ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

21 ಕೋಟಿ ಪರಿಹಾರದ ಹಣವನ್ನು ತನ್ನ ಖಾತೆಗೆ ಹಾಕಿಕೊಂಡ ಅಧಿಕಾರಿ ಅಮಾನತು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ನವೆಂಬರ್ 7: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾದ 21 ಕೋಟಿ ರೂ. ಅನುದಾನವನ್ನು ತನ್ನ ಖಾಸಗಿ ಬ್ಯಾಂಕ್ ಖಾತೆಗೆ ಹಾಕಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಎಂಬುವರನ್ನು ರಾಜ್ಯ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಜಿ.ಪಂ ಪಂಚಾಯತ್ ರಾಜ್ ಇಲಾಖೆಯ ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗಳಿಗೆ ಸರ್ಕಾರದಿಂದ ಒಟ್ಟು 28 ಕೋಟಿ ರೂ. ಬಿಡುಗಡೆಯಾಗಿತ್ತು. ಈ ಪೈಕಿ 21 ಕೋಟಿ ರೂ.ಗಳ ಚೆಕ್ ಅನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲಾ ಪಂಚಾಯಿತಿ ರಾಜ್ ಇಲಾಖೆಗೆ ಹಸ್ತಾಂತರಿಸಿ, ಪ್ರತ್ಯೇಕ ಖಾತೆಯಲ್ಲಿ ಈ ಹಣವನ್ನು ಜಮೆ ಮಾಡುವಂತೆ ಸೂಚಿಸಿದ್ದರು. ಈ ಸಂದರ್ಭ ಇಇ ಶ್ರೀಕಂಠಯ್ಯ ಅವರು ಕೋಟಕ್ ಮಹೇಂದ್ರ ಬ್ಯಾಂಕ್‌ನಲ್ಲಿ 21 ಕೋಟಿ ರೂ.ಗಳನ್ನು ಜಮೆ ಮಾಡಿದ್ದರು. ಈ ಹಣವನ್ನು ವಿವಿಧ ಕಾಮಗಾರಿಗಳಿಗೆ ಬಳಕೆ ಮಾಡಲಾಗಿದ್ದು, ಬ್ಯಾಂಕ್ ಖಾತೆಯಲ್ಲಿ 21 ಲಕ್ಷ ರೂ.ಗಳು ಮಾತ್ರ ಉಳಿದಿರುವುದಾಗಿ ತಿಳಿದುಬಂದಿದೆ.

ಹೆದ್ದಾರಿಗಾಗಿ ಭೂಮಿ ಕಳೆದುಕೊಂಡ ರೈತನಿಂದ ಲಂಚ ಪಡೆಯುತ್ತಿದ್ದ ಮೂವರ ಬಂಧನಹೆದ್ದಾರಿಗಾಗಿ ಭೂಮಿ ಕಳೆದುಕೊಂಡ ರೈತನಿಂದ ಲಂಚ ಪಡೆಯುತ್ತಿದ್ದ ಮೂವರ ಬಂಧನ

ಖಾಸಗಿ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅಲ್ಲಿ ಹಣ ಜಮೆ ಮಾಡುವುದಾದರೆ ಅದಕ್ಕೆ ಹಣಕಾಸು ಇಲಾಖೆ ಮತ್ತು ಜಿಲ್ಲಾಡಳಿತದ ಆಡಳಿತಾತ್ಮಕ ಅನುಮತಿ ಮತ್ತು ಅನುಮೋದನೆ ಪಡೆಯಬೇಕು. ಆದರೆ ಇಇ ಶ್ರೀಕಂಠಯ್ಯ, ಯಾವುದೇ ಅನುಮತಿ ಪಡೆಯದೇ ನಿಯಮವನ್ನು ಉಲ್ಲಂಘಿಸಿದ್ದರು.

Officer Suspended For Depositing 21 Crore Relief Fund For Personal Account In Madikeri

ಈ ಹಿಂದೆ ನಡೆದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಈ ಕುರಿತು ಜಿ.ಪಂ. ಸದಸ್ಯ ಶಿವು ಮಾದಪ್ಪ ಅವರು ಈ ವಿಷಯ ಪ್ರಸ್ತಾಪಿಸಿ, ತನಿಖೆಗೆ ಒತ್ತಾಯಿಸಿದ್ದರು. ಇದಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಲಕ್ಷಿಪ್ರಿಯ ಅವರು ಮುಖ್ಯ ಲೆಕ್ಕಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ತನಿಖೆಯ ಸಂದರ್ಭ ಅಧಿಕಾರಿ ಶ್ರೀಕಂಠಯ್ಯ, ಖಾಸಗಿ ವಲಯದ ಕೋಟಕ್ ಮಹೇಂದ್ರ ಬ್ಯಾಂಕಿನಲ್ಲಿ ಒಟ್ಟು 21 ಕೋಟಿ ರೂ.ಗಳನ್ನು ಜಮೆ ಮಾಡಿರುವುದು ಕಂಡು ಬಂದಿತ್ತು. ಮಾತ್ರವಲ್ಲದೇ, ಇದಕ್ಕೆ ಜಿಲ್ಲಾಡಳಿತ ಮತ್ತು ಹಣಕಾಸು ಇಲಾಖೆಯ ಅನುಮತಿ ಪಡೆಯದಿರುವುದು ಪತ್ತೆಯಾಗಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

English summary
Officer suspendef for depositing 21 crores natural disaster relief fund to his personal account in kodagu,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X