ಕೊಡಗಿನಲ್ಲಿ ಕಡಿಮೆಯಾದ ಮಳೆ: 24 ಗಂಟೆಯಲ್ಲಿ ಎಷ್ಟು ಮಳೆ?

ಮಡಿಕೇರಿ, ಜುಲೈ 29: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಗಾರು ಮಳೆಯ ಅಬ್ಬರ ವಿವಿಧ ಜಿಲ್ಲೆಗಳಲ್ಲಿ ಕಡಿಮೆಯಾಗಿದೆ. 24 ಗಂಟೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಕಡಿಮೆ ಮಳೆಯಾಗಿದ್ದು, ನದಿ, ಹಳ್ಳಗಳ ನೀರಿನ ಹರಿವಿನ ಪ್ರಮಾಣದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ.

ಜಿಲ್ಲಾಡಳಿತ ನೀಡಿರುವ ಮಾಹಿತಿ ಅನ್ವಯ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 46.68 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.29 ಮಿ.ಮೀ. ಮಳೆಯಾಗಿತ್ತು.

Monsoon Rain Kodagu Receives 46 MM Rainfall In Last 24 Hours

ಜಿಲ್ಲಯಲ್ಲಿ ಜನವರಿಯಿಂದ ಇಲ್ಲಿಯ ತನಕ ಸುರಿದ ಮಳೆ 1995.65 ಮಿ. ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 1165.52 ಮಿ. ಮೀ. ಮಳೆಯಾಗಿತ್ತು ಎಂದು ಜಿಲ್ಲಾಡಳಿತದ ಅಂಕಿ-ಅಂಶಗಳು ಹೇಳಿವೆ. ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ 2855.85 ಅಡಿಗಳು.

ತಾಲೂಕುವಾರು ಮಳೆ: ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ ಮಳೆ 61.33 ಮಿ. ಮೀ., ಕಳೆದ ವರ್ಷ ಇದೇ ದಿನ 30.45 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2697.24 ಮಿ. ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 1975.75 ಮಿ. ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ 43.60 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.40 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1819.35 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 924.86 ಮಿ. ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ 66.43 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.90 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1928.52 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 938.81 ಮಿ. ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 53.45 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.50 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2323.16 ಮಿ. ಮೀ. ಮತ್ತು ಕಳೆದ ವರ್ಷ ಇದೇ ಅವಧಿಯಲ್ಲಿ 1240.24 ಮಿ. ಮೀ. ಮಳೆಯಾಗಿತ್ತು.

ಕುಶಾಲನಗರ ತಾಲ್ಲೂಕಿನಲ್ಲಿ ಸರಾಸರಿ ಮಳೆ 8.60 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.20 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1210 ಮಿ. ಮೀ., ಕಳೆದ ವರ್ಷ ಇದೇ ಅವಧಿಯಲ್ಲಿ 747.95 ಮಿ. ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ. ಮಡಿಕೇರಿ ಕಸಬಾ 24.80, ನಾಪೋಕ್ಲು 86.60, ಸಂಪಾಜೆ 36.50, ಭಾಗಮಂಡಲ 97.40, ವಿರಾಜಪೇಟೆ 41.20, ಅಮ್ಮತ್ತಿ 46, ಹುದಿಕೇರಿ 90.70, ಶ್ರೀಮಂಗಲ 83, ಪೊನ್ನಂಪೇಟೆ 60, ಬಾಳೆಲೆ 32, ಸೋಮವಾರಪೇಟೆ ಕಸಬಾ 47.60, ಶನಿವಾರಸಂತೆ 31, ಶಾಂತಳ್ಳಿ 110, ಕೊಡ್ಲಿಪೇಟೆ 25.20, ಕುಶಾಲನಗರ 4, ಸುಂಟಿಕೊಪ್ಪ 13.20 ಮಿ.ಮೀ.ಮಳೆಯಾಗಿದೆ.

ಹಾರಂಗಿ ಡ್ಯಾಂ ನೀರಿನ ಮಟ್ಟ: 29/7/2024ರ ವರದಿಯಂತೆ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2855.85 ಅಡಿಗಳು. ಕಳೆದ ವರ್ಷ ಇದೇ ದಿನ 2856.51 ಅಡಿಗಳ ನೀರಿನ ಸಂಗ್ರಹವಿತ್ತು. ಡ್ಯಾಂಗೆ ನೀರಿನ ಒಳಹರಿವು 7613 ಕ್ಯುಸೆಕ್, ಕಳೆದ ವರ್ಷ ಇದೇ ದಿನ 10095 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 4279 ಕ್ಯುಸೆಕ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+