ಮಳೆಗಾಲ : ಕೊಡಗು ಜಿಲ್ಲೆಗೆ ಎನ್‌ಡಿಆರ್‌ಎಫ್ ತಂಡ ನಿಯೋಜನೆ
ಮಡಿಕೇರಿ, ಮೇ 03 : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುವ ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೇ ತಿಂಗಳ ಅಂತ್ಯಕ್ಕೆ ಎನ್‌ಡಿಆರ್‌ಎಫ್ ಪಡೆಯನ್ನು ಜಿಲ್ಲೆಯಲ್ಲಿ ನಿಯೋಜನೆ ಮಾಡಲಾಗುತ್ತದೆ.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ರಾಜ್ ಕುಮಾರ್ ಖತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಳೆಗಾಲ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
ಮಳೆಗಾಲ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ತುರ್ತು ನಿರ್ವಹಣಾ ಕೇಂದ್ರ ಆರಂಭಿಸಲಾಗಿದೆ. ನೆರವು ಬೇಕಾದ ಜನರು 1077 ನಂಬರ್‌ಗೆ ಕರೆ ಮಾಡಬಹುದು. ಸಹಾಯವಾಣಿ ದಿನದ 24 ಗಂಟೆಯೂಸ ಕಾರ್ಯ ನಿರ್ವಹಣೆ ಮಾಡಲಿದೆ.

ಕೈಗೊಂಡ ಪ್ರಮುಖ ಕ್ರಮಗಳು ಇಲ್ಲಿವೆ....
* ಮಳೆಗಾಲದಲ್ಲಿ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ 15 ನಿಮಿಷಕ್ಕೊಮ್ಮೆ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಲಿದೆ. ವರುಣ ಮಿತ್ರ ಸಹಾಯವಾಣಿಯಿಂದ ರೈತರು ಜಿಲ್ಲೆಯ ಹವಾಮಾನ ಪರಿಸ್ಥಿತಿ ಮಾಹಿತಿ ಪಡೆಯಬಹುದು.
* ಅಗ್ನಿಶಾಮಕದಳ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ಸ್ಪಂದನಾ ಪಡೆಗೆ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರುವಂತೆ ಸೂಚನೆ ನೀಡಲಾಗಿದೆ.
* ಮೇ ತಿಂಗಳ ಅಂತ್ಯಕ್ಕೆ ಎನ್‌ಡಿಆರ್‌ಎಫ್‌ನ 1 ತಂಡ ಕೊಡಗು ಜಿಲ್ಲೆಗೆ ಬರಲಿದೆ. ಮಳೆಗಾಲ ಮುಗಿಯುವ ತನಕ ತಂಡ ಜಿಲ್ಲೆಯಲ್ಲಿಯೇ ಇರಲಿದೆ.
* ಹೆದ್ದಾರಿಗಳಲ್ಲಿ ಭೂಸಿತ ಉಂಟಾದರೆ ಮಣ್ಣು ತೆರವು ಮಾಡಲು 20 ಜೆಸಿಬಿ ಬಳಕೆ ಮಾಡಿಕೊಳ್ಳಲು ತೀರ್ಮಾನ
* ದುರಂತ ನಡೆದರೆ ಸಂತ್ರಸ್ತರಿಗೆ ನೆರವಾಗಲು ಪರಿಹಾರ ಕೇಂದ್ರಗಳನ್ನು ಗುರುತಿಸಲಾಗಿದೆ.












Click it and Unblock the Notifications