ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು: ನೆಟ್‌ವರ್ಕ್‌ಗಾಗಿ ಅಟ್ಟಣಿಗೆ ಕ್ಲಾಸ್‌ ರೂಂ ನಿರ್ಮಿಸಿದ ಶಿಕ್ಷಕ

By Coovercolly Indresh
|
Google Oneindia Kannada News

ಮಡಿಕೇರಿ, ಜೂನ್‌ 28: ಪುಟ್ಟ ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಎಲ್ಲೆಡೆಯೂ ಇದೆ, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಈ ಸಮಸ್ಯೆ ಹೆಚ್ಚೇ ಇದೆ. ಇನ್ನು ಮಳೆಗಾಲದಲ್ಲಂತೂ ಸಮಸ್ಯೆ ಮತ್ತೂ ಉಲ್ಪಣಿಸುತ್ತದೆ. ಏಕೆಂದರೆ ಮಳೆ, ಗಾಳಿಗೆ ವಿದ್ಯುತ್‌ ಕಡಿತಗೊಂಡಾಗ ಗಂಟೆಗಟ್ಟಲೇ ಮೊಬೈಲ್‌ ಟವರ್‌ಗಳು ಡೀಸೆಲ್‌ನಿಂದ ಓಡಬೇಕಾಗುತ್ತದೆ.

ಇಂದಿನ ಡೀಸೆಲ್ ದರಕ್ಕೆ ಜೊತೆಗೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ನ ಆರ್ಥಿಕ ದುಸ್ಥಿತಿಗೆ ಕೆಲವೊಮ್ಮೆ ದಿನಗಟ್ಟಲೇ ನೆಟ್‌ವರ್ಕ್‌ ಸಿಗುವುದಿಲ್ಲ. ಆದರೆ ನೆಟ್‌ವರ್ಕ್‌ ಇದ್ದಾಗಲಾದರೂ ಅನ್‌ಲೈನ್‌ ಪಾಠಗಳ ಮೂಲಕ ವಿದ್ಯಾರ್ಥಿಗಳಿಗೆ ನೆರವಾಗಲು ಶಿಕ್ಷಕರೊಬ್ಬರು ಮುಂದಾಗಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣಕೊಡಗು ಜಿಲ್ಲೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣ

ನೆಟ್‌ವರ್ಕ್‌ ಸಮಸ್ಯೆ ಇರುವುದರಿಂದ ಕೊಡಗು ಜಿಲ್ಲೆಯ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಸ್. ಸತೀಶ್, 20 ಅಡಿ ಎತ್ತರದಲ್ಲಿ ಮರದ ಅಟ್ಟಣಿಗೆ ನಿರ್ಮಿಸಿ ಆನ್‌ಲೈನ್‌ ಕ್ಲಾಸ್‌ ಮಾಡಲು ಉಪಾಯ ಕಂಡುಕೊಂಡಿದ್ದಾರೆ.

Madikeri: Teacher Who Built The Classroom On The Tree For The Network

ಚಿಕ್ಕಕೊಳತ್ತೂರು ಗ್ರಾಮದ ಮನೆಯ ಆವರಣದಲ್ಲಿ ಬೊಂಬು, ಬೈನೆ ಮರದ ತಡಿಕೆಗಳು, ತಂತಿ, ಬಲೆ ಹಾಗೂ ಹುಲ್ಲು ಬಳಸಿ 'ಟ್ರೀ ಹೌಸ್' ಮಾದರಿಯಲ್ಲಿ ತರಗತಿ ಕೋಣೆ ನಿರ್ಮಿಸಿದ್ದಾರೆ. ಮೊಬೈಲ್ ಫೋನ್‌ ಬಳಸಿ ಅವರು ತರಗತಿ ನಡೆಸುತ್ತಾರೆ. 500 ರೂ. ವೆಚ್ಚದ ಮೊಬೈಲ್ ಸ್ಟ್ಯಾಂಡ್ ಮತ್ತು ರೆಕಾರ್ಡರ್ ಖರೀದಿಸಿ ಬೋಧನೆಗೆ ಬಳಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಆಕರ್ಷಿಸುವಂಥ ಚಟುವಟಿಕೆಗಳನ್ನು ಮಾಡಿಸುತ್ತಾರೆ.

ಪಾಠ ಮಾಡಲು 3 ಬಗೆಯ ಕಪ್ಪು ಹಲಗೆಗಳು ಹಾಗೂ ಮನೆಯಲ್ಲಿ ಸಿಗುವ ವಸ್ತುಗಳನ್ನು ಬಳಸುತ್ತಾರೆ. ಪಠ್ಯದ ಜೊತೆಗೆ ಯೋಗಾಸನ, ಒಳಾಂಗಣ ಆಟಗಳು, ಕಥೆ, ಇಂಗ್ಲೀಷ್‌, ಸಾಕು ಪ್ರಾಣಿಗಳ ಮಾಹಿತಿ ನೀಡುತ್ತಾರೆ. ಕೋವಿಡ್ ಲಾಕ್‌ಡೌನ್‌ ಸಮಯದಲ್ಲಿ ಮಕ್ಕಳ ಕಲಿಕೆಗೆ ನೆರವಾಗುತ್ತಿದ್ದಾರೆ.

"ಲಾಕ್‌ಡೌನ್‌ ಸಮಯದಲ್ಲಿ ವಿದ್ಯಾರ್ಥಿಗಳೊಂದಿಗೆ ಕಲಿಕಾ ಸಂಪರ್ಕ ಸಾಧಿಸುವ ಕಾರ್ಯಕ್ರಮ ನಡೆಯುತ್ತಿದೆ. ಸ್ಮಾರ್ಟ್ ಫೋನ್ ಇರುವ ಮಕ್ಕಳಿಗೆ ಆನ್‌ಲೈನ್ ಮೂಲಕ ಬೋಧನೆ, ವಾಟ್ಸಪ್ ಮೂಲಕ ಹೋಮ್‌ವರ್ಕ್‌ ಮಾಡಿಸುತ್ತಾರೆ. ನೆಟ್‌ವರ್ಕ್‌ ಸಮಸ್ಯೆ ಇದ್ದರೆ ಕರೆ ಮಾಡಿ ಮಾಹಿತಿ ನೀಡುತ್ತಾರೆ. ಸತೀಶ್ ಅವರು ನೆಟ್‌ವರ್ಕ್‌ ಸಮಸ್ಯೆಗೆ ಪರಿಹಾರ ಕಂಡುಕೊಂಡಿರುವುದು ವಿಶೇಷವಾಗಿದೆ,'' ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಪಾಂಡು ಹೇಳುತ್ತಾರೆ.

"ರಾಜ್ಯ ಸರ್ಕಾರವು ವಿದ್ಯಾಗಮ ಯೋಜನೆ ಆರಂಭಿಸುವ ಮೊದಲೇ ಅಂತಹ ಕಾರ್ಯಕ್ರಮ ಮುಳ್ಳೂರಿನಲ್ಲಿ ನಡೆಯುತ್ತಿತ್ತು. ರಾಜ್ಯ ಶಿಕ್ಷಣ ಇಲಾಖೆಯ ಆಯುಕ್ತರು ಕೂಡ ಶಿಕ್ಷಕ ಸತೀಶ್ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದರು,'' ಎಂದು ಹಂಡ್ಲಿ ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಟಿ. ಮನೋಹರ್ ಹೇಳಿದರು.

"ಶಿಕ್ಷಕರು ನಮಗೆ ಬೆಳಗಿನ ಅವಧಿಯಲ್ಲಿ ಕಲಿಕಾಂಶದ ಮಾಹಿತಿ ಒಳಗೊಂಡಿರುವ ಕಾರ್ಡ್‌ನ ಫೋಟೋ ಮತ್ತು ಅದನ್ನು ವಿವರಿಸುವ ವಾಯ್ಸ್ ರೆಕಾರ್ಡ್‌ ಕಳುಹಿಸುತ್ತಾರೆ. ಅದನ್ನು ನಾವು ಸಂಜೆವರೆಗೂ ಅಭ್ಯಾಸ ಮಾಡುತ್ತೇವೆ,'' ಎಂದು ವಿದ್ಯಾರ್ಥಿನಿ ಪುಣ್ಯಾ ಹೇಳಿದಳು.

Recommended Video

Schools Reopen | SSLC ವಿದ್ಯಾರ್ಥಿಗಳ ನೆರವಿಗೆ ಬರ್ತಾರಾ ಶಿಕ್ಷಣ ಸಚಿವರು | Oneindia Kannada

ನೆಟ್‌ವರ್ಕ್‌ ಸಿಗುವುದಿಲ್ಲ ಎಂಬ ಒಂದೇ ಕಾರಣ ಮುಂದೊಡ್ಡಿ, ದಿನಗಟ್ಟಲೇ ರಜೆ ಮಾಡಿಕೊಳ್ಳುವ ಶಿಕ್ಷಕರು ಇರುವಾಗ, ಸ್ವಂತ ಹಣ ವೆಚ್ಚ ಮಾಡಿ ತರಗತಿ ನಡೆಸುತ್ತಿರುವ ಶಿಕ್ಷಕ ಸತೀಶ್‌ರವರ ಸೇವೆಗೆ ಗ್ರಾಮಸ್ಥರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.

English summary
The mobile network problem is everywhere in the tourist district Kodagu, especially in the rural areas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X