ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ; ಭಾರಿ ಮಳೆ ಮುನ್ಸೂಚನೆ, ಜು. 18 ರಿಂದ 22 ಆರೆಂಜ್ ಅಲರ್ಟ್

|
Google Oneindia Kannada News

ಮಡಿಕೇರಿ, ಜುಲೈ 16 : ಕೊಡಗು ಜಿಲ್ಲೆಯಲ್ಲಿ ಐದು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹಮಾಮಾನ ಇಲಾಖೆ ಆರೆಂಜ್ ಅಲರ್ಟ್‌ ಎಂದು ಎಚ್ಚರಿಕೆ ನೀಡಿದೆ.

ಕೊಡಗು ಜಿಲ್ಲಾಡಳಿತ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದೆ. ಜುಲೈ 18 ರಿಂದ 22ರ ತನಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. 115.6 ಮಿ. ಮೀನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮಳೆಗಾಲದ ಸ್ಪೆಷಲ್ ಕಣಿಲೆ, ಏಡಿಗೆ ಮನ ಸೋತ ಮಡಿಕೇರಿ; ಕೇಜಿ ಏಡಿಗೆ 300 ರು.ಮಳೆಗಾಲದ ಸ್ಪೆಷಲ್ ಕಣಿಲೆ, ಏಡಿಗೆ ಮನ ಸೋತ ಮಡಿಕೇರಿ; ಕೇಜಿ ಏಡಿಗೆ 300 ರು.

ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳು ಉಂಟಾದರೆ ತಕ್ಷಣ ಸಂಪರ್ಕಿಸಲು ಜಿಲ್ಲಾಡಳಿತ ಟೋಲ್ ಫ್ರೀ ಸಂಖ್ಯೆಯನ್ನು ನೀಡಿದೆ.

ವರುಣನ ಮುನಿಸಿನಲ್ಲೂ ಇರ್ಪು ಜಲಧಾರೆಯ ಥಕಥೈ...ವರುಣನ ಮುನಿಸಿನಲ್ಲೂ ಇರ್ಪು ಜಲಧಾರೆಯ ಥಕಥೈ...

kodagu rain

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 3.24 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 74.66 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ 707.31 ಮಿ.ಮೀ ಮಳೆ ಜಿಲ್ಲೆಯಲ್ಲಿ ಆಗಿದೆ.

ದುಬಾರೆಯಲ್ಲಿ ಪ್ರವಾಸಿಗರಿಂದ ರಿವರ್ ರ್‍ಯಾಫ್ಟಿಂಗ್ ಸಾಹಸದುಬಾರೆಯಲ್ಲಿ ಪ್ರವಾಸಿಗರಿಂದ ರಿವರ್ ರ್‍ಯಾಫ್ಟಿಂಗ್ ಸಾಹಸ

ನೀರಿನ ಮಟ್ಟ : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿ, ಇಂದಿನ ನೀರಿನ ಮಟ್ಟ 2,819.21 ಅಡಿ. ಒಳಹರಿವು 480 ಕ್ಯುಸೆಕ್.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ

24*7 ಕಂಟ್ರೋಲ್ ರೂಂ: 08272-221077
ವಾಟ್ಸಪ್ ನಂ : 8550001077

English summary
Indian Meteorological Department (IMD) issued Orange alert in Kodagu, Karnataka from July 18 to 22, 2019. Deputy commissioner office also issued notice to people and tourists about alert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X