• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

"ರಾಗಿಣಿ ಬಿಜೆಪಿ ಪರ ಪ್ರಚಾರ ಮಾಡಿದ್ದಕ್ಕೆ ಈಗ ರಾಜಕೀಯ ಬಣ್ಣ ಬೇಡ"

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಸೆಪ್ಟೆಂಬರ್ 9: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಕೊಡಗು ಜಿಲ್ಲೆಯ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್. ಪೇಟೆಯಲ್ಲಿ ಚುನಾವಣೆ ಸಂದರ್ಭ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಅದಕ್ಕೂ ಹಿಂದೆ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಜೊತೆ ರಾಗಿಣಿ ಇರುವ ಫೋಟೊಗಳು ವೈರಲ್ ಆಗುತ್ತಿವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದರು.

ರಾಗಿಣಿ ಜೊತೆಗಿನ ಬಿಜೆಪಿ ನಾಯಕರ ಫೋಟೊ, ವಿಡಿಯೋ ಇದೆ: ಸಿದ್ದರಾಮಯ್ಯ

   Amit Malviyaನಾ ಅಧಿಕಾರದಿಂದ ಕೆಳಗಿಳಿಸಿ : Subramanian Swamy | Oneindia Kannada

   ಡ್ರಗ್ಸ್ ಎನ್ನುವುದು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಈಗ ನಾವೆಲ್ಲರೂ ಪಕ್ಷಭೇದ ಮರೆತು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಬೇಕು. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಿ, ಜನರನ್ನು ಎಚ್ಚರಗೊಳಿಸಲು ಟ್ವಿಟರ್ ನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಪಕ್ಷ ಅದಕ್ಕಾಗಿ ಕೆಲಸ ಮಾಡಲಿದ್ದು, ಯಾರೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದು ಹೇಳಿದರು.

   English summary
   Dont give political dimension to actress Ragini's campaign for the BJP in this time says MP Pratap Simha in madikeri,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X