• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆಮೆಗತಿಯಲ್ಲಿ ಸಾಗುತ್ತಿದೆ ಮಡಿಕೇರಿ ಕೋಟೆಯ ದುರಸ್ತಿ ಕಾರ್ಯ

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಜುಲೈ 1: ಮಡಿಕೇರಿ ಕೋಟೆ ಆವರಣ ಮತ್ತು ಅರಮನೆಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 8.5 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿ ಹಲವು ತಿಂಗಳುಗಳೇ ಆಗಿದ್ದು, ಈ ಅನುದಾನವನ್ನು ಬಳಸಿಕೊಂಡು ಮೂಲ ವಾಸ್ತುಶಿಲ್ಪದೊಂದಿಗೆ ನವೀಕರಣಗೊಳಿಸಿ ಪ್ರೇಕ್ಷಣೀಯ ಸ್ಥಳವನ್ನಾಗಿ ಪರಿವರ್ತಿಸಲು ಭಾರತೀಯ ಪುರಾತತ್ವ ಇಲಾಖೆ ಮುಂದಾಗಬೇಕು ಎಂದು ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ ಅವರು ತಿಳಿಸಿದ್ದಾರೆ.

   Corona Cases,Hassan ಹಾಸನದಲ್ಲಿ ಕೊರೊನಾಗೆ ಮತ್ತೊಂದು ಬಲಿ , ಆತಂಕದಲ್ಲಿ ಜನಗಳು | Oneindia Kannada

   ಅಭಿವೃದ್ಧಿ ಕಾರ್ಯ ಆಮೆ ನಡಿಗೆಯಲ್ಲಿ ಸಾಗುತ್ತಿರುವುದರಿಂದ ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ನಗರದ ಕೋಟೆಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿತು. ಹಳೆಯ ಗಡಿಯಾರದ ವ್ಯವಸ್ಥೆ ಮತ್ತು ಪರಿಕರಗಳು ನಾಪತ್ತೆಯಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅರಸರ ಕಾಲದ ವರ್ಣಚಿತ್ರಗಳು ವಿರೂಪಗೊಂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

   ಅಭಿವೃದ್ಧಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು

   ಅಭಿವೃದ್ಧಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು

   ಈ ಸಂದರ್ಭ ಮಾತನಾಡಿದ ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ ಅವರು, ಪ್ರಥಮ ಹಂತದ ಕಾಮಗಾರಿಯನ್ನು 53 ಲಕ್ಷ ರೂ.ಗಳಲ್ಲಿ ನಡೆಸಲಾಗುತ್ತಿದ್ದು, ಹೆಚ್ಚಿನ ಹಣ ಮಂಜೂರಾಗಿರುವುದರಿಂದ ಅಭಿವೃದ್ಧಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಬೇಕು. ಅಲ್ಲದೆ ಕಾಮಗಾರಿಗೆ ಪುರಾತತ್ವ ಇಲಾಖೆಯು ವಿಧಿಸುತ್ತಿರುವ ಶೇ.10 ರಷ್ಟು ಸೇವಾ ಶುಲ್ಕವನ್ನು ರದ್ದುಗೊಳಿಸಬೇಕು ಎಂದರು.

   ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಸಿದ್ಧವಾಗಲಿದೆ ಆನೆ ಶಿಬಿರ

   ಅಭಿಯಂತರರಿಗೆ ವಿರೂಪಾಕ್ಷಯ್ಯ ಸಲಹೆ

   ಅಭಿಯಂತರರಿಗೆ ವಿರೂಪಾಕ್ಷಯ್ಯ ಸಲಹೆ

   ಪ್ರಸ್ತುತ ಕೋಟೆ ಕಾವಲಿಗೆ ನ್ಯಾಯಾಲಯದ ನಿರ್ದೇಶನದಂತೆ 24 ಗಂಟೆಗಳ ಕಾವಲುಗಾರರ ವ್ಯವಸ್ಥೆಯಿದ್ದು, ಮೇಲ್ಛಾವಣಿಯ ತುರ್ತು ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕು ಎಂದು ಪುರಾತತ್ವ ಸಂರಕ್ಷಣಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ವಿರೂಪಾಕ್ಷಯ್ಯ ಸಲಹೆ ನೀಡಿದರು.

   ಹೆಚ್ಚಿನ ಮುತುವರ್ಜಿವಹಿಸಿ ಸಂರಕ್ಷಿಸಬೇಕು

   ಹೆಚ್ಚಿನ ಮುತುವರ್ಜಿವಹಿಸಿ ಸಂರಕ್ಷಿಸಬೇಕು

   1920 ರಲ್ಲಿ ಆಗಿನ ಬ್ರಿಟಿಷ್ ಭಾರತ ಸರ್ಕಾರವು ಕೋಟೆಯನ್ನು ಸ್ಮಾರಕ ಎಂದು ಅಧಿಸೂಚನೆ ಹೊರಡಿಸಿದ್ದು, ಇದರ ಅನ್ವಯ ಭಾರತೀಯ ಪುರಾತತ್ವ ಇಲಾಖೆ ಕೋಟೆಯನ್ನು ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡು ಹೆಚ್ಚಿನ ಮುತುವರ್ಜಿವಹಿಸಿ ಸಂರಕ್ಷಿಸಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

   ಕೊಡಗಿನಲ್ಲಿ ಸಂಜೆ ಬಿರುಸು ಮಳೆಗೆ ಕುಸಿದ ತಡೆಗೋಡೆ

   ಮೊದಲನೇ ಹಂತದಲ್ಲಿ 53 ಲಕ್ಷ ರೂ. ಬಿಡುಗಡೆ

   ಮೊದಲನೇ ಹಂತದಲ್ಲಿ 53 ಲಕ್ಷ ರೂ. ಬಿಡುಗಡೆ

   ಭಾರತೀಯ ಪುರಾತತ್ವ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಚಂದ್ರಕಾಂತ್ ಅವರು ಪ್ರಸ್ತುತ ಕೋಟೆಯ ಮೇಲ್ಛಾವಣಿ ತಾತ್ಕಾಲಿಕ ದುರಸ್ತಿ ಕಾರ್ಯದ ಪ್ರಗತಿ ಕುರಿತು ಮಾಹಿತಿ ನೀಡಿದರು. ಮೊದಲನೇ ಹಂತದಲ್ಲಿ ಬಿಡುಗಡೆಯಾಗಿರುವ 53 ಲಕ್ಷ ರೂ. ಮೊತ್ತದ ಮೇಲ್ಛಾವಣಿ ದುರಸ್ತಿ ಕಾರ್ಯವನ್ನು ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಮದನ್ ಮೋಹನ್ ಅವರು ಕಾಮಗಾರಿಯ ಮೇಲುಸ್ತುವಾರಿ ಪ್ರಗತಿ ಕುರಿತು ಮಾಹಿತಿ ನೀಡಿದರು.

   English summary
   The state government has allocated Rs 8.5 crore for the development of the Madikeri Fort and the palace. It has been several months since the release.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more