• search
  • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಡಗಿಗೆ ಆಗಮಿಸಿದ ರಾಷ್ಟ್ರಪತಿ; ತಲಕಾವೇರಿಯಲ್ಲಿ ವಿಶೇಷ ಪೂಜೆ

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಫೆಬ್ರವರಿ 6: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ಕೊಡಗಿನ ಭಾಗಮಂಡಲ ಹೆಲಿಪ್ಯಾಡಗೆ ಭಾರತೀಯ ವಾಯು ಪಡೆಯ ವಿಶೇಷ ವಿಮಾನದಲ್ಲಿ ಆಗಮಿಸಿದರು.

ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವರಾದ ವಿ.ಸೋಮಣ್ಣ ಸಹ ರಾಷ್ಟ್ರಪತಿಯವರ ಜೊತೆ ಆಗಮಿಸಿದರು.

ರಾಷ್ಟ್ರಪತಿಗಳ ಕೊಡಗು ಭೇಟಿ; ಬಿಗಿ ಬಂದೋಬಸ್ತ್ ರಾಷ್ಟ್ರಪತಿಗಳ ಕೊಡಗು ಭೇಟಿ; ಬಿಗಿ ಬಂದೋಬಸ್ತ್

ರಾಷ್ಟ್ರಪತಿಯವರನ್ನು ಕೊಡಗು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ನಂತರ ತಲಕಾವೇರಿ ದೇವಸ್ಥಾನಕ್ಕೆ ತೆರಳಿದರು. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್, ಅವರ ಧರ್ಮಪತ್ನಿ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಜಿಲ್ಲಾಧಿಕಾರಿ ಚಾರುಲತ ಸೋಮಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರಾ ಇತರರು ಇದ್ದರು.

ದೇವಸ್ಥಾನದ ಅರ್ಚಕರು ಪೂರ್ಣಕುಂಭದೊಂದಿಗೆ ಮಾನ್ಯ ರಾಷ್ಟ್ರಪತಿ ಅವರನ್ನು ಸ್ವಾಗತಿಸಿದರು. ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯ ಅರ್ಚಕದಾದ ರಾಜೇಶ್ ಆಚಾರ್ಯ, ಸುಧೀರ್ ಆಚಾರ್ಯ ಮತ್ತು ಸಹಾಯಕ ಅರ್ಚಕರಾದ ಅಖಿಲೇಶ್, ಪ್ರಸಾದ್, ಶ್ರೀನಿವಾಸ್ ಅವರು ಪೂಜೆ ನೆರವೇರಿಸಿದರು. ಪೂಜೆಯ ಬಳಿಕ ಮಡಿಕೇರಿಗೆ ಆಗಮಿಸಲಿದ್ದಾರೆ.

English summary
President of India Ramanath Kovind, arrived in Bhagamandala in the Indian Air Force special flight on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X