ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಅವಧಿಯಲ್ಲೇ ಹೆಚ್ಚು ಕನ್ನಡ ಶಾಲೆಗಳು ಮುಚ್ಚಿರುವುದು: ಸಿಂಹ

|
Google Oneindia Kannada News

ಕೊಡಗು, ಜೂನ್ 3: ಕೇಂದ್ರ ಸರ್ಕಾರವು ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹರಿಹಾಯ್ದಿದ್ದಾರೆ.

ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಗರಂ, ಒಗ್ಗೂಡಲು ಕರೆಹಿಂದಿ ಹೇರಿಕೆ ವಿರುದ್ಧ ಸಿದ್ದರಾಮಯ್ಯ ಗರಂ, ಒಗ್ಗೂಡಲು ಕರೆ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಅತಿ ಹೆಚ್ಚು ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದರು.

MP Pratap Simha said most Kannada schools were closed during Siddaramaiah government

ಸಿದ್ದರಾಮಯ್ಯ ಅವರು ಎರಡು ವರ್ಷಗಳ ಹಿಂದೆ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದರು. ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿಯೇ ಹೆಚ್ಚು ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ಆದರೆ ಅವರು ಕೇಂದ್ರ ಸರ್ಕಾರದ ವಿರುದ್ಧ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯದ ಜನರು ಈ ಆರೋಪಗಳಿಗೆ ಸೊಪ್ಪು ಹಾಕುವುದಿಲ್ಲ. ಅವರಿಗೆ ಈಗಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಹಿಂದಿ ಹೇರಿಕೆ ಮಾತಿಗೆ ಶೋಭಾ ತಿರುಗೇಟು ಸಿದ್ದರಾಮಯ್ಯ ಹಿಂದಿ ಹೇರಿಕೆ ಮಾತಿಗೆ ಶೋಭಾ ತಿರುಗೇಟು

ರಾಜ್ಯದ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1969ರಲ್ಲಿಯೇ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಳೀಯ ಭಾಷೆಯ ಜತೆಗೆ ಹಿಂದಿ ಹಾಗೂ ಇಂಗ್ಲಿಷ್ ಫಲಕಗಳನ್ನು ಬಳಸಲು ಆರಂಭಿಸಿದ್ದರು. ಕಾಂಗ್ರೆಸ್‌ನವರು ಇದರ ಬಗ್ಗೆ ಯೋಚಿಸದೆ ವಿನಾ ಕಾರಣ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

English summary
BJP MP Pratap Simha in Kodagu accused that, most of the Kannada schools in the state were closed during the administration of Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X