• search
 • Live TV
ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಏರಿಕೆ; ಕೊಡಗು ಪ್ರವಾಸಿ ತಾಣಗಳಿಗೆ ಮತ್ತೆ ನಿರ್ಬಂಧ

By ಮಡಿಕೇರಿ ಪ್ರತಿನಿಧಿ
|

ಮಡಿಕೇರಿ, ಏಪ್ರಿಲ್ 3: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಪ್ರವಾಸಿಗರಿಗೆ ಮತ್ತೆ ನಿರ್ಬಂಧ ಹೇರಲಾಗಿದೆ. ಏಪ್ರಿಲ್ 20ರವರೆಗೂ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೋಂಕು ಹೆಚ್ಚುತ್ತಿರುವ ನಿಟ್ಟಿನಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಯಾಗುತ್ತಿದೆ.

ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಇಂದಿನಿಂದ ಏಪ್ರಿಲ್ 20 ರವರೆಗೆ ಸಾರ್ವಜನಿಕರು, ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಆದೇಶ ಉಲ್ಲಂಘನೆಯು ಶಿಕ್ಷಾರ್ಹವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಈಚೆಗಷ್ಟೆ ಕೊರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಹೊಸ ಆದೇಶ ಹೊರಡಿಸಿತ್ತು. ಮದುವೆ ಸಮಾರಂಭದಲ್ಲಿ ತೆರೆದ ಪ್ರದೇಶಗಳಲ್ಲಿ 500 ಜನ ಮೀರಬಾರದು. ಸಭಾಂಗಣ ಇತ್ಯಾದಿ ಮುಚ್ಚಿದ ಹಾಲ್‌ಗಳಲ್ಲಿ 200 ಜನ ಮೀರಬಾರದು. ಜನ್ಮದಿನ ಹಾಗೂ ಇತರ ಆಚರಣೆಗಳು ತೆರೆದ ಪ್ರದೇಶಗಳಲ್ಲಿ 100 ಜನ ಮೀರದಂತೆ ಹಾಗೂ ಮುಚ್ಚಿದ ಪ್ರದೇಶಗಳಲ್ಲಿ 50 ಮೀರದಂತೆ, ನಿಧನ, ಶವ ಸಂಸ್ಕಾರಗಳಲ್ಲಿ ತೆರೆದ ಪ್ರದೇಶಗಳಲ್ಲಿ 100 ಜನ ಮೀರಬಾರದು ಎಂದು ಆದೇಶ ಹೊರಡಿಸಿದ್ದರು. ಜಿಲ್ಲೆಗೆ ಕೇರಳ ಹಾಗೂ ಮಹಾರಾಷ್ಟ್ರಗಳಿಂದ ಬರುವವರಿಗೆ ಆರ್‍.ಟಿ-ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

   ಏ.7ರವರೆಗೆ 100% ಸೀಟು ಭರ್ತಿಗೆ ಅವಕಾಶ, ಸಿನಿಮಾ ಇಂಡಸ್ಟ್ರಿ ಮನವಿಗೆ ಒಪ್ಪಿಗೆ ಸೂಚಿಸಿದ ಸಿಎಂ | Oneindia Kannada

   ಕೊಡಗಿನಲ್ಲಿ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ ಕೊಡಗಿನಲ್ಲಿ ಕೋವಿಡ್ ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ

   ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 4373 ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1010602ಕ್ಕೆ ಏರಿಕೆಯಾಗಿದೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಎರಡು ದಿನಗಳಿಂದ ಐದು ಸಾವಿರದ ಅಂಚಿನಲ್ಲಿ ಪ್ರಕರಣಗಳು ದಾಖಲಾಗುತ್ತಿವೆ. ಕೊಡಗಿನಲ್ಲಿ 11 ಪ್ರಕರಣಗಳು ದಾಖಲಾಗಿವೆ.

   English summary
   Kodagu district administration issued an order restricting tourists till april 20 due to increasing coronavirus cases in state
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X