ಮಡಿಕೇರಿಯಲ್ಲಿ ಕಣ್ಮನ ಸೆಳೆಯುತ್ತಿರುವ ಪುಷ್ಪ ರಾಣಿಯರು!

Posted By: ಮಡಿಕೇರಿ ಪ್ರತಿನಿಧಿ
Subscribe to Oneindia Kannada

ಮಡಿಕೇರಿ, ಮಾರ್ಚ್ 10: ಮಡಿಕೇರಿಯ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಿರುವ ಫಲಪುಷ್ಪ ಪ್ರದರ್ಶನ ನೋಡುಗರ ಗಮನ ಸೆಳೆಯುತ್ತಿದ್ದು, ತರಕಾರಿ ಹಣ್ಣುಗಳಲ್ಲಿ ಕೆತ್ತನೆ ಮಾಡಿದ ಕಲಾಕೃತಿಗಳು, ಮಹಾತ್ಮ ಗಾಂಧಿ, ಡಾ. ಬಿ.ಅರ್. ಅಂಬೇಡ್ಕರ್, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ, ಜನರಲ್ ತಿಮ್ಮಯ್ಯ ಸುಭಾಷ್ ಚಂದ್ರಬೋಷ್, ಸ್ವಾಮಿ ವಿವೇಕಾನಂದ, ಚಂದ್ರಶೇಖರ್ ರಾಜ, ಸಂಗೋಳಿ ರಾಯಣ್ಣ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ನಾನಾ ಕಲಾಕೃತಿಗಳು, ಹಣ್ಣುಗಳಿಂದ ಮಾಡಿದ ವಿವಿಧ ಕಲಾಕೃತಿಗಳು, ಸುಂದರ ಹೂವುಗಳು ಕಣ್ಮನಸೆಳೆಯುತ್ತಿದ್ದು, ಪ್ರವಾಸಿಗರು ಸೇರಿದಂತೆ ಸ್ಥಳೀಯರು ರಾಜಾಸೀಟಿನತ್ತ ಹೆಜ್ಜೆ ಹಾಕುತ್ತಿದ್ದಾರೆ.

ಲಾಲ್ ಬಾಗ್ ಫ್ಲವರ್ ಶೋ ಥೀಮ್ ಗೆ ಹೂವಿನ ಬಳಕೆಯಿಲ್ಲ!

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ರಾಜಾಸೀಟಿಗೊಮ್ಮೆ ಹೆಜ್ಜೆ ಹಾಕಿದರೆ ರಾಷ್ಟ್ರಕವಿ ಕುವೆಂಪು ಅವರ ಕವಿ ಶೈಲದಲ್ಲಿ ಕವನ ಬರೆಯುವ ಮಾದರಿಯ ಸಾಹಿತ್ಯ ಲೋಕವನ್ನು ಬಿಂಬಿಸುತ್ತಿದ್ದರೆ, ನಗರದ ಕೋಟೆ ಕಲಾಕೃತಿ ಕಾವೇರಿ ಮಾತೆ ಹಾಗೂ ಮಂಟಪ ತೀರ್ಥೋದ್ಭವ ಕುಂಡಿಕೆ ಪಾಲಿಹೌಸ್ ನೆರಳು ಪರದೆ ಮನೆ, ಕಿಚನ್ ಗಾರ್ಡ್‍ನ್, ಟೆರಸ್ ಗಾರ್ಡ್‍ನ್, ವರ್ಟಿಕಲ್ ಗಾರ್ಡನ್ ಆಕರ್ಷಿಸುತ್ತಿದೆ. ಇದರೊಂದಿಗೆ ಆನೆ, ಜಿಂಕೆ, ಹುಲಿ ,ಮೊಲ, ಚಿಟ್ಟೆ ಕಲಾಕೃತಿಗಳನ್ನು ಹೂವು ಅಲಂಕಾರಿಕ ಎಲೆಗಳಿಂದ ನಿರ್ಮಿಸಿರುವುದು ಕಂಡು ಬರುತ್ತಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

Madikeri: Flower show in Rajas seat attracts many people

ಮಕ್ಕಳಿಗೆ ಮನರಂಜನೆ ನೀಡುವ ಸೈಕಲ್, ಪಾರ್ಮಲ್ ಕಾರು ಮಾದರಿ ಗಮನ ಸೆಳೆಯುತ್ತಿವೆ. ಮಾವು, ಕಿತ್ತಳೆ, ಅನಾನಾಸ್ ಹಣ್ಣುಗಳ ಭಾವಚಿತ್ರಗಳ ಪ್ರೇಮ್ ಮಾದರಿ ಗಮನ ಸೆಳೆಯುತ್ತಿವೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 3000-4000 ಸಂಖ್ಯೆಯ ವಿವಿಧ ಜಾತಿಯ ಹೂವುಗಳಾದ ಪೇಟೋನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಗಾಂಪ್ರಿನಾ, ಕಾಕಡ ಮಲ್ಲಿಗೆ, ಚಂಡುಹೂ, ಪ್ಲಾಕ್ಸ್, ಜೀನಿಯಾ, ಜರೇನಿಯಂ, ವಿಂಕಾ ರೋಸಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ನಾಟಿ ಮಾಡಲಾಗಿದೆ ಹಾಗೂ 1500 ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳನ್ನು ಬೆಳೆಸಲಾಗಿದೆ.

Madikeri: Flower show in Rajas seat attracts many people

ಪಕ್ಕದ ಗಾಂಧೀ ಮೈದಾನದಲ್ಲಿ ಕೃಷಿ ತೋಟಗಾರಿಕೆ, ಪಾಶುಪಾಲನೆ, ಮೀನುಗಾರಿಕೆ ಹೀಗೆ ನಾನಾ ಇಲಾಖೆಗಳ ವಸ್ತು ಪ್ರದರ್ಶನಗಳ ಮಳಿಗೆಗಳನ್ನು ನಿರ್ಮಿಸಲಾಗಿದೆ ಒಟ್ಟಾರೆ ಈ ಬಾರಿಯ ಫಲಪುಷ್ಪ ಪ್ರದರ್ಶನ ಆಕರ್ಷಕವಾಗಿದ್ದು ಎಲ್ಲರನ್ನು ತನ್ನತ್ತ ಸೆಳೆಯುತ್ತಿರುವುದಂತು ಸತ್ಯ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Flower show which is taking place in Raja's seat in Madikeri attracts hundreds of people. Horticulture department and Madikeri district administration jointly organise this event evey year.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ