• search
  • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಡಿಕೇರಿ: ಫೇಸ್ ಬುಕ್ ನಲ್ಲಿ ಸೋನಿಯಾ, ರಾಹುಲ್ ಗಾಂಧಿ ಅವಹೇಳನ

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಜೂನ್ 3: ಯುವತಿಯೊಬ್ಬಳು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರವಾದಿ ಪೈಗಂಬರರ ಬಗ್ಗೆ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಾಕಾರಿ ಪೋಸ್ಟ್ ಮಾಡಿದ್ದಾಳೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಯುವತಿಯನ್ನು ವಿಂದ್ಯಾ ಪೂಣಚ್ಚ ಎಂದು ಗುರುತಿಸಿರುವುದಾಗಿ ದೂರಿನಲ್ಲಿ ತಿಳಿಸಿರುವ ಪಕ್ಷದ ಪ್ರಮುಖರು, ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

ದೇಶ, ರಾಜ್ಯ ಮತ್ತು ಜಿಲ್ಲೆ ಕೊರೊನಾ ವೈರಸ್ ಸೋಂಕಿನ ಆತಂಕವನ್ನು ಎದುರಿಸುತ್ತಾ ಸಂಕಷ್ಟದಲ್ಲಿರುವಾಗ ಶಾಂತಿಯುತ ಸಮಾಜದ ಸ್ವಾಸ್ಥ್ಯ ಕೆಡಿಸುವ ಕಾರ್ಯವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ ಮಂಜುನಾಥ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪಕ್ಷದ ರಾಷ್ಟ್ರೀಯ ನಾಯಕರುಗಳಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಮುಸಲ್ಮಾನರ ಗೌರವಕ್ಕೆ ಪಾತ್ರರಾಗಿರುವ ಪ್ರವಾದಿ ಪೈಗಂಬರ್ ರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಗೌರವದಿಂದ ನಡೆದುಕೊಂಡಿರುವುದು ಖಂಡನೀಯವೆಂದರು. ತಕ್ಷಣ ತಪ್ಪಿತಸ್ಥರ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

English summary
The Kodagu District Congress Committee has lodged a complaint at Kushalanagar police station alleging that a young woman made a derogatory post on her Facebook account.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X