ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯನ್ನು ಖಂಡಿಸಿದ ಹಿಂದೂಪರ ಸಂಘಟನೆಗಳು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಆಗಸ್ಟ್ 12: ಬೆಂಗಳೂರಿನ ದೇವರ ಜೀವನಹಳ್ಳಿ (ಡಿಜೆ ಹಳ್ಳಿ) ಮತ್ತು ಕಾಡುಗೊಂಡನ ಹಳ್ಳಿ (ಕೆಜಿ ಹಳ್ಳಿ)ಯಲ್ಲಿ ಮಂಗಳವಾರ ರಾತ್ರಿ ನಡೆದ ಕಿಡಿಗೇಡಿಗಳ ದಾಂಧಲೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಬುಧವಾರ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿದವು.

ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಅವರ ಅಕ್ಕಪಕ್ಕದ ಹಿಂದೂಗಳ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ಮೇಲಿನ ದಾಳಿಯನ್ನು ಖಂಡಿಸಿದರು.

ರಾಮನಗರ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆರಾಮನಗರ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ವಿಶ್ವ ಹಿಂದೂ ಪರಿಷತ್, ಭಜರಂಗ ದಳ, ಹಿಂದೂ ಜಾಗರಣ ವೇದಿಕೆ ಹಾಗೂ ಸಂಘ ಪರಿವಾರದ ವಿವಿಧ ಸಂಘಟನೆಗಳ ಕಾರ್ಯಕರ್ತರು ಎಸ್‍ಡಿಪಿಐ ಹಾಗೂ ಪಿಎಫ್ಐ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಮತಾಂಧರ ಗಡಿಪಾರಿಗೆ ಆಗ್ರಹಿಸಿದರು. ಈ ಎರಡೂ ಸಂಘಟನೆಗಳನ್ನು ಕೂಡಲೇ ನಿಷೇದಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

Madikeri: Protest By Hindu Organizations Condemning The KG Halli Riot

ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ. ನರಸಿಂಹ ಮಾತನಾಡಿ, ನಮ್ಮನ್ನು ಕಾಯುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ದೇಶದಲ್ಲಿದ್ದುಕೊಂಡು ಸಮಾಜ ಒಡೆಯುವ ಮತಾಂಧರು ದೇಶ ಬಿಟ್ಟು ತೊಲಗಲಿ ಎಂದು ಆಗ್ರಹಿಸಿದರು.

ಈ ಮತಾಂಧರಿಗೆ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆಯೂ ನಂಬಿಕೆ ಇಲ್ಲ ಎಂದು ಕಿಡಿಕಾರಿದವರು. ಭಜರಂಗ ದಳ, ಹಿಂದೂ ಜಾಗರಣ ವೇದಿಕೆ, ಬಿಜೆಪಿ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡರು ಹಾಜರಿದ್ದರು.

English summary
The pro-Hindu organizations staged protests in Madikeri city on Wednesday, condemning Tuesday's Riot in DJ Halli and KG Halli.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X