• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಜರಂಗದಳದಿಂದ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ: ಶಾಲೆ ಸ್ಪಷ್ಟನೆ

|
Google Oneindia Kannada News

ಮಡಿಕೇರಿ, ಮೇ19: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ ಎಂಬ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಸಾಯಿ ಶಂಕರ ವಿದ್ಯಾಸಂಸ್ಥೆಯ ಆವರಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ ಎಂದು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ. ಕೆಲವರು ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಝರು ಗಣಪತಿ ಅಸಮಾಧಾನ ವ್ಯಕ್ತಪಡಿಸಿದರು.

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ಬೇಸಿಗೆ ರಜೆ ಇದ್ದ ಕಾರಣ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಲಾಗಿತ್ತು. ಆದರೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ" ಎಂದು ಸ್ಪಷ್ಟಪಡಿಸಿದರು.

ಮುಕ್ತ ಅವಕಾಶ; "ಸಂಸ್ಥೆಯ ಸಭಾಂಗಣದಲ್ಲಿ ಊಟ ಮತ್ತು ಮಲಗುವ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆಯೂ ಜಾತಿ, ಧರ್ಮದ ತಾರತಮ್ಯವಿಲ್ಲದೆ ಹಲವು ಕಾರ್ಯಕ್ರಮಗಳಿಗೆ ಮುಕ್ತ ಅವಕಾಶ ನೀಡಲಾಗಿದೆ" ಎಂದು ಝರು ಗಣಪತಿ ಹೇಳಿದರು.

"ಸಭಾ ಕಾರ್ಯಕ್ರಮ ಹೊರತುಪಡಿಸಿ ಇತರ ಚಟುವಟಿಕೆಗಳನ್ನು ಸಂಸ್ಥೆಯ ಹೊರ ಭಾಗದಲ್ಲಿ ನಡೆಸಲಾಗಿದ್ದು, ಶಾಲೆ ಆವರಣದ ಸಂಪೂರ್ಣ ಮಾಹಿತಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ಇಲ್ಲಿ ನಡೆದಿಲ್ಲ" ಎಂದು ತಿಳಿಸಿದರು.

"ಕೆಲವರು ಪೊಲೀಸ್ ತನಿಖೆಗಾಗಿ ಒತ್ತಡ ಹೇರುತ್ತಿದ್ದು, ಇದು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಸಾರ್ವಜನಿಕರೇ ಸಂಸ್ಥೆಗೆ ಖದ್ದು ಭೇಟಿ ನೀಡಿ ತನಿಖೆ ನಡೆಸುವಂತೆ" ಮನವಿ ಮಾಡಿದರು.

"2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ವಿದ್ಯಾಭ್ಯಾಸದಿಂದ ವಂಚಿತರಾದ ಸುಮಾರು 140 ಮಕ್ಕಳಿಗೆ ಮೂರು ವರ್ಷಗಳ ಕಾಲ ಉಚಿತ ಶಿಕ್ಷಣ, ವಸತಿ ನೀಡುವ ಮೂಲಕ ಅವರ ಬೆಳವಣಿಗೆಗೆ ಸಂಸ್ಥೆ ಶ್ರಮಿಸಿದೆ. ಇಂತಹ ಸೇವಾ ಮನೋಭಾವದ ಸಂಸ್ಥೆಯ ಹೆಸರನ್ನು ಎಳೆದು ತಂದು ತೊಂದರೆ ನೀಡುತ್ತಿರುವುದು ಸರಿಯಾದ ಕ್ರಮವಲ್ಲ" ಎಂದರು.

"ನಮ್ಮಲ್ಲಿ ಎಲ್ಲಾ ಜಾತಿ, ಧರ್ಮದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದಾರೆ. ಇಲ್ಲಸಲ್ಲದ ಹೇಳಿಕೆಗಳಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಕೆಲವರ ಒತ್ತಡಕ್ಕೆ ಮಣಿದು ಮೂವರು ಮಕ್ಕಳು ಶಾಲೆಯಿಂದ ಟಿಸಿ ಪಡೆದು ಹೋಗಿದ್ದಾರೆ" ಎಂದು ಬೇಸರ ವ್ಯಕ್ತಪಡಿಸಿದರು.

Arms Training

ನೆನಪಿನ ಕಾಣಿಕೆಯಾಗಿ ತ್ರಿಶೂಲ; ಇದೇ ಸಂದರ್ಭ ಕಾರ್ಯಕ್ರಮದಲ್ಲಿ ನೀಡಲಾದ ತ್ರಿಶೂಲವನ್ನು ತೋರಿಸಿದ ಝರು ಗಣಪತಿ ಅವರು, "ಶಿಬಿರದ ಸಮಾರೋಪ ಸಮಾರಂಭದಲ್ಲಿ ತ್ರಿಶೂಲಗಳನ್ನು ನೆನಪಿನ ಕಾಣಿಕೆಯಾಗಿ ನೀಡಲಾಗಿದೆಯೇ ಹೊರತು ಯಾವುದೇ ರೀತಿಯ ತರಬೇತಿ ನೀಡಿಲ್ಲ" ಎಂದರು.

   ಗುಜರಾತ್ ವಿರುದ್ಧ RCB ಗೆ ಅಮೋಘ ಜಯ: RCB ಪ್ಲೇಆಫ್ ಆಸೆ ಇನ್ನೂ ಜೀವಂತ | Oneindia Kannada

   ನಿರ್ದೇಶಕ ಸತೀಶ್ ದೇವಯ್ಯ ಮಾತನಾಡಿ, "ಪ್ರತಿಷ್ಠಿತ ವಿದ್ಯಾಸಂಸ್ಥೆಯ ಹೆಸರು ಕೆಡಿಸುವ ಪ್ರಯತ್ನ ಯಾರಿಗೂ ಶೋಭೆ ತರುವುದಿಲ್ಲ. ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಮಕ್ಕಳ ಮನಸ್ಸನ್ನು ಕೆಡಿಸುವುದು ಖಂಡನೀಯ" ಎಂದು ಹೇಳಿದರು.

   English summary
   No arms training conducted at the campus of Sai Shankar Educational Institute in Kodagu’s Ponnampet classified Zaru Ganapathy president of the institute.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X