ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನ ಕಾಫಿ ತೋಟಗಳಲ್ಲಿ ಪೊಲೀಸರಿಂದ ವಲಸಿಗರ ಪರಿಶೀಲನೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಕೊಡಗು, ಜನವರಿ 23: ಕೊಡಗಿನಲ್ಲಿ ಉಗ್ರರ ವಾಸ್ತವ್ಯದ ಶಂಕೆ ವ್ಯಕ್ತವಾದ ಬೆನ್ನಲ್ಲೇ ಪೊಲೀಸರು ಕೊಡಗಿನ ಕಾಫಿ ತೋಟಗಳಲ್ಲಿರುವ ವಲಸಿಗರ ಗುರುತು ಪರಿಶೀಲನಾ ಕಾರ್ಯವನ್ನು ಕೈಗೊಂಡಿದ್ದಾರೆ.

ಕೊಡಗು ಜಿಲ್ಲಾ ಪೊಲೀಸರಿಂದ ಜಿಲ್ಲೆಯಲ್ಲಿ ನೆಲೆಸಿರುವ ವಲಸಿಗರ ದಾಖಲಾತಿಗಳ ಪರಿಶೀಲನೆ ನಡೆಯುತ್ತಿದ್ದು, ಜಿಲ್ಲೆ ಹಾಗೂ ದೇಶದ ಭದ್ರತಾ ಹಿತದೃಷ್ಟಿಯಿಂದ ದಾಖಲಾತಿ ಪರಿಶೀಲನೆಯಲ್ಲಿ ತೊಡಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ 'ಅಕ್ರಮ ವಲಸಿಗರ' ಪತ್ತೆ ಕಾರ್ಯರಾಜ್ಯದಲ್ಲಿ ಈಗಾಗಲೇ ಶುರುವಾಗಿದೆ 'ಅಕ್ರಮ ವಲಸಿಗರ' ಪತ್ತೆ ಕಾರ್ಯ

ಜೊತೆಗೆ ಕಾಫಿ ತೋಟಗಳಲ್ಲಿ ಅಸ್ಸಾಂ, ಬಾಂಗ್ಲಾದ ಅಕ್ರಮ ವಲಸಿಗರು ನೆಲೆಸಿದ್ದಾರೆ ಎಂಬ ದೂರು ಕೇಳಿಬಂದ ಮೇರೆಗೆ ಹಾಗೂ ಗೋಣಿಕೊಪ್ಪ ವ್ಯಾಪ್ತಿಯಲ್ಲಿ ಉಗ್ರ ಚಟುವಟಿಕೆ ಸುಳಿವು ಹಿನ್ನೆಲೆ ಕೊಡಗು ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

 Police Inspecting Immigrants In Kodagu Coffee Plantations

ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಸುಮನ್ ಡಿ ಪನ್ನೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕಾಫಿ ಎಸ್ಟೇಟ್‌ಗಳಲ್ಲಿ ನೆಲೆಸಿರುವ ಹೊರ ರಾಜ್ಯಗಳ‌ ಕಾರ್ಮಿಕರ ದಾಖಲೆ ಪರಿಶೀಲನೆ ನಡೆದಿದೆ. ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕುಗಳಲ್ಲಿ ನೂರಾರು ಮಂದಿಯ ದಾಖಲೆ‌ ಪರಿಶೀಲನೆ ಸಾಗುತ್ತಿದೆ.

ದಾಖಲಾತಿ‌ ಹೊಂದಿಲ್ಲದ ಬಗ್ಗೆ ಅನುಮಾನವಿರುವ ವ್ಯಕ್ತಿಗಳನ್ನು ಕರೆತಂದು ದಾಖಲೆ ಪರಿಶೀಲನೆ ನಡೆಸಲಾಗುವುದು.

ಕೊಡಗಿನವರನ್ನು ಕಾಡುತ್ತಿದೆ ಹತ್ತಾರು ಸಮಸ್ಯೆಗಳು..!ಕೊಡಗಿನವರನ್ನು ಕಾಡುತ್ತಿದೆ ಹತ್ತಾರು ಸಮಸ್ಯೆಗಳು..!

ಮೂರೂ ತಾಲ್ಲೂಕುಗಳಲ್ಲಿ ಆನ್‌ಲೈನ್ ಮೂಲಕ ಆಧಾರ್, ಓಟರ್ ಐಡಿ, ಡಿಎಲ್, ಪಾನ್ ಮೊದಲಾದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ವಲಸಿಗರ ಮೇಲೆ‌ ಹೆಚ್ಚಿನ‌ ನಿಗಾ ಇಡಲು, ವಲಸಿಗರಿಂದ ಅಪರಾಧ ಪ್ರಕರಣಗಳು ನಡೆಯದಂತೆ ತಡೆಯಲು ಕ್ರಮವಹಿಸಲಾಗಿದೆ. ಈ ಕಾರ್ಯಕ್ಕೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಅವರಿಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

English summary
The police have taken up the identity checks of immigrant workers in the coffee plantations after suspicious about the militants' stay in Kodagu
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X