ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟಿಸಿದ ರಾಷ್ಟ್ರಪತಿ ರಾಮನಾಥ ಕೋವಿಂದ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಫೆಬ್ರವರಿ 6: ಭಾರತದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿದರು.

ಮಡಿಕೇರಿ ನಗರದಲ್ಲಿ ಶನಿವಾರ ನಡೆದ ಜ.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಹಾಗೂ ಅವರ ಧರ್ಮಪತ್ನಿ ಸವಿತಾ, ಚೀಫ್ ಆಫ್ ದಿ ಡಿಪೇನ್ಸ್ ಬಿಪಿನ್ ರಾವತ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಭಾಗವಹಿಸಿದ್ದರು.

ಕೊಡಗಿಗೆ ಆಗಮಿಸಿದ ರಾಷ್ಟ್ರಪತಿ; ತಲಕಾವೇರಿಯಲ್ಲಿ ವಿಶೇಷ ಪೂಜೆ ಕೊಡಗಿಗೆ ಆಗಮಿಸಿದ ರಾಷ್ಟ್ರಪತಿ; ತಲಕಾವೇರಿಯಲ್ಲಿ ವಿಶೇಷ ಪೂಜೆ

ಕೊಡಗು ಜಿಲ್ಲೆಯ ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ಅದೇ ರೀತಿ ವೀಣಾ ಅಚ್ಚಯ್ಯ, ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಏರ್ ಮಾರ್ಷಲ್(ನಿ) ಕಾರ್ಯಪ್ಪ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಫೋರಂ ಅಧ್ಯಕ್ಷರಾದ ಕರ್ನಲ್(ನಿ) ಸುಬ್ಬಯ್ಯ, ಸಂಚಾಲಕರಾದ ಮೇಜರ್(ನಿ) ಬಿದ್ದಂಡ ನಂಜಪ್ಪ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರಾ ಇತರರು ಇದ್ದರು.

Madikeri: President Ramanath Kovind Inaugurates The Genaral Timmayya Museum

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಜನರಲ್ ಕೆ.ಎಸ್.ತಿಮ್ಮಯ್ಯ ವಸ್ತುಸಂಗ್ರಹಾಲಯ ಉದ್ಘಾಟನೆಗೂ ಮೊದಲು ವಸ್ತುಸಂಗ್ರಹಾಲಯ ಆವರಣದಲ್ಲಿರುವ ಯುದ್ದ ಟ್ಯಾಂಕ್, ಯುದ್ಧ ವಿಮಾನ ವೀಕ್ಷಿಸಿದರು. ನಂತರ ಯುದ್ಧ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ಅವರು ಭಾಗಮಂಡಲದ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

English summary
President of India Ramanath Kovind, inaugurated the museum of the veteran Soldier general KS Thimmaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X