• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪುಟ್ಟ ಜಿಲ್ಲೆ ಕೊಡಗಿನಲ್ಲಿ ದಾಖಲೆ ಬರೆದ ಕೋವಿಡ್‌ ಪ್ರಕರಣಗಳ ಸಂಖ್ಯೆ

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಏಪ್ರಿಲ್ 21; ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದ ಪುಟ್ಟ ಜಿಲ್ಲೆ ಕೊಡಗಿನಲ್ಲೂ ಸೋಂಕಿತರ ಸಂಖ್ಯೆ ದಾಖಲೆ ಬರೆದಿದೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 159 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 142 ಆರ್. ಟಿ. ಪಿ. ಸಿ. ಆರ್ ಮತ್ತು 17 ಪ್ರಕರಣಗಳು ರಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಬೆಳಕಿಗೆ ಬಂದಿದೆ.

ಮಡಿಕೇರಿ ತಾಲೂಕಿನಲ್ಲಿ 50 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 48 ಪ್ರಕರಣಗಳು ಆರ್. ಟಿ. ಪಿ. ಸಿ. ಆರ್ ಮತ್ತು 2 ಪ್ರಕರಣಗಳು ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ 56 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 45 ಆರ್. ಟಿ. ಪಿ. ಸಿ. ಆರ್ ಮತ್ತು 11 ಆಂಟಿಜೆನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆಯಲ್ಲಿ 53 ಹೊಸ ಕೋವಿಡ್ ಪ್ರಕರಣ ಕಂಡುಬಂದಿದೆ. ಈ ಪೈಕಿ 49 ಆರ್. ಟಿ. ಪಿ. ಸಿ. ಆರ್ ಮತ್ತು 4 ಆಂಟಿಜನ್ ಪರೀಕ್ಷೆಯಲ್ಲಿ ಖಚಿತವಾಗಿದೆ.

ಕೊಡಗು ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 7,182 ಆಗಿದ್ದು, 6,529 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 237 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಿಸುತ್ತಿರುವ ಬೆನ್ನಲ್ಲೇ ಸೋಂಕಿತರ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 86 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಕಳೆದ ಒಂದು ವಾರದಲ್ಲಿ ಮೂವರು ಮೃತಪಟ್ಟಿದ್ದಾರೆ.

   'ಕೊರೊನಾ ಚೈನ್‌‌ ಲಿಂಕ್‌ ಕಟ್‌ ಮಾಡಲು 14 ದಿನಗಳ ಕಠಿಣ ಕ್ರಮ ಅಗತ್ಯ'- ಆರೋಗ್ಯ ಸಚಿವ ಕೆ.ಸುಧಾಕರ್‌ | Oneindia

   ಜಿಲ್ಲೆಯಲ್ಲಿ ಒಟ್ಟು 567 ಸಕ್ರಿಯ ಪ್ರಕರಣಗಳಿದ್ದು, ವೈದ್ಯರು ಹಾಗೂ ಸಿಬ್ಬಂದಿಗಳು ರೋಗಿಗಳ ಆರೋಗ್ಯ ರಕ್ಷಣೆಗೆ ಅವಿರತ ಶ್ರಮ ಪಡುತ್ತಿದ್ದಾರೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಜನರು ಸ್ವಯಂ ಪ್ರೇರಿತರಾಗಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

   English summary
   Total COVID cases in Kodagu district raised to 7,182. Till Wednesday 6,529 people discharged. Active cases in the district now 567.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X