ಪರೀಕ್ಷೆ ಮುಗಿಯುತ್ತಿದ್ದಂತೆ ವಿದ್ಯಾರ್ಥಿಗಳಿಗೆ ಕ್ವಾರಂಟೈನ್
ಮಡಿಕೇರಿ, ಮೇ 26 : ಕರ್ನಾಟಕದಲ್ಲಿ ಎಸ್. ಎಸ್. ಎಲ್. ಸಿ ಮತ್ತು ಒಂದು ಭಾಷೆಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ದಿನಾಂಕ ನಿಗದಿಯಾಗಿದೆ. ಪಕ್ಕದ ರಾಜ್ಯ ಕೇರಳದಲ್ಲಿ ಮಂಗಳವಾರದಿಂದ ಪರೀಕ್ಷೆಗಳು ಆರಂಭವಾಗಿವೆ.
Recommended Video
ಕೇರಳದ ವಯನಾಡ್ ಜಿಲ್ಲೆಯಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿಯುಸಿ ವ್ಯಾಸಂಗ ಮಾಡುತ್ತಿರುವ ಕೊಡಗು ಜಿಲ್ಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಯನಾಡ್ ಜಿಲ್ಲಾಡಳಿತದ ಸಹಕಾರದೊಂದಿಗೆ ವ್ಯವಸ್ಥೆ ಮಾಡಲಾಗಿದೆ.
'ಪರೀಕ್ಷೆ ಬರೆಯಲು ಹೋಗುವ ವಿದ್ಯಾರ್ಥಿಗಳಿಗೆ ಸುಗಮ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಈ ಸಂಬಂಧ ಉಪ ನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು, ಕುಟ್ಟ ಇವರನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ' ಎಂದು ಕೊಡಗು ಜಿಲ್ಲಾಡಳಿತ ಹೇಳಿದೆ.

ವಿದ್ಯಾರ್ಥಿಗಳು ಯಾವುದೇ ತೊಂದತೆ ಇಲ್ಲದಂತೆ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗಿದೆ. ಪರೀಕ್ಷೆಗಳು ಮುಗಿದ ನಂತರ ಸದರಿ ವಿದ್ಯಾರ್ಥಿಗಳನ್ನು 14 ದಿನಗಳವರೆಗೆ ಕಟ್ಟುನಿಟ್ಟಿನ ಸಂಪರ್ಕ ತಡೆಯಲ್ಲಿ ಇರಿಸಲಾಗುತ್ತದೆ ಎಂದು ಕೊಡಗು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ತಮಿಳುನಾಡು ಮತ್ತು ಕರ್ನಾಟಕದಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆಗಳು ಬಾಕಿ ಇದೆ. ಕೊರೊನಾ ಹರಡದಂತೆ ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಮಾರ್ಚ್‌ನಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಜೂನ್ 25ರಿಂದ ಜುಲೈ 4ರ ತನಕ ಕರ್ನಾಟಕದಲ್ಲಿ ಎಸ್. ಎಸ್. ಎಲ್. ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.












Click it and Unblock the Notifications