ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ನಿಲ್ಲದ ಗಾಳಿ ಮಳೆ: ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ಮಡಿಕೇರಿ, ಆಗಸ್ಟ್‌ 07: ಕೊಡಗಿನಲ್ಲಿ ಭಾರೀ ಗಾಳಿಸಹಿತ ಧಾರಾಕಾರವಾಗಿ ಮಳೆಯಾಗುತ್ತಿದ್ದು, ನದಿ ತೊರೆಗಳು ಉಕ್ಕಿಹರಿಯುತ್ತಿವೆ. ಹಲವಾರು ಪ್ರದೇಶಗಳು ಜಲಾವೃತವಾಗುವುದರೊಂದಿಗೆ, ಅಲ್ಲಲ್ಲಿ ಭೂಕುಸಿತ ಸಂಭವಿಸಿದೆ.

ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕಾಗಿರುವ ಕಾರಣ ಆ.7 ರಿಂದ ಆ.8ರ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್, ಆಗಸ್ಟ್ 08 ರ ಬೆಳಿಗ್ಗೆಯಿಂದ ಆ.11ರ ಬೆಳಿಗ್ಗೆವರೆಗೆ ಆರೆಂಜ್ ಅಲರ್ಟ್ ಅ‌ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಆ.11ರವರೆಗೂ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧಆ.11ರವರೆಗೂ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ

ಈ ನಡುವೆ ಜಿಲ್ಲೆಯಲ್ಲಿನ ಪ್ರವಾಹ ಪರಿಸ್ಥಿತಿ ಎದುರಿಸಲು ಅಗ್ನಿಶಾಮಕ ಇಲಾಖೆ ಸಂಪೂರ್ಣ ಸಜ್ಜುಗೊಂಡಿದೆ ಎಂದು ಮೈಸೂರು ಪ್ರಾಂತ್ಯದ ಅಗ್ನಿಶಾಮಕ ಅಧಿಕಾರಿ ಸಿ.ಗುರುಲಿಂಗಯ್ಯ ಅವರು ತಿಳಿಸಿದ್ದಾರೆ.

kodagu: Red Alert Announced In District Because Of Continuous Rain

ಈ ಕುರಿತಂತೆ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ಜಿಲ್ಲೆಯಲ್ಲಿನ ನದಿ ಪಾತ್ರದ ಭಾಗದಲ್ಲಿ ಮತ್ತು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದು ಮತ್ತು ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಅಗ್ನಿಶಾಮಕ ಇಲಾಖೆ ಸಂಪೂರ್ಣ ಸಜ್ಜಾಗಿದೆ" ಎಂದು ತಿಳಿಸಿದರು.

ಹರಿಹರದಲ್ಲಿ ಪ್ರವಾಹ ಭೀತಿ; ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆಹರಿಹರದಲ್ಲಿ ಪ್ರವಾಹ ಭೀತಿ; ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಜಿಲ್ಲೆಯಲ್ಲಿ 60 ಜನರ ತಂಡವಿದ್ದು, ಮಂಗಳೂರಿನಿಂದ 20 ಮತ್ತು ಬೆಂಗಳೂರಿನಿಂದ 23 ಜನರ ಹೆಚ್ಚುವರಿ ಎಸ್‌ಡಿಆರ್ ಎಫ್ ತಂಡವನ್ನು ಕರೆಸಿಕೊಳ್ಳಲಾಗಿದೆ. ಅಲ್ಲದೆ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮತ್ತು ಮಡಿಕೇರಿ, ಗೋಣಿಕೊಪ್ಪ, ಕುಶಾಲನಗರ ಜಿಲ್ಲಾ ಅಗ್ನಿಶಾಮಕ ಸಿಬ್ಬಂದಿಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

kodagu: Red Alert Announced In District Because Of Continuous Rain

ಕಳೆದ ಒಂದು ದಿನದ ಅವಧಿಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಜಿಲ್ಲೆಯಲ್ಲಿ ಸರಾಸರಿ ಮಳೆ 180.74 ಮಿ.ಮೀ. ಮಳೆ ಸುರಿದಿದೆ. 2859 ಅಡಿಯ ಜಲಾಶಯದಲ್ಲಿ ಇದೀಗ 2854.22 ಅಡಿಯಷ್ಟು ನೀರಿದ್ದು, 9744 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಪ್ರಕೃತಿ ವಿಕೋಪಕ್ಕೆ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದರೆ, ಕಂಟ್ರೋಲ್ ರೂಂ 08272-221077 ವಾಟ್ಸ್‌ಪ್ ಸಂಖ್ಯೆ 8550001077 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

English summary
As rain continues in kodagu district, Indian Meteorological Department has issued red alert
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X