ಫೆ.6ರಂದು ಮಡಿಕೇರಿಗೆ ಭೇಟಿ ನೀಡಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮಡಿಕೇರಿ, ಜನವರಿ 16: ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಫೆ.6 ರಂದು ಮಡಿಕೇರಿಗೆ ಆಗಮಿಸಲಿದ್ದಾರೆ.
ಮಡಿಕೇರಿಯಲ್ಲಿ ನಿರ್ಮಾಣ ಆಗಿರುವ ಜನರಲ್ ತಿಮ್ಮಯ್ಯ ವಸ್ತು ಸಂಗ್ರಹಾಲಯ ಉದ್ಘಾಟನೆ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಫೆ.6 ರಂದು ಮಡಿಕೇರಿಗೆ ಬರಲು ಒಪ್ಪಿಗೆ ಸೂಚಿಸಿದ್ದಾರೆ.
ಕೊಡಗು ತೊರೆದು ದೀರ್ಘ ರಜೆಗೆ ಡಿಸಿ ಅನ್ನಿಸ್ ಕಣ್ಮಣಿ ಜಾಯ್
ಜನರಲ್ ತಿಮ್ಮಯ್ಯ ಹುಟ್ಟಿದ ಮನೆ ಸನ್ನಿ ಸೈಡ್ ನಲ್ಲಿ ಅಪೂರ್ವ ಮ್ಯೂಸಿಯಮ್ ಗಮನ ಸೆಳೆಯಲಿದೆ. ಫೀಲ್ಡ್ ಮಾರ್ಷಲ್ ಕಾರ್ಯಪ್ಪ-ಜನರಲ್ ತಿಮ್ಮಯ್ಯ ಫೋರಮ್ ಅಧ್ಯಕ್ಷ ಕೆ.ಸಿ ಸುಬ್ಬಯ್ಯ ಆಹ್ವಾನದ ಮೇರೆಗೆ ರಾಷ್ಟ್ರಪತಿಗಳು ಕೊಡಗಿಗೆ ಬರುತ್ತಿದ್ದಾರೆ.
ಕೊರೊನಾ ಲಸಿಕೆಯನ್ನ ಮೊದಲು ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು- ಶಾಸಕಿ ಸೌಮ್ಯ ರೆಡ್ಡಿ ಅಭಿಪ್ರಾಯ |Oneindia Kannada
ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ ಸಂಜೆ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದ್ದು, ಕೊಡಗಿನ ಪಾಲಿಗೆ ಅತ್ಯಂತ ಮಹತ್ವದ ಕಾರ್ಯಕ್ರಮವಾಗಿದೆ. ವೀರ ಸೇನಾನಿ ತಿಮ್ಮಯ್ಯ ಮ್ಯೂಸಿಯಮ್ ಗೆ ದೇಶದ ಪ್ರಥಮ ಪ್ರಜೆಯಿಂದ ಲೋಕಾರ್ಪಣೆ ಭಾಗ್ಯ ಸಿಗಲಿದೆ.