ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿ; ನರಭಕ್ಷಕ ಹುಲಿ ಸೆರೆ ಹಿಡಿಯಲು ಕಾರ್ಯಾಚರಣೆ

By Coovercolly Indresh
|
Google Oneindia Kannada News

ಮಡಿಕೇರಿ, ಫೆಬ್ರವರಿ 21; ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ನರಭಕ್ಷಕ ಹುಲಿಯ ಸೆರೆಗೆ ಅರಣ್ಯ ಇಲಾಖೆ ದೊಡ್ಡ ಪ್ರಮಾಣದ ಕಾರ್ಯಾಚರಣೆಯನ್ನು ಆರಂಭಿಸಿದೆ.

ಶನಿವಾರ ಸಂಜೆ ಶ್ರೀಮಂಗಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 8ನೇ ತರಗತಿ ಓದುತ್ತಿರುವ ಅಯ್ಯಪ್ಪ, ಕಾಫಿ ತೋಟದಲ್ಲಿ ಸೌದೆಗಾಗಿ ತೆರಳಿದ ಸಂದರ್ಭದಲ್ಲಿ ಎದುರಾದ ಹುಲಿಯು ಬಾಲಕನ ಮೇಲೆರಗಿ ದಾಳಿ ನಡೆಸಿತ್ತು, ಸ್ಥಳದಲ್ಲೇ ಆತನನ್ನು ಕೊಂದು ಹಾಕಿತ್ತು.

ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ: ಸಚಿವ ಆನಂದ್ ಸಿಂಗ್ ಹುಲಿ ಸಂರಕ್ಷಣಾ ಉದ್ಯಾನವನಗಳಿಗೆ ಹೈಟೆಕ್ ಸ್ಪರ್ಶ: ಸಚಿವ ಆನಂದ್ ಸಿಂಗ್

ಭಾನುವಾರ ಬೆಳಗ್ಗೆ ಅದೇ ಹುಲಿ ಟಿ. ಶೆಟ್ಟಿಗೇರಿ ಗ್ರಾಮದಲ್ಲಿ ಕಾರ್ಮಿಕ ಮಹಿಳೆ ಚಿಣ್ಣಿ (60) ಎಂಬುವವರನ್ನು ಕೊಂದು ಹಾಕಿದೆ. ಇದೇ ಗ್ರಾಮದಲ್ಲಿ ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಶನಿವಾರ ಗ್ರಾಮ ವಾಸ್ತವ್ಯ ಹೂಡಿದ್ದು, ಈ ಸಂದರ್ಭ ಸ್ಥಳೀಯರು ಹುಲಿ ಸಮಸ್ಯೆ ಬಗ್ಗೆ ಗಮನ ಸೆಳೆದಿದ್ದರು. ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹುಲಿ ಸೆರೆ ಹಿಡಿಯುವ ಭರವಸೆ ನೀಡಿದ್ದರು.

 ಮೈಸೂರು; ಹುಲಿ ಕೊಂದು ನಾಲ್ಕು ಕಾಲು ಕತ್ತರಿಸಿದ್ದ ನಾಲ್ವರ ಬಂಧನ ಮೈಸೂರು; ಹುಲಿ ಕೊಂದು ನಾಲ್ಕು ಕಾಲು ಕತ್ತರಿಸಿದ್ದ ನಾಲ್ವರ ಬಂಧನ

Kodagu Operation Launched To Trap Man Eating Tiger

ಒಂದೇ ದಿನದ ಅವಧಿಯಲ್ಲಿ ಹುಲಿ ಇಬ್ಬರನ್ನು ಬಲಿ ಪಡೆದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದರೂ ಇಲಾಖೆ ಗಂಭೀರ ವಾಗಿ ಪರಿಗಣಿಸಿರಲಿಲ್ಲ.

ಶಿವಮೊಗ್ಗ: ಹುಲಿ ಉಗುರು ಮಾರುತ್ತಿದ್ದ ಮೂವರ ಬಂಧನ ಶಿವಮೊಗ್ಗ: ಹುಲಿ ಉಗುರು ಮಾರುತ್ತಿದ್ದ ಮೂವರ ಬಂಧನ

ಇಂದು ನೂರಾರು ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ಎದುರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಶ್ರೀಮಂಗಲ ಪಟ್ಟಣವನ್ನೂ ಬಂದ್‌ ಮಾಡಿ ಪ್ರತಿಭಟಿಸಿದರು. ಸ್ಥಳಕ್ಕೆ ಬಂದ ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ. ಹೀರಾಲಾಲ್ ಪ್ರತಿಭಟನಾನಿರತ ರೈತರನ್ನು ಸಮಾಧಾನ ಪಡಿಸಿದ್ದು ಹುಲಿ ಸೆರೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ತಿಳಿಸಿದರು.

ಅಲ್ಲದೆ ಹುಲಿಯು ಸೆರೆ ಸಿಕ್ಕದಿದ್ದರೆ ಕೊಲ್ಲಲೂ ಆದೇಶಿಸುವುದಾಗಿ ತಿಳಿಸಿದ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂತೆಗೆದುಕೊಂಡರು. ಇಂದು ಶ್ರೀಮಂಗಲ ಪಟ್ಟಣದಲ್ಲಿ ಹುಲಿ ಸೆರೆಗೆ ಒತ್ತಾಯಿಸಿ ಕೆಲ ಕಾಲ ಬಂದ್ ಆಚರಿಸಲಾಗಿತ್ತು.

ಈಗ ಮತ್ತಿಗೋಡು ಶಿಬಿರದಿಂದ ಸಾಕಾನೆಗಳನ್ನು ಕರೆಸಿಕೊಳ್ಳಲಾಗಿದ್ದು ಅಭಿಮನ್ಯು, ಗೋಪಾಲಸ್ವಾಮಿ ಎಂಬ ಎರಡು ಆನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಸುಮಾರು 50 ಕ್ಕೂ ಹೆಚ್ಚು ಅರಣ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳೂ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಮೃತಪಟ್ಟಿರುವ ವ್ಯಕ್ತಿಗಳ ಕುಟುಂಬಸ್ಥರಿಗೆ ಸೂಕ್ತ ಪರಿಹಾರವನ್ನು ನೀಡಲಾಗುವುದು ಎಂದು ಅರಣ್ಯ ಅಧಿಕಾರಿ ಹೀರಾಲಾಲ್‌ ತಿಳಿಸಿದರು. ಈ ಎರಡು ಸಾವುಗಳ ಕುರಿತು ಶ್ರೀಮಂಗಲ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
In Madikeri forest department has begun operation to trap the man eating tiger. Tiger killed 2 people in 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X