ಸಂವಿಧಾನದ ಪೀಠಿಕೆ ಓದು; ಕೊಡಗಿನಲ್ಲಿ 2 ಲಕ್ಷಕ್ಕೂ ಅಧಿಕ ನೋಂದಣಿ
ಮಡಿಕೇರಿ, ಸೆಪ್ಟೆಂಬರ್ 13; ಕರ್ನಾಟಕ ಸರ್ಕಾರ ಸೆಪ್ಟೆಂಬರ್15ರಂದು ಭಾರತ ಸಂವಿಧಾನದ ಪೀಠಿಕೆ ಓದಲು ಎಲ್ಲರಿಗೂ ಅವಕಾಶ ನೀಡಿದೆ. ಜನರು, ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಈ ಕಾರ್ಯಕ್ರಮಕ್ಕೆ ಆನ್‍ಲೈನ್ ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹುದು, ಪಾಲ್ಗೊಂಡವರಿಗೆ ಪ್ರಮಾಣ ಪತ್ರವನ್ನು ಸಹ ನೀಡಲಾಗುತ್ತದೆ.
ಸಂವಿಧಾನದ ಪೀಠಿಕೆ ಓದಲು ಆನ್‍ಲೈನ್ ನೋಂದಣಿ ಮಾಡಿಕೊಳ್ಳುವುದು ಸರಳವಾಗಿದೆ. ಸಮಾಜ ಕಲ್ಯಾಣ ಇಲಾಖೆ ರೂಪಿಸಿರುವ ವೆಬ್‍ಸೈಟ್ https://thepreamble-swdkar.in ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸ, ಮುಂತಾದ ವಿವರ ನೀಡಿ ನೋಂದಣಿ ಮಾಡಿಕೊಳ್ಳಬೇಕು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ವಿಭಿನ್ನವಾಗಿ ಆಚರಿಸುವ ನಿಟ್ಟಿನಲ್ಲಿ, ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರ ಆಯೋಜಿಸಿದೆ. ಸೆ.15ರ ಬೆಳಗ್ಗೆ 10 ಗಂಟೆಗೆ ಸಂವಿಧಾನದ ಪೀಠಿಕೆಯನ್ನು ಓದಿ, ಅದನ್ನು ಪ್ರತಿಜ್ಞಾ ವಿಧಿಯಂತೆ ಸ್ವೀಕರಿಸಬೇಕು. ಅದರ ಫೋಟೋವನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡಿಕೊಂಡಲ್ಲಿ, ಎಲ್ಲರಿಗೂ ಅದೇ ವೆಬ್‍ಸೈಟ್ ಮೂಲಕವೇ ಪ್ರಮಾಣಪತ್ರ ದೊರೆಯಲಿದೆ.
ಕೊಡಗಿನಲ್ಲಿ 2 ಲಕ್ಷ ನೋಂದಣಿ; ಕೊಡಗು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಬಿ. ಎನ್. ವೀಣಾ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆಪ್ಟೆಂಬರ್ 15ರಂದು ಬೆಳಗ್ಗೆ 10ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯುವ 'ಸಂವಿಧಾನ ಪೀಠಿಕೆ ವಾಚನ' ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಪಾಲ್ಗೊಳ್ಳಲಿದ್ದಾರೆ ಎಂದರು.
ಜಿಲ್ಲೆಗೆ 54 ಸಾವಿರ ಗುರಿ ನೀಡಲಾಗಿತ್ತು. ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಿಧಾನದ ಪೀಠಿಕೆ ಓದಬಹುದಾಗಿದೆ.
ಸಂವಿಧಾನ ಪೀಠಕೆ ಓದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಪ್ಟೆಂಬರ್ 15ರ ಬೆಳಗ್ಗೆ 10 ಗಂಟೆ ತನಕ ಹೆಸರು ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡದಿರುವವರು ಹೆಸರು ನೋಂದಾಯಿಸಿಕೊಳ್ಳುವಂತೆ ಈಗಾಗಲೇ ಮನವಿ ಮಾಡಲಾಗಿದೆ. ಭಾರತ ಸಾರ್ವಭೌಮತ್ವ, ಅಖಂಡತೆ ಮತ್ತು ಏಕತೆಯನ್ನು ಎತ್ತಿ ಹಿಡಿಯುವುದರ ಜೊತೆಗೆ, ಕಾಪಾಡುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಸಂವಿಧಾನವು ಡಾ. ಅಂಬೇಡ್ಕರ್ ಅವರು ನಮಗೆ ನೀಡಿರುವ ಜ್ಞಾನ ದೀವಿಗೆ, ಸಮಾನತೆಯ ದೀವಿಗೆಯಾಗಿದೆ. ಹೀಗಾಗಿ ಸಂವಿಧಾನದ ಪೀಠಿಕೆ ಓದುವುದು ಮಹತ್ವವಾದ ಉದ್ದೇಶ ಹೊಂದಿದ್ದು, ಇದು ವಿದ್ಯಾರ್ಥಿಗಳು ತಮ್ಮ ರಾಷ್ಟ್ರ ನಿರ್ಮಿಸಿರುವ ಮೂಲಭೂತ ತತ್ವಗಳು, ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ಸಂವಿಧಾನ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭಾತೃತ್ವದಂತಹ ಪರಿಕಲ್ಪನೆ ಒಳಗೊಂಡಿದೆ. ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ನೆನಪಿಸುವ ಮೂಲಕ ದೇಶಭಕ್ತಿಯ ಭಾವನೆ ಮತ್ತು ಒಬ್ಬರ ದೇಶಕ್ಕೆ ಬಾಂಧವ್ಯ ಬೆಳೆಸುತ್ತದೆ. ನಾಗರಿಕರಾಗಿ ಅವರ ಹಕ್ಕುಗಳು, ಜವಾಬ್ದಾರಿಗಳನ್ನು ಅರಿಯಲು ಸಹಕಾರಿಯಾಗಲಿದೆ. ರಾಷ್ಟ್ರದ ಏಕತೆ ಮತ್ತು ವೈವಿಧ್ಯತೆಯನ್ನು ಸಂವಿಧಾನದ ಪೀಠಿಕೆ ಒತ್ತಿ ಹೇಳುತ್ತದೆ. ಆದ್ದರಿಂದ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಕಡ್ಡಾಯವಾಗಿ ಆಯೋಜನೆ ಮಾಡಲಾಗುತ್ತಿದೆ.
ಸೆಪ್ಟೆಂಬರ್ 15ರಂದು ಎಲ್ಲರೂ ಸಂವಿಧಾನದ ಪೀಠಿಕೆಯಾದ, "ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ್ಯ ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ, ಅವರಲ್ಲಿ ಭ್ರಾತೃತ್ವಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕವಾಗಿ ಸಂಕಲ್ಪ ಮಾಡಿದವರಾಗಿ ನಮ್ಮ ಸಂವಿಧಾನ ಸಭೆಯಲ್ಲಿ 1949, ನವೆಂಬರ್ 26 ರಂದು ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ" ಎಂಬುದಾಗಿ ಓದಿ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications