ಕೊಡಗು ; ಭಾರಿ ಮಳೆ ಮುನ್ಸೂಚನೆ, ಜು. 18 ರಿಂದ 22 ಆರೆಂಜ್ ಅಲರ್ಟ್
ಮಡಿಕೇರಿ, ಜುಲೈ 16 : ಕೊಡಗು ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹಮಾಮಾನ ಇಲಾಖೆ ಆರೆಂಜ್ ಅಲರ್ಟ್ ಎಂದು ಎಚ್ಚರಿಕೆ ನೀಡಿದೆ.
ಕೊಡಗು ಜಿಲ್ಲಾಡಳಿತ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದೆ. ಜುಲೈ 18 ರಿಂದ 22ರ ತನಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 115.6 ಮಿ. ಮೀನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳು ಉಂಟಾದರೆ ತಕ್ಷಣ ಸಂಪರ್ಕಿಸಲು ಜಿಲ್ಲಾಡಳಿತ ಟೋಲ್ ಫ್ರೀ ಸಂಖ್ಯೆಯನ್ನು ನೀಡಿದೆ.

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 3.24 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 74.66 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ 707.31 ಮಿ.ಮೀ ಮಳೆ ಜಿಲ್ಲೆಯಲ್ಲಿ ಆಗಿದೆ.
ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ, ಇಂದಿನ ನೀರಿನ ಮಟ್ಟ 2,819.21 ಅಡಿ. ಒಳಹರಿವು 480 ಕ್ಯುಸೆಕ್.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ
24*7 ಕಂಟ್ರೋಲ್ ರೂಂ: 08272-221077
ವಾಟ್ಸಪ್ ನಂ : 8550001077












Click it and Unblock the Notifications