ಮಡಿಕೇರಿಯಲ್ಲಿ ಟಿಪ್ಪು ಜಯಂತಿ ವಿರುದ್ಧ ಭುಗಿಲೆದ್ದ ಆಕ್ರೋಶ

Posted By:
Subscribe to Oneindia Kannada

ಮಡಿಕೇರಿ, ನವೆಂಬರ್ 10 : ನಿಷೇಧಾಜ್ಞೆ ನಡುವೆಯೂ ಟಿಪ್ಪು ಜಯಂತಿ ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆಗೆ ಮುಂದಾದ ಶಾಸಕ ಅಪ್ಪಚ್ಚು ರಂಜನ್ ಸೇರಿ ನೂರಾರು ಹಿಂದೂ ಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿಪ್ಪು ಜಯಂತಿ: ಕೊಡಗಿನಲ್ಲಿ ಖಾಕಿ ಸರ್ಪಗಾವಲು!

ಕಳೆದ 2 ವರ್ಷಗಳಿಂದ ಟಿಪ್ಪು ಜಯಂತಿ ವೇಳೇ ಅಹಿತಕರ ಘಟನೆಗಳ ಸಂಭವಿಸುತ್ತಲೇ ಇವೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈ ನಡುವೆಯೂ ಪ್ರತಿಭಟನೆ ಮುಂದಾದವರನ್ನು ಪ್ರತಿಭಟನೆ ನಿಲ್ಲಿಸುವತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಆದರೆ, ಇದಕ್ಕೆ ಹಿಂದೂ ಸಂಘಟಕರು ಸೊಪ್ಪು ಹಾಕದೆ ಟಿಪ್ಪು ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಅನಿವಾರ್ಯವಾಗಿ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದರು.

In Pics : ಟಿಪ್ಪು ಸುಲ್ತಾನ್ ಯಾರಂತ ಗೊತ್ತಾ ಪುಟ್ಟಾ?

Madikeri police has arrests MLA and hindu activists for protest against tipu Jayanti

ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ. ಮತ್ತು ಸಂಘ ಪರಿವಾರದ ಸಂಘಟನೆಗಳು ಕೊಡಗು ಜಿಲ್ಲಾ ಬಂದ್ ಗೆ ಕರೆ ನೀಡಿವೆ. ಮಡಿಕೇರಿ ತಾಲ್ಲೂಕಿನ ಕಾಲೂರಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಮೇಲೆ ಕಲ್ಲು ತೂರಾಟ ನಡೆದಿದೆ.

ಕಡಗದಾಳ್ - ಸೋಮವಾರಪೇಟೆ ರಸ್ತೆಯಲ್ಲಿ ಮರಗಳನ್ನು ಕಡಿದು ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದು, ಕೆಲಕಾಲ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಪೊಲೀಸರು ರಸ್ತೆಗೆ ಹಾಕಲಾಗಿದ್ದ ಮರಗಳನ್ನು ತೆರವುಗೊಳಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Madikeri police has arrest MLA Appachu Ranjan and several hindu activists for protest against tipu Jayanti on Friday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ