Get Updates
Get notified of breaking news, exclusive insights, and must-see stories!

ಕೊಡಗು ಪ್ರವಾಸಿಗರಿಗೆ ಸಿಹಿಸುದ್ದಿ; ಪ್ರವಾಸಿತಾಣದ ಮಾಹಿತಿ ನೀಡುವ ಹೊಸ ವೆಬ್‌ಸೈಟ್‌ ಬಿಡುಗಡೆ

ಮಡಿಕೇರಿ, ಅಕ್ಟೋಬರ್ 06: ಕರ್ನಾಟಕದಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಜಿಲ್ಲೆಗಳಲ್ಲಿ ಕೊಡಗು ಸಹ ಒಂದು. ಈಗ ಜಿಲ್ಲೆಯ ಪ್ರವಾಸಿಗರಿಗೆ ಸಿಹಿಸುದ್ದಿಯೊಂದಿದೆ. ಜಿಲ್ಲೆಯ ಪವಿತ್ರ ಸ್ಥಳವಾದ ತಲಕಾವೇರಿ, ಭಾಗಮಂಡಲ ಹಾಗೂ ಪ್ರವಾಸಿ ಸ್ಥಳವಾದ ಜಲಪಾತಗಳು, ಪ್ರೇಕ್ಷಣೀಯ ಸ್ಥಳಗಳು, ಹೋಟೆಲ್‍, ರೆಸಾರ್ಟ್‍ಗಳು ಸೇರಿದಂತೆ ವಿವಿಧ ಮಾಹಿತಿಯನ್ನು ನೀಡುವ ಹೊಸ ವೆಬ್‌ಸೈಟ್‌ ಡಿಸೆಂಬರ್‌ ಒಳಗೆ ಬಿಡುಗಡೆಯಾಗಲಿದೆ.

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಕುರಿತು ಮಾಹಿತಿ ನೀಡಿದ್ದಾರೆ. "ಕೊಡಗು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಸಿದ್ಧ ದೇವಾಲಯಗಳು, ಪವಿತ್ರ ಸ್ಥಳಗಳು, ಹೋಟೆಲ್, ಹೋಂ ಸ್ಟೇ, ರೆಸಾರ್ಟ್, ಜಲಾಶಯ, ಜಲಪಾತ, ಪ್ರೇಕ್ಷಣೀಯ ಸ್ಥಳಗಳು ಹೀಗೆ ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‍ಸೈಟ್‍ ಅನ್ನು ಶೀಘ್ರ ಬಿಡುಗಡೆ ಮಾಡಲಾಗುವುದು" ಎಂದು ಅವರು ಹೇಳಿದ್ದಾರೆ.

New Website To Give Information On Kodagu District Tourist Places

"ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಅವರು ಮತ್ತೊಬ್ಬರಿಗೆ ತಿಳಿಸುತ್ತಾರೆ. ಈ ಬಗ್ಗೆ ಅಂತರ್ಜಾಲದ ಮೂಲಕ ಮಾಹಿತಿ ಒದಗಿಸಲಾಗುವುದು. ಜಿಲ್ಲೆಯ ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಪ್ರವಾಸಿಗರಲ್ಲಿ ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ" ಎಂದು ಜಿಲ್ಲಾಧಿಕಾರಿಗಳು ಕರೆ ನೀಡಿದರು.

ಪ್ರವಾಸೋದ್ಯಮವೇ ಜೀವಾಳ: ಚಿಕ್ಕ ಜಿಲ್ಲೆಯಾದ ಕೊಡಗು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿದೆ. ಜಿಲ್ಲೆಯಲ್ಲಿ 1.25 ಲಕ್ಷ ಜನರು ಪ್ರವಾಸೋದ್ಯಮವನ್ನು ನಂಬಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಜೀವನ ನಡೆಸುತ್ತಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಉದ್ಯೋಗವು ದೊರೆಯಲಿದೆ. ಸ್ವಚ್ಛತೆ ಹಾಗೂ ಸುರಕ್ಷತೆಗೆ ಸಹ ಹೆಚ್ಚಿನ ಒತ್ತು ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ, "ಕೊಡಗು ಜಿಲ್ಲೆಗೆ ಪ್ರತಿ ವರ್ಷ ಸುಮಾರು 47 ರಿಂದ 50 ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನು ಸೃಷ್ಟಿಸಿದೆ. ಕೊಡಗು ಜಿಲ್ಲೆಯ ಕಲೆ, ಪರಂಪರೆ ಸಾಂಪ್ರಾದಾಯಗಳ ಜೊತೆ ಇಲ್ಲಿನ ಅತಿಥ್ಯಕ್ಕೆ ಪ್ರವಾಸಿಗರು ಹೆಚ್ಚು ಆಕರ್ಷಿತಾರಾಗುತ್ತಾರೆ. ಪ್ರವಾಸೋದ್ಯಮ ಇಲಾಖೆಯ ಅನುದಾನದಿಂದ ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ರೂ. 2813.9 ಲಕ್ಷಗಳ ಅನುದಾನದಲ್ಲಿ ವಿವಿಧ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯ ನಿರ್ಮಿಸಲಾಗಿದೆ" ಎಂದರು.

"ಜಿಲ್ಲೆಯಲ್ಲಿ ಸುಮಾರು 4 ಸಾವಿರ ಹೋಂ ಸ್ಟೇಗಳಿದ್ದು, ಇಲ್ಲಿಯವರೆಗೆ 2010 ಹೋಂ ಸ್ಟೇಗಳು ಆನ್‍ಲೈನ್‍ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರ ಪಡೆದಿದ್ದಾರೆ. ಸುಮಾರು 150 ಹೋಟೆಲ್/ ರೆಸಾರ್ಟ್‍ಗಳು ಕಾರ್ಯ ನಿರ್ವಹಿಸುತ್ತಿದ್ದು, 53 ಹೋಟೆಲ್/ ರೆಸ್ಟೋರೆಂಟ್/ ರೆಸಾರ್ಟ್‍ಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್‌ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರವನ್ನು ಪಡೆದಿದ್ದಾರೆ" ಹೇಳಿದರು.

ಕೊಡಗು ಜಿಲ್ಲೆಗೆ ಪ್ರವಾಸಿಗರು ಯಾವ ತಿಂಗಳಲ್ಲಿ ಭೇಟಿ ನೀಡಬೇಕು ಎಂಬ ಬಗ್ಗೆ ಹೊಸ ವೆಬ್‍ಸೈಟ್‍ನಲ್ಲಿ ಮಾಹಿತಿ ಇರಲಿದೆ. ಜಿಲ್ಲೆಯ ವಿಶೇಷತೆ ಬಗ್ಗೆ 'ಕಾಫಿ ಟೇಬಲ್ ಬುಕ್' ಹೊರ ತರುವಂತಾಗಬೇಕು. ನದಿ, ಜಲಾಶಯ, ದುಬಾರೆ ಆನೆ ಶಿಬಿರ, ಜಲ ಸಾಹಸ ಕ್ರೀಡೆ ಹೀಗೆ ಹಲವು ವಿಶೇಷತೆ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ದೊರೆಯುವಂತಾಗಬೇಕು. ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸಿ ಮಾರ್ಗದರ್ಶಿ ಪುಸ್ತಕ ಅಗತ್ಯ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

"ಜಿಲ್ಲೆಯ ಎಲ್ಲೆಡೆ ಪರಿಸರ ಪ್ರವಾಸೋದ್ಯಮ ನಿರ್ಮಾಣ ಮಾಡಬೇಕು. ಪ್ಲಾಸ್ಟಿಕ್ ಬಳಸದಂತೆ ಸಲಹೆ ಮಾಡಬೇಕು. ಜಿಲ್ಲೆಯ ಪವಿತ್ರ ಸ್ಥಳಗಳು ಸೇರಿದಂತೆ ಪ್ರವಾಸಿ ಸ್ಥಳಗಳಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ಇರಬೇಕು. ಊಟಿ ಹಾಗೂ ತಿರುಪತಿಯಲ್ಲಿ ಪ್ರವಾಸಿ ಹಾಗೂ ಪವಿತ್ರ ಸ್ಥಳದಲ್ಲಿನ ನಿರ್ವಹಣೆ ಬಗ್ಗೆ ತಿಳಿದುಕೊಳ್ಳಬೇಕು. ಈ ಸಂಬಂಧ ಆಗಾಗ ಶಿಬಿರ ಏರ್ಪಡಿಸುವ ಮೂಲಕ ಮಾಹಿತಿ ನೀಡುವಂತಾಗಬೇಕು" ಎಂದು ಜಿಲ್ಲಾಧಿಕಾರಿಗಳು ಸಲಹೆ ಮಾಡಿದರು.

ಸರ್ಕಾರ 2024-25ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂಬುದಾಗಿ ಘೋಷಿಸಿದೆ. ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳನ್ನು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ನಡೆಸಲು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ ನಿಗಮದ ವತಿಯಿಂದ ಪರವಾನಿಗೆ ನೀಡಿ ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+