ಮಡಿಕೇರಿಯಲ್ಲಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ: ಬಂಧನ
ಮಡಿಕೇರಿ, ಡಿಸೆಂಬರ್ 8: ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ರಫೀಕ್ನನ್ನು ಪೊಲೀಸರು ಬಂಧಿಸಿದ್ದಾರೆ.
ಶಾಲಾ ಬಾಲಕಿಯರಿಗೆ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಬಂದಿರುವ ದೂರಿನ ಅನ್ವಯ ಪೊಲೀಸರು ರಫೀಕ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ರಫೀಕ್ ವಿದ್ಯಾರ್ಥಿನಿಯರಿದ್ದ ಶಾಲಾ ಕೊಠಡಿಗೆ ತೆರಳಿ ಕಿರುಕುಳ ನೀಡಿದ್ದ.
ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ
ಈ ಬಗ್ಗೆ ಪೋಷಕರ ಬಳಿ ಅಳಲು ತೋಡಿಕೊಂಡಿದ್ದ ಮಕ್ಕಳು, ಶಾಲೆಗೆ ಹೋಗಲು ಭಯಪಟ್ಟಿದ್ದರು. ತಮ್ಮ ಪೋಷಕರಲ್ಲಿ ತಮಗಾದ ಅನುಭವವನ್ನು ಹಂಚಿಕೊಂಡಿದ್ದರು.
ಈ ಸಂದರ್ಭ ಜನರು ರಫೀಕ್ಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ರಫೀಕ್ ವಿರುದ್ಧ ಪೋಕ್ಸೋ, ಲೈಂಗಿಕ ದೌರ್ಜನ್ಯ, ಅಟ್ರಾಸಿಟಿ ಕೇಸು ದಾಖಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ
ನಾಲ್ಕು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿರುವ ಆರೋಪ ರಫೀಕ್ ಮೇಲಿದ್ದು, ಶುಕ್ರವಾರವೂ ಶಾಲೆಯ ಬಳಿ ತೆರಳಿದ್ದ ವೇಳೆ ಸ್ಥಳೀಯರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.