• search
  • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರೀ ಮಳೆ: ಕೊಡಗಿನಲ್ಲಿ ಶನಿವಾರ ಸಂಜೆವರೆಗೆ ರೆಡ್‌ ಅಲರ್ಟ್ ಘೋಷಣೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜು.23: ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ದೈನಂದಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಟ್ಟಿಹೊಳೆ, ಮುಕ್ಕೊಡ್ಲು, ತಂತಿಪಾಲ ವ್ಯಾಪ್ತಿಯಲ್ಲಿ ನಿರಂತರ ಗಾಳಿ, ಮಳೆಯಾಗುತ್ತಿರುವುದರಿಂದ ಮುಖ್ಯ ರಸ್ತೆಯಲ್ಲಿ ಬರೆ ಕುಸಿಯುತ್ತಿದೆ. ಹವಾಮಾನ ಇಲಾಖೆಯು ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಶನಿವಾರ ಸಂಜೆ 6 ಘಂಟೆಯವರೆಗೆ ರೆಡ್‌ ಅಲರ್ಟ್ ಘೋಷಿಸಿದೆ.

"ಬೃಹತ್ ಮಣ್ಣಿನ ರಾಶಿ ರಸ್ತೆಯನ್ನು ಆವರಿಸಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೊಳೆಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಹೊಳೆ ಬದಿ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ,'' ಶಾಸಕರು ಮನವಿ ಮಾಡಿದ್ದಾರೆ.

ಧಾರಾಕಾರ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದ್ದು, ಮಡಿಕೇರಿ ರಸ್ತೆ ಜಲಾವೃತಗೊಂಡಿದೆ. ಮಳೆ ಮುಂದುವರೆದರೆ ಮತ್ತಷ್ಟು ನೀರು ರಸ್ತೆಯನ್ನು ಆವರಿಸಲಿದ್ದು, ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿದೆ. ಇಂದು ಎರಡನೇ ಮೊಣ್ಣಂಗೇರಿಯಲ್ಲಿ ಭೂಕುಸಿತ ಸ್ಥಳಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದರು.

 ಅನೇಕ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತ

ಅನೇಕ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತ

ಕೊಡಗಿನ ಎಲ್ಲ ನದಿ, ಹೊಳೆಗಳಲ್ಲೂ ನೀರಿನ ಮಟ್ಟ ಏರಿಕೆ ದಾಖಲಿಸಿದೆ. ಹಾರಂಗಿ ಜಲಾಶಯಕ್ಕೆ ಇಂದು 20 ಸಾವಿರ ಕ್ಯುಸೆಕ್ಸ್‌ನಷ್ಟು ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಅನೇಕ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ನೂರಾರು ವಿದ್ಯುತ್‌ ಕಂಬಗಳು ಉರುಳಿ ಬಿದ್ದಿದ್ದು, ವಿದ್ಯುತ್‌ ಕಂಪನಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.

ಕೊಡಗಿನಲ್ಲಿ ಮಳೆ ಹೆಚ್ಚಳ; ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧಕೊಡಗಿನಲ್ಲಿ ಮಳೆ ಹೆಚ್ಚಳ; ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

 ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮೃತ

ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮೃತ

ವಿದ್ಯುತ್ ತಂತಿ ಸ್ಪರ್ಶಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೊಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಬೆಂಬಳೂರಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಜಾನಕಿ(60) ಎಂಬುವವರೇ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಬಟ್ಟೆ ಒಣ ಹಾಕುತ್ತಿದ್ದ ಸಂದರ್ಭ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 ಹಳೇ ಕಾಮಗಾರಿಗಳು ಆಗಸ್ಟ್ 20 ರೊಳಗೆ ಪೂರ್ಣ

ಹಳೇ ಕಾಮಗಾರಿಗಳು ಆಗಸ್ಟ್ 20 ರೊಳಗೆ ಪೂರ್ಣ

ಶುಕ್ರವಾರ ಮಡಿಕೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್, "ಮಳೆ ಹಾನಿ ಸಂಬಂಧಿಸಿದಂತೆ ಈಗಾಗಲೇ ಅನುಮೋದನೆಗೊಂಡ ಹಳೇ ಕಾಮಗಾರಿಗಳನ್ನು ಆಗಸ್ಟ್ 20 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ತನಿಖೆಗೆ ಶಿಫಾರಸ್ಸು ಮಾಡಲಾಗುವುದು,'' ಎಂದು ಎಂಜಿನಿಯರ್‌ಗಳಿಗೆ ಎಚ್ಚರಿಸಿದ್ದಾರೆ.

"ಹಳೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪೂರ್ಣಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಲ್ಲನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ಜೊತೆಗೆ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದರು. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಭಾರೀ ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಬೇಕು,'' ಎಂದು ಸೂಚಿಸಿದರು.

 ಜಿಲ್ಲಾಡಳಿತದಿಂದ ಮುಂಗಾರು ಮುನ್ನೆಚ್ಚರಿಕೆ

ಜಿಲ್ಲಾಡಳಿತದಿಂದ ಮುಂಗಾರು ಮುನ್ನೆಚ್ಚರಿಕೆ

"ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು, ಜಿಲ್ಲಾಧಿಕಾರಿಗೆ ವರದಿ ನೀಡಬೇಕು, ಕಾನೂನು ನಿಯಮಗಳನ್ನು ಪಾಲಿಸಬೇಕು. ಕೊಡಗು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಈಗಾಗಲೇ ಹಳೇ ಕಾಮಗಾರಿಗಳು ಹಾಗೂ ಪ್ರಸಕ್ತ ವರ್ಷದಲ್ಲಿ ಮಳೆ ಹಾನಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಂಗಾರು ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ,'' ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ತಿಳಿಸಿದರು.

English summary
Kodagu receiving heavy rainfall throughout the district and daily life is disrupted. red alert announces in the district till Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X