ಕೊಡಗಿನಲ್ಲಿ ತಗ್ಗಿದ ಮುಂಗಾರು ಮಳೆ ಅಬ್ಬರ, ಎಷ್ಟು ಮಳೆಯಾಗಿದೆ?
ಮಡಿಕೇರಿ, ಜುಲೈ 23: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆ ಆಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 1,632.63 ಮಿ. ಮೀ.. ಆದರೆ ಕಳೆದ ವರ್ಷ ಇದೇ ಅವಧಿಯಲ್ಲಿ 769.11 ಮಿ. ಮೀ. ಮಳೆಯಾಗಿತ್ತು.
ಜಿಲ್ಲಾಡಳಿತ ನೀಡಿದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಕೇವಲ 19.88 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 51.28 ಮಿ. ಮೀ. ಮಳೆ ಸುರಿದಿತ್ತು.

ಮಡಿಕೇರಿ ತಾಲೂಕಿನಲ್ಲಿ ಸರಾಸರಿ ಮಳೆ 10.78 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ದಿನ 52.40 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ತಾಲೂಕಿನಲ್ಲಿ ಸುರಿದ ಮಳೆ ಮಳೆ 2,296.20 ಮಿ. ಮೀ ಆಗಿದೆ.
ವಿರಾಜಪೇಟೆ ತಾಲೂಕಿನಲ್ಲಿ ಸರಾಸರಿ 1.10 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 43.95 ಮಿ. ಮೀ. ಮಳೆಯಾಗಿತ್ತು. ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗಿನ ಮಳೆ 1,567.05 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 600.56 ಮಿ. ಮೀ. ಮಳೆಯಾಗಿತ್ತು.
ಪೊನ್ನಂಪೇಟೆ ತಾಲೂಕಿನಲ್ಲಿ ಸರಾಸರಿ 20.93 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 60.73 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1,550.96 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 644.84 ಮಿ. ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಸರಾಸರಿ ಮಳೆ 60.80 ಮಿ.ಮೀ. ಆಗಿದೆ. ಕಳೆದ ವರ್ಷ ಇದೇ ದಿನ 76.40 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1710.96 ಮಿ. ಮೀ. ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 788.81 ಮಿ. ಮೀ. ಮಳೆಯಾಗಿತ್ತು.
ಕುಶಾಲನಗರ ತಾಲೂಕಿನಲ್ಲಿ ಸರಾಸರಿ 5.80 ಮಿ. ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.90 ಮಿ. ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1038 ಮಿ. ಮೀ.. ಕಳೆದ ವರ್ಷ ಇದೇ ಅವಧಿಯಲ್ಲಿ 502.55 ಮಿ. ಮೀ. ಮಳೆಯಾಗಿತ್ತು.
ಕೊಡಗು ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ ಹೀಗಿದೆ. ಮಡಿಕೇರಿ ಕಸಬಾ 8.60, ನಾಪೋಕ್ಲು 5.80, ಸಂಪಾಜೆ 8.50, ಭಾಗಮಂಡಲ 20.20, ವಿರಾಜಪೇಟೆ 2.20, ಹುದಿಕೇರಿ 14.50, ಶ್ರೀಮಂಗಲ 32.20, ಪೊನ್ನಂಪೇಟೆ 21.01, ಬಾಳೆಲೆ 16.02, ಸೋಮವಾರಪೇಟೆ ಕಸಬಾ 55, ಶನಿವಾರಸಂತೆ 40, ಶಾಂತಳ್ಳಿ 100, ಕೊಡ್ಲಿಪೇಟೆ 48.20, ಕುಶಾಲನಗರ 2.60, ಸುಂಟಿಕೊಪ್ಪ 9 ಮಿ.ಮೀ.ಮಳೆಯಾಗಿದೆ.
ಹಾರಂಗಿ ಡ್ಯಾಂ ನೀರಿನ ಮಟ್ಟ: ಕೊಡಗು ಜಿಲ್ಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ಡ್ಯಾಂ ಹಾರಂಗಿ ಇದೆ. 22/7/2024ರ ವರದಿಯಂತೆ ಡ್ಯಾಂ ಸಂಪೂರ್ಣ ಭರ್ತಿಯಾಗಿದ್ದು, ನದಿಗೆ ನೀರು ಹರಿಸಲಾಗುತ್ತಿದೆ.
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು. ಇಂದಿನ ನೀರಿನ ಮಟ್ಟ 2855.25 ಅಡಿಗಳು. ಕಳೆದ ವರ್ಷ ಇದೇ ದಿನ 2853.11 ಅಡಿಗಳ ನೀರಿನ ಸಂಗ್ರಹವಿತ್ತು. ಹಾರಂಗಿಯಲ್ಲಿ ಬಿದ್ದ ಮಳೆ 6.20 ಮಿ.ಮೀ. ಆಗಿದೆ.
ಡ್ಯಾಂಗೆ ಒಳ ಹರಿವು 7281 ಕ್ಯುಸೆಕ್. ಕಳೆದ ವರ್ಷ ಇದೇ ದಿನ 4460 ಕ್ಯುಸೆಕ್ ಒಳಹರಿವು ಇತ್ತು. ಹೊರ ಹರಿವು ನದಿಗೆ 4000 ಕ್ಯುಸೆಕ್ ಆಗಿದೆ.
ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಪಾಯ ಸ್ಥಳಗಳಲ್ಲಿ ವಾಸಿಸುತ್ತಿರುವವರಿಗೆ ಈಗಾಗಲೇ ಮಡಿಕೇರಿ ನಗರಸಭೆಯಿಂದ ಖುದ್ದಾಗಿ ನೋಟೀಸ್ ಜಾರಿ ಮಾಡಿರುವುದಲ್ಲದೇ, ನಗರಸಭೆಯ ಸಿಬ್ಬಂದಿಗಳು ಜನರ ಜೊತೆ ಮುಖಾಮುಖಿ ಮಾತನಾಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ತಿಳಿಸಿದ್ದಾರೆ.
ಅಪಾಯ ಸ್ಥಳಗಳಲ್ಲಿ ಅಥವಾ ಸುರಕ್ಷಿತವಲ್ಲದ ಪ್ರದೇಶಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ಮರಗಳ ಹತ್ತಿರ ವಾಸವಿರುವವರು ಮುಂದಿನ ಅನಾಹುತ ತಪ್ಪಿಸಲು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಲಾಗಿದೆ.
ಇದನ್ನು ಮೀರಿ ಅಲ್ಲೇ ವಾಸವಿದ್ದು, ಯಾವುದೇ ರೀತಿಯಲ್ಲಿ ಅನಾಹುತ ಅವಘಡ ಸಂಭವಿಸಿದಲ್ಲಿ, ಮುಂದಿನ ಆಗುಹೋಗುಗಳಿಗೆ ನಗರಸಭೆ ಜವಾಬ್ದಾರರಲ್ಲ ಎಂದು ನಗರಸಭೆ ತಿಳಿಸಿದೆ. ತುರ್ತು ಸಂದರ್ಭದಲ್ಲಿ ನಗರಸಭೆ ಸಹಾಯವಾಣಿ ದೂರವಾಣಿ ಸಂಖ್ಯೆ 08272-220111 ಅನ್ನು ಸಂಪರ್ಕಿಸಬಹುದು.












Click it and Unblock the Notifications