Kodagu: ಫೆಬ್ರವರಿ 2ರಿಂದ ಕೊಡಗಿನಲ್ಲಿ ಕಾಲ್ನಡಿಗೆ ಜಾಥಾ: ಯಾಕೆ ಗೊತ್ತಾ?
ಮಡಿಕೇರಿ, ಜನವರಿ 21: ಕೊಡಗಿನ ಮೂಲ ನಿವಾಸಿಗಳಾದ ಕೊಡವರು ಹಾಗೂ ಕೊಡವ ಸಂಸ್ಕೃತಿಗೆ ಒಳಪಟ್ಟ ಇತರ ಜನಾಂಗಗಳ ಮೇಲೆ ಕಳೆದ ಹಲವು ದಶಕಗಳಿಂದ ನಿರಂತರವಾಗಿ ನಡೆಯುತ್ತಿರುವ ಜನಾಂಗೀಯ ನಿಂದನೆ, ಜನಾಂಗೀಯ ತಾರತಮ್ಯ ಹಾಗೂ ಸಾಮಾಜಿಕ ದೌರ್ಜನ್ಯದ ವಿರುದ್ಧ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆಬ್ರವರಿ 2ರಿಂದ 7ರವರೆಗೆ ಬ್ರಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಮನು ಕುಮಾರ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳ ಸಭೆಯಲ್ಲಿ ಒಮ್ಮತದ ತಿರ್ಮಾನ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ಅಖಿಲ ಕೊಡವ ಸಮಾಜದ ಅಧ್ಯಕ್ಷರು ಸೇರಿದಂತೆ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆಗಳ ಪ್ರಮುಖರು ಭಾಗಿಯಾಗಿ ಕೊಡವ ಸಂಸ್ಕೃತಿಗೆ ಒಳಪಟ್ಟ ಎಲ್ಲಾ ಜನಾಂಗಗಳ ಸಹಕಾರದೊಂದಿಗೆ ದಕ್ಷಿಣ ಕೊಡಗಿನ ಗಡಿಭಾಗವಾದ ಕುಟ್ಟಾದಿಂದ ಜಿಲ್ಲಾಕೇಂದ್ರ ಮಡಿಕೇರಿಯವರೆಗೆ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.

ಸಭೆಯಲ್ಲಿ ಕೊಡವರನ್ನು ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೂಲೆಗುಂಪು ಮಾಡುವ ಷಡ್ಯಂತ್ರ ಈ ಪಟ್ಟಭದ್ರ ಹಿತಾಸಕ್ತಿಗಳಿಂದ ನಿರಂತರವಾಗಿ ನಡೆಯುತ್ತಾ ಬರುತ್ತಿದೆ, ಇದೀಗ ಕೊಡವರ ಪಾರಂಪರಿಕ ಉಡುಗೆ ತೊಡುಗೆಗಳನ್ನು ಹಾಗೂ ಆಚರಣೆಗಳನ್ನು ನಿರ್ಬಂಧಿಸುವ ಮಟ್ಟಕ್ಕೆ ಕೆಲವು ಕಿಡಿಗೇಡಿಗಳು ಬಂದಿರುವುದು ಇತ್ತೀಚಿನ ಕೆಲವು ಘಟನೆಗಳಿಂದ ಸಾಭಿತಾಗಿದೆ, ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಕೆಲವು ವರ್ಷಗಳಿಂದ ತಲಕಾವೇರಿಯಲ್ಲಿ ಕೊಡವರ ಹಕ್ಕುಗಳನ್ನು ಉದ್ದೇಶಪೂರ್ವಕವಾಗಿ ಕಸಿದುಕೊಳ್ಳಲು ಹುನ್ನಾರ ನಡೆಯುತ್ತಲೆ ಬಂದಿದೆ.
ಕೊಡವರ ಅಸ್ತಿತ್ವ ನಾಶ ಮಾಡುವ ಹುನ್ನಾರ
ತಲತಲಾಂತರದಿಂದ ತಲಕಾವೇರಿಯಲ್ಲಿ ಕೊಡವ ಸಾಂಪ್ರದಾಯಿಕ ಉಡುಗೆಯಲ್ಲಿ ದುಡಿಕೊಟ್ಟ್ ಪಾಟ್'ನೊಂದಿಗೆ ಕಾವೇರಿ ತೀರ್ಥೋದ್ಭವಕ್ಕೆ ಹೋಗುವುದು ವಾಡಿಕೆಯಾಗಿತ್ತು. ಆದರೆ ಇತ್ತೀಚಿನ ಕೆಲವು ವರ್ಷಗಳಿಂದ ಕಾವೇರಿಗೆ ಕೊಡವರು ತಮ್ಮ ಸಾಂಪ್ರದಾಯಿಕ ಉಡುಗೆ, ಹಾಗೂ ಸಾಂಪ್ರದಾಯಿಕ ಆಚರಣೆಗಳಾದ ದುಡಿಕೊಟ್ಟ್ ಪಾಟ್, ಪತ್ತಾಯಕ್ಕೆ ಅಕ್ಕಿ ಹಾಕುವುದು, ತೀರ್ಥ ಕುಂಡಿಕೆ ಸುತ್ತ ತಳಿಯತಕ್ಕಿ ದೀಪ ಹಿಡಿದು ಕಾವೇರಿ ಮಾತೆಯ ತೀರ್ಥೋದ್ಭವವನ್ನು ಸ್ವಾಗತಿಸುವುದು ಹಾಗೂ ಕೊಡವರು ಮಾಡುತ್ತಿರುವ ಅನ್ನದಾನವನ್ನು ಕೂಡ ನಿರ್ಬಂಧಿಸುವ ಪ್ರಯತ್ನ ನಿರಂತರ ನಡೆದಿದೆ. ಇದು ಕೊಡವರ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಭಾವನೆಗೆ ತೀವ್ರ ಧಕ್ಕೆಯಾಗಿದೆ ಎಂದು ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದರು.
ಕೊಡವ ಸಾಂಪ್ರದಾಯಿಕ ಉಡುಗೆ ತೊಡುಗೆಗಳು, ಆಭರಣಗಳು, ಜಾನಪದ ಕಲೆಗಳು ಸೇರಿದಂತೆ ಕೊಡವ ಸಂಸ್ಕೃತಿಯ ಆಚರಣೆಗಳನ್ನು ನಿಕೃಷ್ಟವಾಗಿ ನಕಲು ಮಾಡಿ ಕೊಡವ ಸಂಸ್ಕೃತಿಯನ್ನು ಅವಮಾನಿಸುತಲೇ ಬಂದಿರುವುದು ಅತ್ಯಂತ ಹೇಯ ಕೃತ್ಯವಾಗಿದೆ, ಇದೆಲ್ಲಾವು ಕೊಡವರ ಅಸ್ತಿತ್ವವನ್ನು ನಾಶ ಮಾಡುವ ಹುನ್ನಾರವಾಗಿದ್ದು, ಇದು ಸ್ಪಷ್ಟವಾಗಿ ಮಾನವ ಹಕ್ಕಿನ ಉಲ್ಲಂಘನೆ ಆಗಿದೆ ಎಂದು ಸಭೆ ಅಭಿಪ್ರಾಯ ಪಟ್ಟಿತು. ಹಾಗೆ ದೇಶವೇ ಹೆಮ್ಮೆ ಪಡುವ ವೀರ ಸೇನಾನಿಗಳಾದ ಫಿ.ಮಾ ಕಾರ್ಯಪ್ಪ ಹಾಗೂ ಜ. ತಿಮ್ಮಯ್ಯ ಅವರು ಕೊಡವರು ಎಂಬ ಕಾರಣಕ್ಕೆ ಅವರನ್ನು ಅವಮಾನಿಸಲಾಗಿದೆ.

ಕೊಡವ ಸಂಸ್ಕೃತಿ ಹಕ್ಕಿನ ರಕ್ಷಣೆಗೆ ಹೋರಾಟ
ಇನ್ನು ಕೊಡವರ ತಲೆತಲಾಂತರದ ಸಂಸ್ಕೃತಿಯಾದ ಕೋವಿಯ ಹಕ್ಕನ್ನು ಕೂಡ ಪ್ರಶ್ನಿಸಿ ಗೊಂದಲ ಸೃಷ್ಟಿಸುವ ಕೆಲಸ ನಡೆದಿದೆ. ಇತ್ತಿಚೆಗೆ ಕಟ್ಟೆಮಾಡು ಮಹಾದೇವರ ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಸಾಂಪ್ರದಾಯಿಕ ಉಡುಪಿನಲ್ಲಿದ್ದ ಕೊಡವರು ಹಾಗೂ ಕೊಡವ ಭಾಷಿಕ ಸಮುದಾಯದ ಪುರುಷರು, ಮಹಿಳೆಯರು ಹಾಗೂ ಮಕ್ಕಳನ್ನು ದೇವಸ್ಥಾನದ ಒಳಗೆ ಬಿಡದಂತೆ ನಿರ್ಬಂಧ ಹೇರಿರುವವುದರ ಜೊತೆಗೆ ಕುಪ್ಯಚೇಲೆ ಹಾಕಿದ ಕೊಡವರ ಮೇಲೆ ಹಲ್ಲೆ ಮಾಡುವ ಮೂಲಕ ಭಯಭೀತವಾದ ವಾತಾವರಣವನ್ನು ಸೃಷ್ಟಿಸಿ ಅಲ್ಪ ಸಂಖ್ಯಾತರಾದ ಕೊಡವರಿಗೆ ಅಭದ್ರತೆಯನ್ನು ಸೃಷ್ಟಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ಇಷ್ಟೆಲ್ಲಾ ಕೃತ್ಯಗಳು ನಡೆದಿದ್ದರೂ ಕಿಡಿಗೇಡಿಗಳ ವಿರುದ್ಧ ಇದುವರೆಗೆ ಯಾವುದೇ ಕಾನೂನು ಕ್ರಮ ಕೈಗೊಂಡಿರುವುದಿಲ್ಲ. ಕೆಲವರು ತಮ್ಮ ರಾಜಕೀಯ ಪ್ರಭಾವವನ್ನು ಬಳಸಿ ಕೊಡವರನ್ನೇ ತಪ್ಪಿತಸ್ಥ ಸ್ಥಾನದಲ್ಲಿ ನಿಲ್ಲಿಸಲು ಎಲ್ಲಾ ಕುತಂತ್ರಗಳನ್ನು ಹೆಣೆಯುತ್ತಿರುವುದು ನೋಡಿದಾಗ ಈ ವ್ಯವಸ್ಥೆಯಲ್ಲಿ ಕೊಡವರಿಗೆ ಭದ್ರತೆ ಇಲ್ಲ ಎಂಬ ಭಾವನೆ ಉಂಟು ಮಾಡಿದೆ.
ಇದು ಮಾತ್ರವಲ್ಲದೆ ಹಲವಾರು ಘಟನೆಗಳು ಕೊಡವ ಹಾಗೂ ಕೊಡವ ಸಂಸ್ಕೃತಿಯ ಮೇಲೆ ಜನಾಂಗೀಯ ದೌರ್ಜನ್ಯ ಮತ್ತು ಜನಾಂಗೀಯ ತಾರತಮ್ಯಕ್ಕೆ ಸಾಕ್ಷಿಯಾಗಿದೆ. ಈ ನಿಟ್ಟಿನಲ್ಲಿ ಕೊಡವ ಸಂಸ್ಕೃತಿ ಹಾಗೂ ಸಾಂಪ್ರದಾಯಿಕ ಹಕ್ಕಿನ ರಕ್ಷಣೆಯ ಹಿನ್ನೆಲೆಯಲ್ಲಿ ಕೊಡವ ಸಂಸ್ಕೃತಿ ಅಡಿಯಲ್ಲಿ ಬದುಕು ಸಾಗಿಸುತ್ತಿರುವ ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ತಮಗಾಗಿರುವ ಅನ್ಯಾಯದ ವಿರುದ್ಧ ಬ್ರಹತ್ ಪಾದಯಾತ್ರೆಯನ್ನು ನಡೆಸಲು ಸಭೆ ಒಮ್ಮತದ ತಿರ್ಮಾನ ಕೈಗೊಳ್ಳಲಾಯಿತು ಎಂದು ಪ್ರಮುಖರು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications