ಮುಂಗಾರು ಮಳೆ: ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸಲು ಸೂಚನೆ
ಮಡಿಕೇರಿ, ಮೇ 26: ನೈಋತ್ಯ ಮುಂಗಾರು ಕೇರಳ ಪ್ರವೇಶ ಮಾಡಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಪ್ರಾರಂಭವಾಗಿದೆ. 2025ನೇ ಸಾಲಿನ ಮುಂಗಾರು ಮಳೆ ಸಂದರ್ಭದಲ್ಲಿ ಮಡಿಕೇರಿ ನಗರದಲ್ಲಿ ಹೆಚ್ಚಿನ ಎಚ್ಚರ ವಹಿಸುವಂತೆ ಶಾಸಕ ಡಾ. ಮಂತರ್ ಗೌಡ ಅವರು ಸಲಹೆ ಮಾಡಿದ್ದಾರೆ. ಮಡಿಕೇರಿ ತಾಲ್ಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 376.33 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 353.72 ಮಿ. ಮೀ. ಮಳೆಯಾಗಿತ್ತು.
ಮಡಿಕೇರಿ ನಗರಸಭೆ ಸಭಾಂಗಣದಲ್ಲಿ ಶಾಸಕರು ಸಭೆಯನ್ನು ನಡೆಸಿದರು. ನಗರದ ವಿವಿಧ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಸಂದರ್ಭದಲ್ಲಿ ಕಾಳಜಿ ವಹಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ಮುನ್ನೆಚ್ಚರ ವಹಿಸಬೇಕು ಎಂದು ಸೂಚನೆಗಳನ್ನು ನೀಡಿದರು.

ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಬೇಕು. ರಾಜ ಕಾಲುವೆಯಲ್ಲಿ ಕಸ ಕಡ್ಡಿ ಸೇರದಂತೆ ಸ್ವಚ್ಚಗೊಳಿಸಬೇಕು. ಸಹಾಯವಾಣಿಯ ಆರಂಭ ಸೇರಿದಂತೆ ಮುಂಗಾರು ಸಂಬಂಧ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಳೆಗಾಳದ ಸಂದರ್ಭದಲ್ಲಿ ತುರ್ತಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತಾಗಬೇಕು. ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ರಾಜಾಸೀಟು ಮತ್ತು ಜನರಲ್ ತಿಮ್ಮಯ್ಯ ಮುಖ್ಯರಸ್ತೆ ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಆ ನಿಟ್ಟಿನಲ್ಲಿ ಪಾದಚಾರಿ ದಾರಿ, ಚರಂಡಿ, ವಾಹನಗಳ ಪಾರ್ಕಿಂಗ್ ಹೀಗೆ ಎಲ್ಲವನ್ನೂ ಒಳಗೊಂಡ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯೂ ಉತ್ತಮವಾಗಿ ಸುರಿದಿದೆ. ಜನವರಿಯಿಂದ ಇಲ್ಲಿಯವರೆಗೆ ಸುರಿದ ಮಳೆ 215.97 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 248.57 ಮಿ. ಮೀ. ಮಳೆಯಾಗಿತ್ತು. ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2831.97 ಅಡಿಗಳು. ಒಳಹರಿವು 231 ಕ್ಯುಸೆಕ್.
ಇಂಧನ ಇಲಾಖೆಯ ಸಿದ್ಧತೆ: ಮುಂಗಾರು ಮಳೆ ಆರಂಭವಾಗುವ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಇಂಧನ ಇಲಾಖೆ ಸಹ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಂಗಾರು ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಹೆಚ್ಚಿನ ಮಳೆಯಾಗುವ ಹಿನ್ನೆಲೆ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕಕ್ಕೆ ಹಾನಿಯಾಗಲಿದೆ. ಆದ್ದರಿಂದ ಆಯಾಯ ಸಂದರ್ಭದಲ್ಲಿಯೇ ವಿದ್ಯುತ್ ಕಂಬ ಹಾಗೂ ಪರಿವರ್ತಕರಗಳ ಬದಲಾವಣೆಗೆ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಕಳೆದ ಬಾರಿ ಮುಂಗಾರು ಅವಧಿಯಲ್ಲಿ 4 ಸಾವಿರಕ್ಕೂ ಹೆಚ್ಚು ಕಂಬಗಳಿಗೆ ಹಾನಿಯಾಗಿತ್ತು, ಹಾಗೆಯೇ ಹಲವು ವಿದ್ಯುತ್ ಪರಿವರ್ತಕಗಳು ಹಾನಿಯಾಗಿದ್ದವು, ಆ ಸಂದರ್ಭದಲ್ಲಿ 24 ಗಂಟೆಯೊಳಗೆ ಸರಿಪಡಿಸುವ ಕಾರ್ಯ ನಡೆದಿತ್ತು. ಮುಂಗಾರು ಸಂದರ್ಭದಲ್ಲಿ ವಿದ್ಯುತ್ ಅವಘಡಗಳನ್ನು ತಪ್ಪಿಸಿ, ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಹೆಚ್ಚಿನ ಲೈನ್‍ಮೆನ್ ಹಾಗೂ ಗ್ಯಾಂಗ್‍ಮೆನ್‍ಗಳನ್ನು ನಿಯೋಜನೆ ಮಾಡಲಾಗಿದೆ.
ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಮುನ್ನೆಚ್ಚರ ವಹಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ಲೈನ್‍ಮೆನ್‍ಗಳಿಗೆ ಸ್ಮಾರ್ಟ್ ಪೋನ್‍ಗಳನ್ನು ಸಹ ವಿತರಿಸಲಾಗಿದೆ. ಟೋಲ್ ಫ್ರೀ ಸಂಖ್ಯೆಯನ್ನು ಸಹ ನೀಡಲಾಗುತ್ತಿದ್ದು, ಸಾರ್ವಜನಿಕರು ವಿದ್ಯುತ್ ಅಡಚಣೆ ಸಂಬಂಧಿಸಿದಂತೆ ಮಾಹಿತಿ ನೀಡಬಹುದಾಗಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications