Madras Eye; ಭಯಬೇಡ, ಇರಲಿ ಮುನ್ನೆಚ್ಚರ
ಮಡಿಕೇರಿ, ಆಗಸ್ಟ್ 06; ಮದ್ರಾಸ್ ಐ ಎಂದು ಬಳಕೆಯಲ್ಲಿರುವ conjunctivitis ಒಂದು ವೈರಸ್‍ನಿಂದ ಹರಡುವ ಕಾಯಿಲೆ. ಈ ಬಗ್ಗೆ ಭಯ ಬೇಡ ಮುನ್ನೆಚ್ಚರಿಕೆ ಇರಲಿ ಎಂದು ಕೊಡಗು ಅಂಧತ್ವ ನಿಯಂತ್ರಣ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಎನ್. ಆನಂದ್ ಹೇಳಿದ್ದಾರೆ.
ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ) ಇದಕ್ಕೆ ಕಂಜಕ್ಟವೈಟೀಸ್ ಎನ್ನುತ್ತಾರೆ. ಇದು ಹೆಚ್ಚಾಗಿ ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ ವ್ಯಕ್ತಿಯ ಕಣ್ಣಿನಿಂದ ಬರುವ ದ್ರವದ ಸಂಪರ್ಕದಿಂದ ಆರೋಗ್ಯವಂತ ವ್ಯಕ್ತಿಗೆ ಇದು ಹರಡುತ್ತದೆ.

ತಡೆಗಟ್ಟುವುದು ಹೇಗೆ?; ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದರಿಂದ ಬೇರೆಯವರಿಗೆ ಸೋಂಕು ಹರಡುವುದನ್ನು ತಡೆಗಟ್ಟಬಹುದು. ಹೆಚ್ಚು ಜನಸಂದಣಿ ಇರುವ ಪ್ರದೇಶಗಳಲ್ಲಿ ಇದು ಕಂಡು ಬರುತ್ತದೆ. ವಿಶೇಷವಾಗಿ ಶಾಲಾ-ಕಾಲೇಜು, ವಸತಿ ನಿಲಯಗಳಲ್ಲಿ ಮತ್ತು ಅತಿಥಿ ಗೃಹಗಳಲ್ಲಿ (ಪಿಜಿ) ಈ ಸೋಂಕು ಬೇಗ ಹರಡುವ ಸಾಧ್ಯತೆ ಹೆಚ್ಚು. 3 ರಿಂದ 5 ದಿನಗಳಲ್ಲಿ ಗುಣ ಮುಖವಾಗುತ್ತದೆ. ಎಲ್ಲಾ ವಯಸ್ಸಿನವರಲ್ಲಿ ಈ ಸೋಂಕು ಕಂಡು ಬರುತ್ತದೆ.
ಸೋಂಕಿನ ಲಕ್ಷಣಗಳು: ಕಣ್ಣು ಕೆಂಪಾಗುವಿಕೆ, ನೀರು ಸೋರುವಿಕೆ, ಅತಿಯಾದ ಕಣ್ಣೀರು, ಕಣ್ಣಿನಲ್ಲಿ ತುರಿಕೆ, ಸತತ ಕಣ್ಣು ನೋವು ಹಾಗೂ ಚುಚ್ಚುವಿಕೆ, ಬೆಳಕನ್ನು ನೋಡಲು ಸಾಧ್ಯವಾಗದಿರುವುದು, ದೃಷ್ಠಿ ಮುಸಕಾಗುವುದು/ ಮಂಜಾಗುವುದು, ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತ ದ್ರವದಿಂದ ಅಂಟಿರುವುದು, ರೆಪ್ಪೆ ಊದಿಕೊಳ್ಳುವುದು, ಈ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಬೇಕು.
ಶುಚಿಯಾದ ಒದ್ದೆ ಮಾಡಿದ ಬಟ್ಟೆ ಅಥವಾ ಹತ್ತಿಯ ಉಂಡೆಗಳಿಂದ ಉಗುರು ಬೆಚ್ಚಗಿನ ನೀರಿನಿಂದ ಕಣ್ಣುಗಳನ್ನು ಸ್ವಚ್ಚಗೊಳಿಸುವುದು, ವೈದ್ಯರ ಸಲಹೆ ಮೇರೆಗೆ ಔಷಧಿಗಳನ್ನು ಬಳಸುವುದು, ಶಾಲಾ ವಿದ್ಯಾರ್ಥಿ/ ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಸೋಂಕು ಕಂಡು ಬಂದಲ್ಲಿ ಅವರನ್ನು ಶಾಲೆಯಿಂದ ಪ್ರತ್ಯೇಕಿಸಿ ಚಿಕಿತ್ಸೆ ನೀಡುವುದು. ಸೋಂಕಿತ ವ್ಯಕ್ತಿಯು ಬಳಸಿದ ಕರವಸ್ತ್ರ ಹಾಗೂ ಇತರೆ ವಸ್ತುಗಳನ್ನು ಬೇರೆಯವರು ಬಳಸಬಾರದು. ಪದೇ ಪದೇ ಕಣ್ಣುಗಳನ್ನು ಮುಟ್ಟಬಾರದು. ಸೋಂಕಿತ ವ್ಯಕ್ತಿಗಳು ಕಪ್ಪು ಕನ್ನಡಕ ಬಳಸುವುದು ಉತ್ತಮ.
ಮುಂಜಾಗ್ರತಾ ಕ್ರಮಗಳು: ವೈಯಕ್ತಿಕ ಸ್ವಚ್ಚತೆಗೆ ಆದ್ಯತೆ ಕೊಡಿ, ಆರೋಗ್ಯವಂತ ವ್ಯಕ್ತಿಯು ಸೋಂಕುಳ್ಳ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರಬೇಕು. ಆಗಾಗ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು. ಸೋಂಕಿತ ವ್ಯಕ್ತಿಗಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ತಕ್ಷಣವೇ ಚಿಕಿತ್ಸೆ ಪಡೆಯಬೇಕು. ತೀವ್ರತರದ ಸೋಂಕು ಉಂಟಾದಲ್ಲಿ ತಕ್ಷಣವೇ ನೇತ್ರ ತಜ್ಞರಿಂದ ಚಿಕಿತ್ಸೆ ಪಡೆಯಬೇಕು.
ಸ್ವಚ್ಚವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಬೇಕು. ಸೋಂಕು ಕಂಡುಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ/ ಸಲಹೆ ಪಡೆಯಿರಿ, ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ನೀಡಿರಿ, ಸೋಂಕಿತ ವ್ಯಕ್ತಿಗಳು ಬಳಸಿದ ಕೈವಸ್ತ್ರ/ ಟವಲ್ ಇನ್ನಿತರ ವಸ್ತುಗಳನ್ನು ಸಂಸ್ಕರಿಸಿ ಬಳಸಬೇಕು.
ಸೋಂಕಿತರು ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬೇಡಿ, ಸ್ವಯಂ ಚಿಕಿತ್ಸೆ ವಿಧಾನಗಳನ್ನು ಮಾಡಬಾರದು, ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಬೇಕು. ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬಾರದು.
ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಅಥವಾ ಉಚಿತ ಆರೋಗ್ಯ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದು.
-
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications