ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಭಾರೀ ಮಳೆ, ಮಡಿಕೇರಿ-ಮಂಗಳೂರು ರಸ್ತೆ ಬಂದ್

|
Google Oneindia Kannada News

ಮಡಿಕೇರಿ, ಜುಲೈ 17; ಭಾರೀ ಮಳೆಯಿಂದಾಗಿ ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆ ಕುಸಿಯವ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಮಡಿಕೇರಿ-ಮಂಗಳೂರು ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದೆ.

ರಸ್ತೆ ಬದಿಯ ತಡೆಗೋಡೆ ಕುಸಿದರೆ ಮಡಿಕೇರಿ-ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 275 ಸಂಪೂರ್ಣ ಬಂದ್ ಆಗಲಿದೆ. ಈ ಹಿನ್ನಲೆಯಲ್ಲಿ ಶನಿವಾರ ರಾತ್ರಿಯೇ ರಸ್ತೆ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ.

ಕೊಡಗು: ಜಲಪ್ರಳಯದ ಆ ದಿನ ನೆನೆದರೆ ಜನ ಬೆಚ್ಚಿ ಬೀಳ್ತಾರೆ! ಕೊಡಗು: ಜಲಪ್ರಳಯದ ಆ ದಿನ ನೆನೆದರೆ ಜನ ಬೆಚ್ಚಿ ಬೀಳ್ತಾರೆ!

ಅಧಿಕಾರಿಗಳ ಸಲಹೆಯಂತೆ ಮಡಿಕೇರಿ ಟೋಲ್‌ಗೇಟ್ ಬಳಿಯೇ ಶನಿವಾರ ರಾತ್ರಿ ರಸ್ತೆ ಬಂದ್ ಮಾಡಲಾಗಿದೆ. ಇದರಿಂದಾಗಿ ವಾಹನ ಸವಾರರು ಪರದಾಡಿದರು. ವಾಹನ ಸವಾರರು ಮಡಿಕೇರಿ-ಮೇಕೇರಿ ರಸ್ತೆ ಮೂಲಕ ಸಂಚಾರ ನಡೆಸಲು ಅನುಕೂಲ ಮಾಡಿಕೊಡಲಾಗಿದೆ.

ಆರಿದ್ರಾ ಮಳೆ ಅಬ್ಬರಕ್ಕೆ ಕೊಡಗು ತಲ್ಲಣ, ಭೂಕುಸಿತದ ಆತಂಕಆರಿದ್ರಾ ಮಳೆ ಅಬ್ಬರಕ್ಕೆ ಕೊಡಗು ತಲ್ಲಣ, ಭೂಕುಸಿತದ ಆತಂಕ

Road Closed

ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಇದಕ್ಕೆ ಹಾಕಿರುವ ಸ್ಲ್ಯಾಬ್‌ಗಳು ಉಬ್ಬಿದ್ದು ಬೀಳುವ ಆತಂಕ ಎದುರಾಗಿದೆ. ಮಡಿಕೇರಿ-ಮೇಕೇರಿ ರಸ್ತೆ ಕಿರಿದಾಗಿದ್ದು, ವಾಹನಗಳ ಸಾಗಲು ಬಹಳ ಸಮಯ ಬೇಕಾಗಿದೆ. ಸ್ಥಳದಲ್ಲಿ ಪೊಲೀಸರನ್ನು ಸಹ ನಿಯೋಜನೆ ಮಾಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಆತಂಕದಲ್ಲಿ ಜನರು ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಆತಂಕದಲ್ಲಿ ಜನರು

ಜುಲೈ 8ರಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿ ತಡೆಗೋಡೆ ವೀಕ್ಷಣೆ ಮಾಡಿದ್ದರು. ಕಾಂಕ್ರೀಟ್ ಸ್ಲ್ಯಾಬ್‌ಗಳು ಮಳೆಯಿಂದಾಗಿ ಹೊರ ಚಾಚಿತ್ತು. ತಜ್ಞರಿಂದ ತಪಾಸಣೆ ನಡೆಸಿ ವರದಿ ಪಡೆಯುವಂತೆ ಸಂಸದರು ಸೂಚನೆ ನೀಡಿದ್ದರು.

ಜಿಲ್ಲಾ ಅಭಿವೃದ್ಧಿ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಶಾಸಕರಾದ ಕೆ. ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಈ ತಡೆಗೋಡೆಯ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಸಭೆಯಲ್ಲಿ ಹಾಜರಿದ್ದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಒಟ್ಟು ಮೂರು ಹಂತದಲ್ಲಿ ಕಬ್ಬಿಣ ಆಳವಡಿಕೆ ಮಾಡಲಾಗಿದೆ. ತಡೆಗೋಡೆ ಕುಸಿಯುವುದಿಲ್ಲ ಎಂದು ಹೇಳಿದ್ದರು.

ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಕಾಮಗಾರಿ ಕಳಪೆಯಾಗಿದೆ. ಬಹುಕೋಟಿ ಹಗರಣ ಇದಾಗಿದ್ದು, ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

English summary
Due to heavy rain Madikeri-Mangaluru national highway closed for vehicles.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X