ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಷತ್ ಚುನಾವಣೆ; ನಾಮಪತ್ರ ವಾಪಸ್ ಪಡೆದ ಜೆಡಿಎಸ್ ಅಭ್ಯರ್ಥಿ!

|
Google Oneindia Kannada News

ಮಡಿಕೇರಿ, ನವೆಂಬರ್ 26; ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ 7 ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು, ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. ಆದರೆ ಕೊಡಗು ಸ್ಥಳೀಯ ಸಂಸ್ಥೆಗಳಿಂದ ನಾಮಪತ್ರ ಸಲ್ಲಿಸಿದ್ದ ಜೆಡಿಎಸ್ ಅಭ್ಯರ್ಥಿ ಶುಕ್ರವಾರ ನಾಮಪತ್ರ ವಾಪಸ್ ಪಡೆದಿದ್ದಾರೆ.

ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರವನ್ನು ವಾಪಸ್ ಪಡೆಯಲು ಶುಕ್ರವಾರ ಕೊನೆ ದಿನವಾಗಿತ್ತು. ಕೊಡಗು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್. ಯು. ಇಸಾಕ್ ಖಾನ್ ನಾಮಪತ್ರವನ್ನು ವಾಪಸ್ ಪಡೆದರು.

ಪರಿಷತ್; ರಾತ್ರೋರಾತ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜೆಡಿಎಸ್ ಅಭ್ಯರ್ಥಿ! ಪರಿಷತ್; ರಾತ್ರೋರಾತ್ರಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಜೆಡಿಎಸ್ ಅಭ್ಯರ್ಥಿ!

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ. ಎಂ. ಗಣೇಶ್‌ ಈ ಕುರಿತು ಮಾಹಿತಿ ನೀಡಿದ್ದಾರೆ. "ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಅವಕಾಶ ಕಲ್ಪಿಸಬಾರದು ಎನ್ನುವ ಏಕೈಕ ಉದ್ದೇಶದಿಂದ ಇಸಾಕ್ ಖಾನ್ ಅವರಿಗೆ ನಾಮಪತ್ರ ಹಿಂಪಡೆಯುವಂತೆ ಸೂಚನೆ ನೀಡಲಾಗಿತ್ತು" ಎಂದು ಸ್ಪಷ್ಟಪಡಿಸಿದರು.

ಪರಿಷತ್ ಚುನಾವಣೆ: ಕೈ- ಕಮಲ ನಾಯಕರಿಗೆ ಸಂಸದೆ ಸುಮಲತಾ ರವಾನಿಸಿದ ಸಂದೇಶವೇನು?ಪರಿಷತ್ ಚುನಾವಣೆ: ಕೈ- ಕಮಲ ನಾಯಕರಿಗೆ ಸಂಸದೆ ಸುಮಲತಾ ರವಾನಿಸಿದ ಸಂದೇಶವೇನು?

Isac Khan

"ಚುನಾವಣೆಯಲ್ಲಿ ಸ್ಪರ್ಧಿಸಿದರೆ ಬಿಜೆಪಿಗೆ ಲಾಭವಾಗಲಿದೆ. ಕಾಂಗ್ರೆಸ್ ಕೂಡಾ ಹಣ ಪಡೆದು ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಿದೆ ಎಂದು ಅಪಪ್ರಚಾರ ಮಾಡುತ್ತಿದೆ. ಆದ್ದರಿಂದ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ" ಎಂದು ಕೆ. ಎಂ. ಗಣೇಶ್ ಹೇಳಿದರು.

ಪರಿಷತ್ ಚುನಾವಣೆ; ಒಳ ಒಪ್ಪಂದದ ರಹಸ್ಯ ಬಿಚ್ಚಿಟ್ಟ ಎಚ್‌ಡಿಕೆ ಪರಿಷತ್ ಚುನಾವಣೆ; ಒಳ ಒಪ್ಪಂದದ ರಹಸ್ಯ ಬಿಚ್ಚಿಟ್ಟ ಎಚ್‌ಡಿಕೆ

ಜೆಡಿಎಸ್ ಅಭ್ಯರ್ಥಿ ಹೆಚ್. ಯು. ಇಸಾಕ್ ಖಾನ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಕಣದಲ್ಲಿ ಬಿಜೆಪಿಯ ಸುಜಾ ಕುಶಾಲಪ್ಪ, ಕಾಂಗ್ರೆಸ್‌ನ ಮಂತರ್ ಗೌಡ ಕಣದಲ್ಲಿ ಉಳಿದಿದ್ದಾರೆ. ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ, ಡಿ.14ರಂದು ಫಲಿತಾಂಶ ಪ್ರಕಟವಾಗಲಿದೆ.

ಹೈಕಮಾಂಡ್ ಸೂಚನೆ; ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಕೊಡಗು ಕ್ಷೇತ್ರದಿಂದ ಅಲ್ಪ ಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯವಿತ್ತು.

ಹೈಕಮಾಂಡ್ ಸಹ ಇದಕ್ಕೆ ಒಪ್ಪಿಗೆ ನೀಡಿತ್ತು. ಹೆಚ್. ಯು. ಇಸಾಕ್ ಖಾನ್ ಅಭ್ಯರ್ಥಿಯಾಗಿದ್ದರು. ಇದೀಗ ಟೀಕೆ ಮತ್ತು ಅಪಪ್ರಚಾರದ ಹಿನ್ನಲೆಯಲ್ಲಿ ನಾಮಪತ್ರ ವಾಪಸ್ ಪಡೆಯುವಂತೆ ಹೈಕಮಾಂಡ್ ಸೂಚನೆ ನೀಡಿದ್ದರಿಂದ ಹೆಚ್. ಯು. ಇಸಾಕ್ ಖಾನ್ ನಾಮಪತ್ರ ವಾಪಸ್ ಪಡೆದಿದ್ದಾರೆ.

ನಾಮಪತ್ರ ವಾಪಸ್ ಪಡೆದರೂ ಸಹ ಕ್ಷೇತ್ರದಲ್ಲಿ ಜೆಡಿಎಸ್ ಯಾವ ಪಕ್ಷವನ್ನು ಸಹ ಬೆಂಬಲಿಸುವುದಿಲ್ಲ, ತಟಸ್ಥವಾಗಿ ಉಳಿಯಲಿದೆ. ಒಟ್ಟು 25 ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.

ನಾಮಪತ್ರ ವಾಪಸ್ ಪಡೆದ ಬಳಿಕ ಮಾತನಾಡಿದ ಹೆಚ್. ಯು. ಇಸಾಕ್ ಖಾನ್, "ಎಚ್. ಡಿ. ಕುಮಾರಸ್ವಾಮಿ ಮತ್ತು ಸಂಸದ ಪ್ರಜ್ವಲ್ ರೇವಣ್ಣ ದೂರವಾಣಿ ಮೂಲಕ ಮಾತುಕತೆ ನಡೆಸಿ ನಾಮಪತ್ರ ವಾಪಸ್ ಪಡೆಯುವಂತೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಉನ್ನತ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ. ಅವರ ಮಾತು ತೃಪ್ತಿ ತಂದಿದ್ದು, ನಾಮಪತ್ರ ವಾಪಸ್ ಪಡೆದಿದ್ದೇನೆ" ಎಂದರು.

ಪರಿಷತ್ ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ರಾಜ್ಯಾದ್ಯಂತ 20 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದು, ಚುನಾವಣಾ ಚಿತ್ರಣ ಅಂತಿಮಗೊಂಡಿದೆ.

ದಕ್ಷಿಣ ಕನ್ನಡ 4, ಶಿವಮೊಗ್ಗ 2, ಬೆಳಗಾವಿ 3, ಬಿಜಾಪುರ 4, ಧಾರವಾಡ 1, ತುಮಕೂರು 1, ಬೆಂಗಳೂರು 1, ರಾಯಚೂರು 1, ಉತ್ತರ ಕನ್ನಡ 1, ಮೈಸೂರು 1, ಕೊಡಗು ಒಬ್ಬ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ.

Recommended Video

ಚಳಿಗಾಲದಲ್ಲಿ ಕೊರೊನಾ 3 ನೇ ಅಲೆ ಅಪ್ಪಳಿಸೋದು ಗ್ಯಾರೆಂಟಿ | Oneindia Kannada

ಯಡೂರಪ್ಪ ನಾಮಪತ್ರ ವಾಪಸ್; ಮೈಸೂರು-ಚಾಮರಾಜನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ 67 ವರ್ಷದ ಪಿ. ಎಸ್.‌ ಯಡೂರಪ್ಪ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ. ಪಿರಿಯಾಪಟ್ಟಣದ ನಿವಾಸಿ ಯಡೂರಪ್ಪ ನಾಮಪತ್ರ ಸಲ್ಲಿಸಿವಾಗ 33 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ಅಫಿಡೆವಿಟ್ ಸಲ್ಲಿಕೆ ಮಾಡಿದ್ದರು.

English summary
Kodagu seat legislative council JD(S) candidate Isac Khan has withdrawn his nomination. Election will be held on December 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X