Breaking: ಕೊಡಗಿನಲ್ಲಿ ಬುಧವಾರದಿಂದ 4 ದಿನ ನಿಷೇಧಾಜ್ಞೆ

ಮಡಿಕೇರಿ, ಆಗಸ್ಟ್ 23: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಮೊಟ್ಟೆ ವಿಷಯವನ್ನು ಈಗ ಮಾಂಸದವರೆಗೂ ತೆಗೆದುಕೊಂಡು ಹೋಗಿವೆ.

ಇತ್ತ ಕೊಡಗಿನಲ್ಲಿ ನಡೆದ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಕೂಡ ಬೃಹತ್ ಮೆರವಣಿಗೆ ಆಯೋಜಿಸಿದೆ. ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಬಿಜೆಪಿ ಕೂಡ ಸಮಾವೇಶ ನಡೆಸುತ್ತಿದೆ. ಈ ಹಿನ್ನೆಲೆ ಕೊಡಗಿನಲ್ಲಿ ನಾಲ್ಕು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆಗಸ್ಟ್ 26 ರಂದು ಕಾಂಗ್ರೆಸ್ ಪ್ರತಿಭಟನೆ ಮತ್ತು ಬಿಜೆಪಿಯಿಂದ 'ಜನ ಜಾಗೃತಿ ಸಮ್ಮೇಳನ' ನಡೆಯಲಿದೆ. ಈ ಹಿನ್ನೆಲೆ ಪೂರ್ವಭಾವಿಯಾಗಿ ಕೊಡಗು ಜಿಲ್ಲೆಯಲ್ಲಿ ನಾಲ್ಕು ದಿನ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

Section 144 imposed in Kodagu district ahead of Congress and BJP protest

ನಾಳೆಯಿಂದ ಅಂದರೆ, ಆಗಸ್ಟ್ 24 ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್ 27 ರ ಸಂಜೆ 6 ರವರೆಗೆ ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಿರಲಿದೆ.

ಈ ಬಗ್ಗೆ ತಡರಾತ್ರಿ ಕೊಡಗು ಜಿಲ್ಲಾಧಿಕಾರಿ ಡಾ.ಸತೀಶ ಬಿ.ಸಿ. ಆದೇಶ ಹೊರಡಿಸಿದ್ದಾರೆ. ಈ ದಿನಗಳಲ್ಲಿ ಯಾವುದೇ ಪ್ರತಿಭಟನೆ, ಜಾಥಾ, ಮೆರವಣಿಗೆ, ಕಪ್ಪುಬಾವುಟ ಪ್ರದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಐದು ಮತ್ತು ಅದಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರದಂತೆ ನಿರ್ಬಂಧ ವಿಧಿಸಲಾಗಿದೆ.

Section 144 imposed in Kodagu district ahead of Congress and BJP protest

ಆಗಸ್ಟ್‌ 18ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿದಾಗ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ, ಮೊಟ್ಟೆ ಎಸೆದಿರುವ ಘಟನೆಗೆ ಪ್ರತಿರೋಧವಾಗಿ ಕಾಂಗ್ರೆಸ್ ಆ.26 ರಂದು ಕೊಡಗು ಚಲೋ, ಕೊಡಗು ಎಸ್ಪಿ ಕಚೇರಿಗೆ ಮುತ್ತಿಗೆ ಕಾರ್ಯಕ್ರಮ ನಡೆಸಲು ಕರೆ ನೀಡಿತ್ತು. ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವುದಾಗಿ ಹೇಳಿತ್ತು.

ಕಾಂಗ್ರೆಸ್ ಕಾರ್ಯಕ್ರಮಕ್ಕೆ ಪ್ರತಿಯಾಗಿ ಬಿಜೆಪಿ ಆಯೋಜಿಸಿದ್ದ 'ಜನಜಾಗೃತಿ ಸಮಾವೇಶ'ಕ್ಕೂ ಒಂದು ಲಕ್ಷ ಜನರನ್ನು ಸೇರಿಸುವುದಾಗಿ ಬಿಜೆಪಿಯೂ ತಿಳಿಸಿತ್ತು. ಆದರೆ, ಕೊಡಗಿನಲ್ಲಿ ಸೆಕ್ಷನ್ 144 ಜಾರಿಯಾಗಿರುವುದರಿಂದ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+