ಸಂಪಾಜೆ ಘಾಟ್ ರಸ್ತೆ ಎಲ್ಲಾ ವಾಹನ ಸಂಚಾರಕ್ಕೆ ಸಿದ್ಧ

ಮಡಿಕೇರಿ, ನವೆಂಬರ್ 02 : ಭಾರಿ ಮಳೆ, ಭೂ ಕುಸಿತದಿಂದ ಹಾನಿಯಾಗಿದ್ದ ಸಂಪಾಜೆ ಘಾಟ್‌ನಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಎಲ್ಲಾ ವಾಹನಗಳ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಬೇಕು ಎಂದು ಕೊಡಗು ಜಿಲ್ಲಾಡಳಿತಕ್ಕೆ ಶಿಫಾರಸು ಮಾಡಲಾಗಿದೆ.

ಕರ್ನಾಟಕ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗ ರಾಷ್ಟ್ರೀಯ ಹೆದ್ದಾರಿ 275ರಲ್ಲಿ 14 ಕಿ.ಮೀ. ತಾತ್ಕಾಲಿಕ ರಸ್ತೆಯನ್ನು ನಿರ್ಮಾಣ ಮಾಡಿದೆ. ಸಂಪಾಜೆ ಘಾಟ್‌ ವ್ಯಾಪ್ತಿಯಲ್ಲಿ ಬರುವ ರಸ್ತೆಯನ್ನು ಬೃಹತ್ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಬಹುದು ಇಲಾಖೆ ಹೇಳಿದೆ.

ಕೆಲವು ದಿನಗಳಿಂದ ಈ ರಸ್ತೆಯಲ್ಲಿ ಕಾರು, ಕೆಎಸ್ಆರ್‌ಟಿಸಿ ಮಿನಿ ಬಸ್ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಈಗ ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ವಾಹನಗಳಿಗೆ ರಸ್ತೆ ಮುಕ್ತಗೊಳಿಸಲು ಕೊಡಗು ಜಿಲ್ಲಾಡಳಿತಕ್ಕೆ ಶಿಫಾರಸು ಸಲ್ಲಿಸಲಾಗಿದೆ.

ಸಂಪಾಜೆ ಘಾಟ್ ಮಾರ್ಗದಲ್ಲಿ ಭೂ ಕುಸಿತದಿಂದ ಹಾನಿಯಾಗಿರುವ 14 ಕಿ.ಮೀ. ರಸ್ತೆಯನ್ನು ಶಾಶ್ವತವಾಗಿ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲು ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ...

10 ಕೋಟಿ ವೆಚ್ಚದಲ್ಲಿ ನಿರ್ಮಾಣ

10 ಕೋಟಿ ವೆಚ್ಚದಲ್ಲಿ ನಿರ್ಮಾಣ

ಸಂಪಾಜೆ ಘಾಟ್‌ನಲ್ಲಿ ಮಳೆ, ಭೂ ಕುಸಿತದಿಂದ ಹಾನಿಯಾಗಿದ್ದ ರಸ್ತೆಯನ್ನು 10 ಕೋಟಿ ರೂ. ಹೆಚ್ಚದಲ್ಲಿ ತಾತ್ಕಾಲಿಕವಾಗಿ ಪುನರ್ ನಿರ್ಮಿಸಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ಎಲ್ಲಾ ವಾಹನಗಳು ಸಂಚಾರ ನಡೆಸಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ, ಇದಕ್ಕೆ ಕೊಡಗು ಜಿಲ್ಲಾಡಳಿತದ ಒಪ್ಪಿಗೆ ಬೇಕಾಗಿದೆ.

ಜುಲೈ-ಆಗಸ್ಟ್‌ ಮಳೆಗೆ ಹಾನಿ

ಜುಲೈ-ಆಗಸ್ಟ್‌ ಮಳೆಗೆ ಹಾನಿ

ಕರಾವಳಿ ಜಿಲ್ಲೆಗಳು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಈ ರಾಷ್ಟ್ರೀಯ ಹೆದ್ದಾರಿ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲಿ ಸುರಿದ ಮಳೆ, ಭೂ ಕುಸಿತದಿಂದಾಗಿ ಹಾನಿಗೊಂಡಿತ್ತು. ಮೂರು ತಿಂಗಳಿನಿಂದ ಬಂದ್ ಆಗಿತ್ತು. ಜುಲೈ ಮತ್ತು ಕಾರು ಮತ್ತು ಮಿನಿಬಸ್‌ಗಳ ಸಂಚಾರ ಕೆಲವು ದಿನಗಳ ಹಿಂದೆ ಆರಂಭವಾಗಿತ್ತು.

ವಾಹನ ಸಂಚಾರಕ್ಕೆ ತೊಂದರೆ ಇಲ್ಲ

ವಾಹನ ಸಂಚಾರಕ್ಕೆ ತೊಂದರೆ ಇಲ್ಲ

14 ಕಿ.ಮೀ.ರಸ್ತೆಯಲ್ಲಿ ದೊಡ್ಡ ಪ್ರಮಾಣದ ಭೂ ಕುಸಿತ ಉಂಟಾದ ಸ್ಥಳದಲ್ಲಿ ಮರಳಿನ ಚೀಳಗಳನ್ನು ಸೇರಿಸಿ ರಸ್ತೆಯ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸಲಾಗಿದೆ. ಸೇತುವೆ ಕೊಚ್ಚಿ ಹೋದ ಜಾಗದಲ್ಲಿ ತಾತ್ಕಾಲಿಕ ಪೈಪ್‌ಗಳನ್ನು ಹಾಕಿ ಸೇತುವೆ ನಿರ್ಮಿಸಲಾಗಿದೆ. ಹೊಸದಾಗಿ ಜೆಲ್ಲಿ, ಡಾಂಬರು ಹಾಕಲಾಗಿದೆ. ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಸಂಪಾಜೆ ಘಾಟ್‌ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾಡಳಿತ ಅನುಮತಿ ನೀಡಬೇಕಿದೆ. ಈ ಕುರಿತು ಹೇಳಿಕೆ ನೀಡಿದರು ಕೊಡಗು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು, 'ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿರುವ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದರು. ರಸ್ತೆಯುದ್ದಕ್ಕೂ ಸೂಚನಾ ಫಲಕ ಅಳವಡಿಸಿ ವರದಿ ನೀಡುವಂತೆ ಸೂಚಿಸಲಾಗಿತ್ತು. ವಾಹನ ಸಂಚಾರಕ್ಕೆ ಅವಕಾಶ ನೀಡುವ ಪ್ರಸ್ತಾವನೆ ಬಂದಿಲ್ಲ. ವರದಿ ಬಂದ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ತಿಳಿಸಿದ್ದಾರೆ.

500 ಕೋಟಿ ಅನುದಾನ

500 ಕೋಟಿ ಅನುದಾನ

ಭೂ ಕುಸಿತದಿಂದ ಹಾನಿಯಾಗಿರುವ 14 ಕಿ.ಮೀ. ರಸ್ತೆಯನ್ನು ಶಾಶ್ವತವಾಗಿ ನಿರ್ಮಾಣ ಮಾಡಲು ಅನುದಾನ ನೀಡುವಂತೆ ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲು ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ರಸ್ತೆಯ ಕುರಿತು ಬೆಂಗಳೂರಿನ ಐಐಎಸ್‌ಸಿ ಮಣ್ಣು ಇಂಜಿನಿಯರಿಂಗ್ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಆರ್.ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ ನೀಡಿದೆ. ಈ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಲು ಲೋಕೋಪಯೋಗಿ ಇಲಾಖೆ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+