ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಡಿಕೇರಿಯಲ್ಲಿ ಕಡಿಮೆಯಾದ ವರ್ಷಧಾರೆ; ರೆಡ್ ಅಲರ್ಟ್ ವಾಪಸ್

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜುಲೈ 25: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಜಿಲ್ಲೆಯಲ್ಲಿ ಘೋಷಿಸಿದ್ದ ರೆಡ್ ಅಲರ್ಟ್ ಹಿಂಪಡೆಯಲಾಗಿದೆ. ಜುಲೈ 29ರ ವರೆಗೆ ಜಿಲ್ಲೆಯಲ್ಲಿ ಸಾಮಾನ್ಯ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಕೇವಲ 14.21 ಮಿ.ಮೀ. ಮಳೆಯಾಗಿದ್ದು ವಿರಾಜಪೇಟೆಯಲ್ಲಿ 10.80 ಮಿ.ಮೀ. ಹಾಗೂ ಸೋಮವಾರಪೇಟೆಯಲ್ಲಿ 4.73 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಮಳೆ ಇಳಿಮುಖವಾದ ಕಾರಣ ರೆಡ್ ಅಲರ್ಟ್ ಹಿಂಪಡೆಯಲಾಗಿದೆ. ಮುಂದಿನ ಐದು ದಿನಗಳವರೆಗೆ ಸಾಮಾನ್ಯ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

 ಕೊಡಗಿನಲ್ಲಿ ಮೃತ್ಯುವಾಗಿ ಕಾಡುತ್ತಿದೆಯಾ ಮನೆ ಹಿಂಬದಿಯ ಬರೆ? ಕೊಡಗಿನಲ್ಲಿ ಮೃತ್ಯುವಾಗಿ ಕಾಡುತ್ತಿದೆಯಾ ಮನೆ ಹಿಂಬದಿಯ ಬರೆ?

ಮಳೆ ಕಡಿಮೆಯಾಗಿದ್ದರೂ ಮಂಜು ಮುಸುಕಿದ ವಾತಾವರಣದೊಂದಿಗೆ ಜಿಟಿ ಜಿಟಿ ಮಳೆಯಾಗುತ್ತಿದೆ. ಜೊತೆಗೆ ಮೈ ಕೊರೆಯುವ ಚಳಿ ಕೂಡ ಆರಂಭವಾಗಿದೆ.

rain fall reduced in Madikeri

ಕೊಡಗಿನ ಭಾಗದಲ್ಲಿ ಜನವರಿಯಿಂದ ಇಲ್ಲಿಯವರೆಗೆ 863 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ ಶೇ 35ರಷ್ಟು ಕಡಿಮೆ ಮಳೆಯಾಗಿದೆ. ಇದುವರೆಗೂ ಜಿಲ್ಲೆಯ 14 ಕಡೆಗಳಲ್ಲಿ ಸಣ್ಣ- ಪುಟ್ಟ ಮಣ್ಣು ಕುಸಿತ ಪ್ರಕರಣಗಳು ಕಂಡುಬಂದಿದ್ದು, ಕೆಲವು ರಸ್ತೆಯಲ್ಲಿ ಬಿರುಕು ಸಹ ಇದೆ.

ಮಳೆಗಾಗಿ ಪೇಜಾವರ ಶ್ರೀಗಳಿಂದ ತಲಕಾವೇರಿಯಲ್ಲಿ ಪೂಜೆ ಮಳೆಗಾಗಿ ಪೇಜಾವರ ಶ್ರೀಗಳಿಂದ ತಲಕಾವೇರಿಯಲ್ಲಿ ಪೂಜೆ

ಮಳೆಯಿಂದ ಸಂಭವಿಸುವ ಅನಾಹುತವನ್ನು ತಡೆಯಲು ಎರಡು ತಿಂಗಳಿಂದ ಜಿಲ್ಲಾಡಳಿತ ಎಲ್ಲ ರೀತಿ ಸಿದ್ಧತೆ ಮಾಡಿಕೊಂಡಿದೆ. ಸದ್ಯಕ್ಕೆ ಕಂಟ್ರೋಲ್ ರೂಮ್ ದೂರುಗಳನ್ನು ಸ್ವೀಕರಿಸುತ್ತಿದ್ದು, ಭೂಕುಸಿತ ಹಾಗೂ ಬಿರುಕು ಬಿಟ್ಟಿರುವ ರಸ್ತೆಗಳ ಬಗ್ಗೆ ಅಧಿಕಾರಿಗಳು ಎಚ್ಚರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಆಶಾಭಾವ ಮೂಡಿಸಿದೆ ಮುಂಗಾರು ಮಳೆ ಮಡಿಕೇರಿಯಲ್ಲಿ ಆಶಾಭಾವ ಮೂಡಿಸಿದೆ ಮುಂಗಾರು ಮಳೆ

"ಕೊಡಗು ಜಿಲ್ಲೆಯ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಮಳೆಗಾಲಕ್ಕೆ ಸಂಬಂಧಿಸಿದಂತೆ ಎಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮವನ್ನು ಜಿಲ್ಲಾಡಳಿತ ವಹಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿರುವುದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.

English summary
Low rainfall recorded in Madikeri district today. District administration has took back red alert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X