ಕೊಡಗಿನಲ್ಲಿ ಅಸುರಕ್ಷಿತ ಆಹಾರ ಮಾರಾಟ: ಕೂಡಲೇ ಕ್ರಮಕ್ಕೆ ಸೂಚನೆ
ಕೊಡಗು, ನವೆಂಬರ್ 06: ಸಾರ್ವಜನಿಕರ ದೂರು ಮತ್ತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳ ಆಧಾರದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಕ್ರಮದ ಅನುಷ್ಠಾನಕ್ಕೆ ಕೊಡಗು ಜಿಲ್ಲೆ ಹಾಗೂ ಮಡಿಕೇರಿ ಅಧಿಕಾರಿಗಳೊಂದಿಗೆ ವಿಧಾನಸೌಧ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಗಿದೆ.
ಕೊಡಗು ಜಿಲ್ಲೆ ಹಾಗೂ ಕೇರಳ ಜಿಲ್ಲೆ ಗಡಿ ಭಾಗವಾದ ಕುಟ್ಟ, ಮಾಕುಟ್ಟ ಮತ್ತು ಪೆರುಂಬಾಡಿ ವ್ಯಾಪ್ತಿಯಲ್ಲಿ ಕೇರಳದ ಆಹಾರ ಪದಾರ್ಥಗಳು ಸರಬರಾಜುವಾಗುತ್ತಿದ್ದು. ಆಹಾರ ಪದಾರ್ಥಗಳಲ್ಲಿ ತಯಾರಿಕಾ ದಿನಾಂಕ ಹಾಗೂ ತಯಾರಿಕೆ ಮಾಡುವವರ ವಿವರ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಸೇರಿಸಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 90 ಆಹಾರ ಪದಾರ್ಥಗಳನ್ನು ವಿಶ್ಲೇಷಣಿಗಾಗಿ (IADFAC) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಪ್ರಯೋಗಾಲದ ವರದಿಗಳಲ್ಲಿ 31 ಆಹಾರ ಮಾದರಿಗಳು ಅಸುರಕ್ಷಿತವೆಂದು, 4 ಆಹಾರ ಮಾದರಿಯಲ್ಲಿ ಕಡಿಮೆ ಗುಣಮಟ್ಟವಿದೆ ಎಂದು ದೃಢವಾಗಿರುತ್ತದೆ ಎಂದು ಅಧಿಕಾರಿಗಳು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ರವರಿಗೆ ವಿವರಿಸಿದರು.
ಇದು ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದ ಶಾಸಕರಾದ ಎ.ಎಸ್ ಪೊನ್ನಣ್ಣ ಕೂಡಲೇ ಅಸುರಕ್ಷಿತವಾದ ಆಹಾರ ಪದಾರ್ಥಗಳನ್ನು ನಿಷೇಧಿಸಿ, ಹಾಗೂ ಅಂತಹ ಆಹಾರ ಪದಾರ್ಥಗಳನ್ನು ಮಾರಟ ಮಾಡದಂತೆ ತಡೆಯಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಕೊಡಗು ಜಿಲ್ಲೆ ಮಡಿಕೇರಿ ಅಂಕಿತಾಧಿಕಾರಿಗಳಾದ ಡಾ.ಅನಿಲ್ ದಾವನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.












Click it and Unblock the Notifications