ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾಮುಕ್ತ ಕೊಡಗಿನಲ್ಲೀಗ ಡೆಂಗ್ಯೂ ಭಯ; 7 ಪ್ರಕರಣ ದಾಖಲು

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಏಪ್ರಿಲ್ 23: ಕೊರೊನಾ ಮುಕ್ತವಾಗಿರುವ ಕೊಡಗು ಜಿಲ್ಲೆಯಲ್ಲಿ ಈಗ ಡೆಂಗ್ಯೂ ಭೀತಿ ಶುರುವಾಗಿದೆ. ಕೊಡಗು ಜಿಲ್ಲೆಯ ಇಬ್ಬರಲ್ಲಿ ಇಂದು ಡೆಂಗ್ಯೂ ಇರುವುದು ದೃಢವಾಗಿದ್ದು, ಆತಂಕ ಮನೆ ಮಾಡಿದೆ. ಕೊಡಗಿನಲ್ಲಿ ಒಟ್ಟು 7 ಡೆಂಗ್ಯೂ ಪ್ರಕರಣಗಳು ಇರುವುದಾಗಿ ತಿಳಿದುಬಂದಿದೆ.

ಇಲ್ಲಿನ ಸಂಪಾಜೆಯ ಕಲ್ಲಹಳ್ಳ ಹಾಗೂ ಸುಂಟಿಕೊಪ್ಪದ ಮಾರುತಿ ನಗರದಲ್ಲಿ ಇಬ್ಬರಿಗೆ ಡೆಂಗ್ಯೂ ಇರುವುದಾಗಿ ತಿಳಿದುಬಂದಿದೆ. ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಡೆಂಗ್ಯೂ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಎಲ್ಲಾ ಮುಂಜಾಗೃತಾ ಕ್ರಮ ವಹಿಸಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ ಮೋಹನ್ ಮಾಹಿತಿ ನೀಡಿದ್ದಾರೆ.

Seven Dengue Cases Found In Madikeri

"ಕೊಡಗು ಜಿಲ್ಲೆಯ ಸಂಪಾಜೆ ಭಾಗದಲ್ಲಿ ಇಂದು 1 ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಹೀಗಾಗಿ ಜಿಲ್ಲೆಯ ಜನರು ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವ ಮತ್ತು ನೀರು ನಿಲ್ಲದಂತೆ ಎಚ್ಚರ ವಹಿಸುವ ಮೂಲಕ ಡೆಂಗ್ಯೂ ಹರಡುವುದನ್ನು ತಡೆಯಿರಿ. ಆರೋಗ್ಯ ಇಲಾಖೆಯಿಂದ ನೀಡುವ ಸೂಚನೆಗಳನ್ನು ತಪ್ಪದೇ ಪಾಲಿಸಿ" ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಅವರು ಮನವಿ ಮಾಡಿದ್ದಾರೆ.

English summary
Totally 7 cases of dengue cases recorded in madikeri district. Today again 2 cases found in sampaje and suntikoppa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X