ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಮಳೆ; ಮೈಸೂರು-ಮಡಿಕೇರಿ ವಾಹನ ಸಂಚಾರವೂ ಬಂದ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಆಗಸ್ಟ್ 10: ಕೊಡಗಿನ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕುಶಾಲನಗರದ ಕೊಪ್ಪ ಸೇತುವೆ ಮೇಲೆ ಕಾವೇರಿ ನದಿ ನೀರು ತುಂಬಿ ಹರಿಯುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಡಿಕೇರಿ-ಕುಶಾಲನಗರ-ಮೈಸೂರು ಮಾರ್ಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ.

 ಕೊಡಗಿನಲ್ಲಿ ರಣ ಮಳೆಗೆ ಒಂದೇ ಕುಟುಂಬದ ನಾಲ್ವರ ಬಲಿ, ಓರ್ವ ಕಣ್ಮರೆ ಕೊಡಗಿನಲ್ಲಿ ರಣ ಮಳೆಗೆ ಒಂದೇ ಕುಟುಂಬದ ನಾಲ್ವರ ಬಲಿ, ಓರ್ವ ಕಣ್ಮರೆ

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ನದಿ ನೀರಿನ ಮಟ್ಟ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಲೇ ಇದೆ. ಜಿಲ್ಲೆಯ 14 ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಸಾರಿಗೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಸುರಕ್ಷತೆ ದೃಷ್ಟಿಯಿಂದ ಮೈಸೂರು-ಮಡಿಕೇರಿ ಮಾರ್ಗವನ್ನು ಬಂದ್ ಮಾಡಲಾಗಿದೆ.

Mysuru Madikeri Road Closed Due To Rain

ಕೊಡಗು ಜಿಲ್ಲೆಯಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಜಿಲ್ಲೆಯ 58 ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. 15 ಪ್ರದೇಶಗಳಲ್ಲಿ ಭೂ ಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಒಟ್ಟಾಗಿ 34 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 817 ಕುಟುಂಬಗಳ ಒಟ್ಟು 2866 ಸಂತ್ರಸ್ಥರು ಆಶ್ರಯ ಪಡೆದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 247 ಜನರನ್ನು ಮತ್ತು 11 ಜಾನುವಾರಗಳನ್ನು ರಕ್ಷಿಸಲಾಗಿದೆ. ಆದರೆ ಮಳೆ ಮುಂದುವರೆಯುತ್ತಲೇ ಇದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಕೆಲವೆಡೆ ಪ್ರಯತ್ನಗಳು ಮುಂದುವರೆದಿವೆ.

English summary
Heavy rain continued in south Kodagu. The Kaveri River is overflowing on the Koppa Bridge. Thus the traffic on the Madikeri-Kushalanagar-Mysore route has been curtailed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X