ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ-ಕೇರಳ ರಾಜ್ಯ ಹೆದ್ದಾರಿ ಒಂದು ತಿಂಗಳ ಕಾಲ ಬಂದ್

By Nayana
|
Google Oneindia Kannada News

ಕೊಡಗು, ಜೂನ್ 14: ಕೊಡಗು ಜಿಲ್ಲೆಯ ದಕ್ಷಿಣ ಭಾಗದಲ್ಲಿ ಜೂನ್ 12 ರಂದು ನಿರಂತರವಾಗಿ ಭಾರಿ ಮಳೆ ಸುರಿದಿದ್ದು, ಇದರಿಂದಾಗಿ ಜಿಲ್ಲೆಯಿಂದ ನೆರೆಯ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ ಪೆರುಂಬಾಡಿಯಿಂದ ಮಾಕುಟ್ಟದವರೆಗೆ ಸುಮಾರು 25 ಕ್ಕೂ ಹೆಚ್ಚು ಭಾಗಗಳಲ್ಲಿ ಗಣನೀಯ ಪ್ರಮಾಣದ ಭೂಕುಸಿತ ಉಂಟಾಗಿದೆ.

ತಾತ್ಕಾಲಿಕವಾಗಿ ಜೂನ್ 13ರಿಂದ ಜುಲೈ 12 ರ ವರೆಗೆ ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ.

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣಕರಾವಳಿ, ದಕ್ಷಿಣ ಒಳನಾಡಿನಲ್ಲಿ ಅಬ್ಬರಿಸಲಿದ್ದಾನೆ ವರುಣ

ಇದರೊಂದಿಗೆ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುತ್ತದೆ. ಈ ಘಟನೆಯಿಂದಾಗಿ ದಿನದ ತಡರಾತ್ರಿಯಿಂದ ಜೂನ್ 13 ರ ಸಂಜೆಯ ವರೆಗೆ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಬರೆ ಕುಸಿತದಿಂದ ಒಬ್ಬರು ಮೃತಪಟ್ಟಿದ್ದಾರೆ.

Perumbadi state highway close for a month

ಆದ್ದರಿಂದ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಪೆರುಂಬಾಡಿಯಿಂದ ಮಾಕುಟ್ಟದವರೆಗಿನ ಅಡಚಣೆಯನ್ನು ತೆರವುಗೊಳಿಸಲು ಹಾಗೂ ಶೀಘ್ರವಾಗಿ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಂಚಾರಕ್ಕೆ ಯೋಗ್ಯವಾದ ರಸ್ತೆ ಕಲ್ಪಿಸುವ ನಿಟ್ಟಿನಲ್ಲಿ ಸಂಚಾರ ನಿಷೇಧಿಸಲಾಗಿದೆ.

ಹಾಗೂ ಎಲ್ಲಾ ವಾಹನ ಸಂಚಾರಿಗಳ, ರಸ್ತೆ ಮತ್ತು ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5)ರಲ್ಲಿ ಸಾರ್ವಜನಿಕರು ನಿಷೇಧಿತ ರಸ್ತೆಯ ಬದಲಿಗೆ ಗೋಣಿಕೊಪ್ಪ-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮಾರ್ಗ ವಾಹನ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ನಿಷೇಧಿತ ರಸ್ತೆಯ ಬದಲಿಗೆ ಗೋಣಿಕೊಪ್ಪ-ಪೊನ್ನಂಪೇಟೆ-ಶ್ರೀಮಂಗಲ-ಕುಟ್ಟ ಮಾರ್ಗದಲ್ಲಿ ಮೂಲಕ ಸಂಚರಿಸುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ಕರಾವಳಿ, ಕೊಡಗು, ಚಿಕ್ಕಮಗಳೂರು, ಉತ್ತರ ಕನ್ನಡ ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನ ಅನೇಕ ಭಾಗಗಳಲ್ಲಿ ಭೂ ಕುಸಿತವಾಗಿರುವುದರಿಂದ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

English summary
Due to heavy rain in south Kodagu, Perumbadi-Makuta state highway has been closed up to July 12, Kodagu deputy commissioner SriVidya declared.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X