ಕೊಡಗಿನಲ್ಲಿ ಅಪ್ರಾಪ್ತ ಬಾಲಕನಿಂದ ಅತ್ಯಾಚಾರ ಯತ್ನ

ಮಡಿಕೇರಿ, ನವೆಂಬರ್ 17: ಅಂಗನವಾಡಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಕಾರ್ಯಕರ್ತೆ ಮೇಲೆ ಅಪ್ರಾಪ್ತ ವಯಸ್ಸಿನ ಹುಡುಗನೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ದಕ್ಷಿಣ ಕೊಡಗಿನ ಶ್ರೀಮಂಗಲ ಸಮೀಪದ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಶ್ರೀಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವೆಸ್ಟ್ ನೆಮ್ಮಲೆ ಗ್ರಾಮದ ಬೆಳೆಗಾರರೊಬ್ಬರ ಮನೆಯಲ್ಲಿ ವಾಸವಿದ್ದ 17 ವರ್ಷ ವಯಸ್ಸಿನ ಹುಡುಗ ಬಂಧಿತನಾಗಿದ್ದು, ಈತನ ವಿರುದ್ಧ ಐಪಿಸಿ 354 ಕಾಯ್ದೆ ಯಡಿ ಪ್ರಕರಣ ದಾಖಲಿಸಿಕೊಂಡು ಮಡಿಕೇರಿಯ ರಿಮ್ಯಾಂಡ್ ಹೋಂಗೆ ಸೇರಿಸಲಾಗಿದೆ.

Minor boy who tries to rape a woman detained by police in Madikeri

ಆರೋಪಿ ಬಾಲಕ ಬಹಳ ದಿನಗಳಿಂದ ಕೃತ್ಯ ಎಸಗಲು ಹೊಂಚುಹಾಕುತ್ತಿದ್ದ. ಕಾರ್ಯಕರ್ತೆ ಬರುವ ಸಮಯವನ್ನು ನೋಡಿಕೊಂಡು ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಭಯದಿಂದ ಕಿರುಚಿಕೊಂಡಾಗ ಹೆದರಿದ ಆತ ಆಕೆಯನ್ನು ತಳ್ಳಿದ ಪರಿಣಾಮ ಸೊಂಟದ ಭಾಗಕ್ಕೆ ಗಾಯವಾಗಿದೆ. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ಕಲೆಹಾಕಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷವಷ್ಟೆ ಇದೇ ಊರಿನಲ್ಲಿ ಅತಿಥಿ ಶಿಕ್ಷಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಘಟನೆ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+