• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಲೋಕಸಭೆ: ಕಾಫಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆದ ಸಂಸದ ಪ್ರತಾಪ್ ಸಿಂಹ

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಸೆಪ್ಟೆಂಬರ್ 24: ಕಾಫಿ ಬೆಳೆಗಾರರ ಸಾಲದ ಮೇಲಿನ ಎಲ್ಲಾ ರೀತಿಯ ಬಡ್ಡಿಯನ್ನು ಮನ್ನಾ ಮಾಡಬೇಕೆಂದು ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ಸರಕಾರದ ಗಮನ ಸೆಳೆದಿದ್ದಾರೆ.

ಲೋಕಸಭೆಯಲ್ಲಿ ಕಾಫಿ ಬೆಳೆಗಾರರ ಸಂಕಷ್ಟದ ಬಗ್ಗೆ ಗಮನ ಸೆಳೆಯುವಂತೆ ಮಾತನಾಡಿದ ಅವರು, ಕೊಡಗಿನ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಲೋಕಸಭೆಗೆ ಮನವರಿಕೆ ಮಾಡಿದರು.

ಮಡಿಕೇರಿಯಲ್ಲಿ ಈ ಬಾರಿ ದಸರಾ ಆಚರಣೆ ಹೇಗಿರುತ್ತೆ?; ಡಿಸಿ ಮಾಹಿತಿ

ದೇಶದ ಒಟ್ಟು ಕಾಫಿ ಉತ್ಪಾದನೆ ಪೈಕಿ ಶೇಕಡಾ 70 ರಷ್ಟು ಕಾಫಿ ಕರ್ನಾಟಕದಿಂದಲೇ ಉತ್ಪಾದನೆಯಾಗುತ್ತಿದೆ. ಈ ಪೈಕಿ ಶೇಕಡಾ 98 ರಷ್ಟು ಕಾಫಿ ಬೆಳೆಗಾರರು ಸಣ್ಣ ಮತ್ತು ಮಧ್ಯಮ ವರ್ಗದವರಿದ್ದಾರೆ ಎಂದರು.

2016 ಮತ್ತು 2017 ರಲ್ಲಿ ಅನಾವೃಷ್ಟಿಯಿಂದ ತತ್ತರಿಸಿದ್ದ ಕೊಡಗಿನ ಕಾಫಿ ಬೆಳೆಗಾರರು, 2018 ರಿಂದೀಚೆಗೆ ಸತತ ಮೂರು ವರ್ಷ ಮಹಾಮಳೆ, ಪ್ರವಾಹ, ಭೂ ಕುಸಿತದಿಂದಾಗಿ ತಮ್ಮ ಎಲ್ಲಾ ಕಾಫಿ, ಕರಿಮೆಣಸು ಬೆಳೆಯನ್ನು ಕಳೆದುಕೊಂಡು ತೀವ್ರ ಕಷ್ಟದಲ್ಲಿದ್ದಾರೆ. ಮಣ್ಣು ಕುಸಿತ ಪರಿಣಾಮದಿಂದಾಗಿ ಕಾಫಿ ನಾಟಿಯೂ ಸಾಧ್ಯವಾಗುತ್ತಿಲ್ಲ ಎಂದು ಅವರು ವಿವರಿಸಿದರು.

ಕಾಫಿ ಬೆಳಗಾರರಿಗೆ ಎನ್.ಡಿ.ಆರ್.ಎಫ್ ಮಾರ್ಗಸೂಚಿ ಅನ್ವಯ ನೀಡಲಾಗುತ್ತಿರುವ ಪರಿಹಾರ ಅತ್ಯಲ್ಪವಾಗಿದೆ. ವಿತ್ತ ಖಾತೆ ಸಚಿವರಾದ ನಿರ್ಮಲಾ ಸೀತಾರಾಮನ್ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುತ್ತಿದ್ದು, ಕೇಂದ್ರ ವಾಣಿಜ್ಯ ಸಚಿವ ಪಿಯುಷ್ ಗೊಯಲ್ ಕರ್ನಾಟಕ ಬಿಜೆಪಿಯ ಉಸ್ತುವಾರಿಯಾಗಿದ್ದಾರೆ. ಈ ಇಬ್ಬರೂ ಸಚಿವರು ಕೂಡಲೇ ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕಾಗಿದೆ ಎಂದು ಪ್ರತಾಪ್ ಸಿಂಹ ಸದನದಲ್ಲಿ ಮನವಿ ಮಾಡಿದರು.

   Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

   ತನ್ನ ಕ್ಷೇತ್ರವಾದ ಕೊಡಗು ಜಿಲ್ಲೆಯ 3000 ಎಕರೆ ಕಾಫಿ ಕೃಷಿ ಭೂಮಿ ಸಂಪೂರ್ಣ ಹಾನಿಗೊಳಗಾಗಿರುವುದಾಗಿ ತಿಳಿಸಿದ ಅವರು, ಕನಿಷ್ಟ ಕಾಫಿ ಬೆಳೆಗಾರರ ಸಾಲದ ಮೇಲಿನ ಬಡ್ಡಿಯನ್ನಾದರೂ ಸರಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

   English summary
   Kodagu-Mysuru MP Pratap Simha has drawn the attention of the central government to waive all forms of interest on the credit of Karnataka coffee growers.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X