಸಂತೆ: ದಿವ್ಯಾ ಚೇತನ್-9538101863, ಚಂದ್ರಿಕಾರಾಜು - 9986518742, ಮಕ್ಕಳ ಅಂಗಡಿ ಸ್ಪರ್ಧೆ: ಶಪಾಲಿ ರೈ - 9741523484, ರಶ್ಮಿ ಪ್ರವೀಣ್ - 9902362038, ಮಕ್ಕಳ ಮಂಟಪ ಸ್ಪರ್ಧೆ: ಸವಿತಾ ಅರುಣ್ - 9480003811, ಪ್ರೀತು- 8277050366, ಛದ್ಮವೇಶ ಸ್ಪರ್ಧೆ - ನಮಿತಾರೈ 9448976405, ಶಮ್ಮಿ ಪ್ರಭು 8088570167, ಕ್ಲೇ ಮಾಡೆಲಿಂಗ್ ಸ್ಪರ್ಧೆ: ಗಾನಾಪ್ರಶಾಂತ್ - 9449713748, ಪಲ್ಲವಿ ಪ್ರಸಾದ್ 9972963151, ಈ ಎಲ್ಲಾ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಲು ಸೆಪ್ಟೆಂಬರ್ 28 ಕೊನೆಯ ದಿನಾಂಕವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+