Get Updates
Get notified of breaking news, exclusive insights, and must-see stories!

ವಾರಾಂತ್ಯದಲ್ಲಿ ಕೊಡಗು ಪ್ರವಾಸಕ್ಕೆ ಹೊರಟಿದ್ದೀರಾ?, ತಪ್ಪದೇ ಓದಿ

ಮಡಿಕೇರಿ, ಜನವರಿ 25: ವಾರಾಂತ್ಯದ ಸಾಲು ಸಾಲು ರಜೆ ಹಿನ್ನಲೆಯಲ್ಲಿ ಕೊಡಗು ಪ್ರವಾಸಕ್ಕೆ ತೆರಳುವವರಿಗೆ ಸಿಹಿಸುದ್ದಿಯೊಂದಿದೆ. ಜನವರಿ 26 ರಿಂದ 28ರ ತನಕ ಮಡಿಕೇರಿ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.

ತೋಟಗಾರಿಕೆ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಗಣರಾಜ್ಯೋತ್ಸವ 2024ರ ಪ್ರಯುಕ್ತ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡಿದೆ. ಜನವರಿ 26ರ ಬೆಳಗ್ಗೆ 11 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಪ್ರದರ್ಶನ ಉದ್ಘಾಟಿಸಲಿದ್ದಾರೆ.

Republic Day 2024 All You Need To Know About Raja Seat Flower Show

ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ ಸುಮಾರು 15,000 ಸಂಖ್ಯೆಯ 20 ಜಾತಿಯ ಹೂವುಗಳಾದ ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಡಯಾಂಥಸ್, ಆಸ್ಟರ್, ವಿಂಕಾ ರೋಸಿಯಾ, ಕಾಕ್ಸ್ ಕೋಂಬ್, ಡೇಲಿಯಾ, ಇತ್ಯಾದಿಗಳನ್ನು ಪಾತಿಯಲ್ಲಿ ಹಾಗೂ ಕುಂಡಗಳಲ್ಲಿ ಬೆಳೆಯಲಾಗಿದೆ.

ಪ್ರಮುಖ ಆಕರ್ಷಣೆಗಳು: ಈ ಬಾರಿಯ ಫಲಪುಷ್ಪ ಪ್ರದರ್ಶನದ ಆಕರ್ಷಣೆಗಳಲ್ಲಿ ಕೊಡಗಿನ ಕುಲದೇವತೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಲಾಕೃತಿಯನ್ನು 15 ಅಡಿ ಎತ್ತರದಲ್ಲಿ 48 ಅಡಿ ಉದ್ದ, 28 ಅಡಿ ಅಗಲದಲ್ಲಿ ಗುಲಾಬಿ, ಸೇವಂತಿಗೆ, ಆಸ್ಟರ್ ಹೂವುಗಳ ವಿವಿಧ ಬಣ್ಣದ ಸುಮಾರು 5 ಲಕ್ಷ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಗಣರಾಜ್ಯೋತ್ಸವ ಅಂಗವಾಗಿ ಯೋಧ, ಫಿರಂಗಿ ಹಾಗೂ ರಾಷ್ಟ್ರ ಧ್ವಜದ ಕಲಾಕೃತಿಯನ್ನು ವಿವಿಧ ಬಣ್ಣದ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗುವುದು. ತ್ರಿವರ್ಣ ಧ್ವಜದ ಕಲಾಕೃತಿ, ಅಣಬೆ ಹಾಗೂ ಬಲೂನು ಮಾದರಿಯ ಕಲಾಕೃತಿಗಳನ್ನು ಹೂವುಗಳಿಂದ ನಿರ್ಮಾಣ ಮಾಡಲಾಗುತ್ತದೆ.

ಮಕ್ಕಳಿಗೆ ಮನರಂಜನೆ ನೀಡುವಂತಹ ಚೋಟಾ ಭೀಮ್, ಬಾರ್ಬಿ ಡಾಲ್, ಸ್ಪೈಡರ್ ಮ್ಯಾನ್, ಬ್ಯಾಟ್ ಮ್ಯಾನ್, ಅಣಬೆ ಕಲಾಕೃತಿಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಫೋಟೋ ಪ್ರೇಮ್, ಸೆಲ್ಫಿ ಜೋನ್ ಮಾದರಿಗಳನ್ನು ನಿರ್ಮಿಸಲಾಗಿದೆ.

ವಿವಿಧ ಕ್ಷೇತ್ರಗಳ ಗಣ್ಯರುಗಳ ಕಲಾಕೃತಿಗಳನ್ನು ಹಣ್ಣು/ ತರಕಾರಿಗಳಿಂದ ಕೆತ್ತನೆ ಮಾಡಿ ಪ್ರದರ್ಶಿಸಲಾಗುವುದು. ವಿವಿಧ ಅಲಂಕಾರಿಕ ಗಿಡಗಳು, ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡಣೆಯ ಪ್ರದರ್ಶಗಳನ್ನು ವೀಕ್ಷಿಸಬಹುದು. 13 ವಿವಿಧ ರೀತಿಯ ಹೂವಿನ ಕಲಾಕೃತಿಗಳನ್ನು ಒಟ್ಟು 7.5 ರಿಂದ 8 ಲಕ್ಷ ಸಂಖ್ಯೆಯ ಸೇವಂತಿಗೆ, ಆರ್ಕಿಡ್, ಡೆಸ್ಸಿ ಹಾಗೂ ವಿವಿಧ ಹೂವುಗಳಿಂದ ಅಲಂಕರಿಸಿ ನಿರ್ಮಾಣ ಮಾಡಲಾಗಿದೆ.

ಗಾಂಧಿ ಮೈದಾನದಲ್ಲಿ 60 ವಿವಿಧ ವಸ್ತು ಪ್ರದರ್ಶನ ಮಳಿಗೆಯನ್ನು ನಿರ್ಮಿಸಲಾಗುವುದು, ಇದರಲ್ಲಿ 10 ಮಳಿಗೆಯನ್ನು ತೋಟಗಾರಿಕೆ, ಕಾಫಿ ಮಂಡಳಿ, ಕೃಷಿ, ಪಶುಪಾಲನೆ, ಮೀನುಗಾರಿಕೆ, ಹಾಪ್ ಕಾಮ್ಸ್, ಕೈಗಾರಿಕೆ ವಾಣಿಜ್ಯ ಇಲಾಖೆ ಹಾಗೂ ಇತರೆ ಇಲಾಖೆಗಳಿಗೆ ಕಾಯ್ದಿರಿಸಲಾಗಿದೆ. 50 ಮಳಿಗೆಯಲ್ಲಿ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಯಂತ್ರೋಪಕರಣಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗುತ್ತದೆ.

ರೈತರು ಬೆಳೆದಿರುವಂತಹ ವಿಶೇಷವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶನವಿದೆ. ಆಸಕ್ತರು ಜನವರಿ 25 ರಿಂದಲೇ ತೋಟಗಾರಿಕೆ ಇಲಾಖೆಗೆ ಪ್ರದರ್ಶಿಕೆಗಳನ್ನು ತಂದು ಹೆಸರನ್ನು ನೋಂದಾಯಿಸಿಕೊಳ್ಳುವುದು. ಉತ್ತಮ ಪ್ರದರ್ಶಿಕೆಗಳಿಗೆ ಬಹುಮಾನವನ್ನು ಸಹ ನೀಡಲಾಗುತ್ತದೆ.

ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂಗಳ ಜೋಡಣೆ, ಇಕೆಬಾನ, ರಂಗೋಲಿ ಸ್ಪರ್ಧೆಗಳನ್ನು ರಾಜಾಸೀಟಿನ ಒಳಭಾಗದಲ್ಲಿ ಆಯೋಜಿಸಲಾಗಿದೆ.

ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ಸಾರ್ವಜನಿಕರಿಗೆ 20 ರೂ. ಗಳ ಪ್ರವೇಶ ಶುಲ್ಕ ಹಾಗೂ ಶಾಲೆಯಿಂದ ಭಾಗವಹಿಸುವ ಶಾಲಾ ಮಕ್ಕಳಿಗೆ ಉಚಿತವಾಗಿ ಪ್ರವೇಶ ನೀಡಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+