ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು; ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಡಿಸೆಂಬರ್ 15: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಇಂದು ಜಿಲ್ಲೆಯಲ್ಲಿ 7 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 5,512ಕ್ಕೆ ಏರಿಕೆಯಾಗಿದೆ.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು. "ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಿಗೆ ಇನ್ನಷ್ಟು ಮಾಹಿತಿ ನೀಡಬೇಕು" ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

 ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಕಾರ್ಯಾರಂಭ ಕೊಡಗು ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಕಾರ್ಯಾರಂಭ

ಗ್ರಾಮ ಪಂಚಾಯಿತಿ ಚುನಾವಣೆಗಳು ಸಹ ಎದುರಾಗುತ್ತಿವೆ. ಆದ್ದರಿಂದ, ಅಗತ್ಯ ತಯಾರಿ ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಯಲ್ಲಿ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಬೇಕು. ತರಬೇತಿ ದಿನದಂದು ಹಾಗೂ ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಮತ ಎಣಿಕೆ ಸಂದರ್ಭದಲ್ಲಿ ಆರೋಗ್ಯ ತಂಡವನ್ನು ನಿಯೋಜಿಸಿ ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಬೇಕು ಎಂದು ಸೂಚಿಸಿದರು.

ವರ್ಷದ ವಿಶೇಷ; ಕೋವಿಡ್ ನಡುವೆ ಸರಳವಾಗಿ ನಡೆದ ಮೈಸೂರು ದಸರಾ ವರ್ಷದ ವಿಶೇಷ; ಕೋವಿಡ್ ನಡುವೆ ಸರಳವಾಗಿ ನಡೆದ ಮೈಸೂರು ದಸರಾ

Rise In COVID New Case Deputy Commissioner Chairs Meeting

ಮುಂದಿನ ದಿನಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಹೆಚ್ಚಾದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಆದ್ದರಿಂದ, ವೈದ್ಯಕೀಯ ಕಾಲೇಜಿನ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಹಾಗೂ ಇತರ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಮಾಹಿತಿ ನೀಡಬೇಕು ಎಂದರು.

ಭಾರತದಲ್ಲಿ ಸಿಗುವುದಿಲ್ಲ ಫೈಜರ್ ಲಸಿಕೆ: ಕಾರಣವೇನು?ಭಾರತದಲ್ಲಿ ಸಿಗುವುದಿಲ್ಲ ಫೈಜರ್ ಲಸಿಕೆ: ಕಾರಣವೇನು?

ಸಾಂಕ್ರಾಮಿಕ ರೋಗಗಳ ಶಾಸ್ತ್ರಜ್ಞರಾದ ಡಾ.ಮಹೇಶ್ ಮಾತನಾಡಿ, "ಜಿಲ್ಲೆಯಲ್ಲಿ ಕೋವಿಡ್-19 ಗಂಟಲು ಮತ್ತು ಮೂಗು ದ್ರವ ಸಂಗ್ರಹದ ತಪಾಸಣೆಯನ್ನು ಇನ್ನಷ್ಟು ಹೆಚ್ಚಿಸಬೇಕಿದೆ" ಎಂದು ಮನವಿ ಮಾಡಿದರು.

ಡಿಸೆಂಬರ್ 8 ರಿಂದ 14 ರವರೆಗೆ ಮಡಿಕೇರಿ ತಾಲೂಕಿನಲ್ಲಿ 51, ಸೋಮವಾರಪೇಟೆ 46, ವಿರಾಜಪೇಟೆ 16 ಸೇರಿಸಿ ಒಟ್ಟು 110 ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು.

Recommended Video

ಹೀಗೆ ಮಾಡೋಕೆ ಕಾರಣ ಇದೆ! | BSF Soldiers Run 180 Kms | Oneindia Kannada

ವಿರಾಜಪೇಟೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಕಡಿಮೆಯಾಗುತ್ತಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆಯಲ್ಲಿ ತಲಾ ಶೇ 46, 42ರಷ್ಟು ಪಾಸಿಟಿವ್ ಪ್ರಕರಣಗಳು ಕಂಡುಬಂದಿದೆ. ಆದ್ದರಿಂದ ಹೆಚ್ಚಿನ ನಿಗಾವಹಿಸಬೇಕಿದೆ ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

English summary
Kodagu deputy commissioner Annies Kanmani Joy chaired the meeting with officials. District reported more fresh COVID 19 cases from last few days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X