ಮಡಿಕೇರಿ; ಹುಲಿ ಸೆರೆ ಅಸಾಧ್ಯವಾದರೆ ಮಾತ್ರ ಕಂಡಲ್ಲಿ ಗುಂಡು

ಮಡಿಕೇರಿ, ಮಾರ್ಚ್ 09: ನರಹಂತಕ ವ್ಯಾಘ್ರನ ಸೆರೆಯು ವಿಳಂಬವಾಗುತ್ತಿದೆ. ಗ್ರಾಮಸ್ಥರ ಆಕ್ರೋಶವೂ ಹೆಚ್ಚಾಗುತ್ತಿದೆ. ಈಗಾಗಲೇ ಮೂರು ಜೀವಗಳನ್ನು ಬಲಿ ಪಡೆದಿರುವ ಗಂಡು ಹುಲಿ ಯಾರ ಕಣ್ಣಿಗೂ ಬೀಳುತ್ತಿಲ್ಲ. ಅರಣ್ಯ ಇಲಾಖೆಯ 150ಕ್ಕೂ ಅಧಿಕ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಶ್ರಮಿಸುತ್ತಿದ್ದಾರೆ.

ಶ್ರೀಮಂಗಲ ಹೋಬಳಿಯ ಟಿ. ಶೆಟ್ಟಿಗೇರಿ, ಕುಮಟೂರು ಮತ್ತು ಬೆಳ್ಳೂರು ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿ ಹಾವಳಿ ಅಧಿಕವಾಗಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಅವರು ಸೋಮವಾರ ಬೆಂಗಳೂರಿನಲ್ಲಿ ಶಾಸಕರಾದ ಕೆ. ಜಿ. ಬೋಪಯ್ಯ, ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೊತೆ ಚರ್ಚೆ ನಡೆಸಿದರು.

150ಕ್ಕೂ ಅಧಿಕ ಸಿಬ್ಬಂದಿ ಶ್ರಮಿಸುತ್ತಿದ್ದರೂ ಹುಲಿ ಸೆರೆ ಸಾಧ್ಯವಾಗಿಲ್ಲ. ಜನರೂ ಜೀವ ಭಯದಲ್ಲೇ ಬದುಕುತ್ತಿದ್ದಾರೆ. ಕತ್ತಲಾದ ಮೇಲೆ ಯಾರೂ ಮನೆಯಿಂದ ಹೊರಗೆ ಬರುತ್ತಿಲ್ಲ. ತೋಟಗಳಲ್ಲಿ ಕೆಲಸ ಮಾಡಲು ಕಾರ್ಮಿಕರೂ ಹಿಂದೇಟು ಹಾಕುತ್ತಿದ್ದಾರೆ.

 Shoot At Sight Order If Fail To Capture Tiger

ಅರಣ್ಯ ಇಲಾಖೆಯ ಪಿಸಿಸಿಎಫ್‌ ಹುಲಿ ಸೆರೆ ಕುರಿತು ಕೊಡಗಿನ ಅರಣ್ಯಾಧಿಕಾರಿಗಳಗೆ ಆದೇಶ ನೀಡಿದ್ದಾರೆ. ಮಾನವ, ಪ್ರಾಣ ಹಾನಿಗೆ ಕಾರಣವಾಗಿರುವ ಹುಲಿಯ ಚಲನ-ವಲನದ ಮೇಲೆ ನಿಗಾವಹಿಸಲು ಕೇಂದ್ರ ಸರ್ಕಾರದ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಗಳನ್ವಯ ಒಂದು ತಾಂತ್ರಿಕ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಮಿತಿಯ ಅಭಿಪ್ರಾಯ ಹಾಗೂ ಸ್ಥಳೀಯ ಜನರ ಮತ್ತು ಜನಪ್ರತಿನಿಧಿಗಳೊಡನೆ ಚರ್ಚಿಸಿದಂತೆ ಮಾನವ ಪ್ರಾಣ ಹಾನಿಗೆ ಕಾರಣವಾಗಿರುವ ಹುಲಿಯನ್ನು ಗುರುತಿಸಿ, ಸೆರೆಹಿಡಿಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರನ್ನು ಕೋರಿರುತ್ತಾರೆ. ಈ ಕೋರಿಕೆಯನ್ನು ಪರಿಗಣಿಸಿ ಹುಲಿಯನ್ನು ಸೆರೆಹಿಡಿಯಲು ಅನುಮತಿ ನೀಡಲಾಗಿದೆ.

ಪೊನ್ನಂಪೇಟೆ ವಲಯದಲ್ಲಿ 2021ರ ಮಾರ್ಚ್ 8ರಂದು ಹುಲಿ ದಾಳಿಯಿಂದ ಮಾನವ ಪ್ರಾಣ ಹಾನಿ ಸಂಭವಿಸಿರುವುದಾಗಿ ಕೊಡಗಿನ ಅರಣ್ಯಾಧಿಕಾರಿಗಳು ವರದಿ ಮಾಡಿದ್ದಾರೆ. ಈ ಹುಲಿಯನ್ನು ತಕ್ಷಣವೇ ಸೆರೆ ಹಿಡಿಯಲು ಹಾಗೂ ಒಂದು ವೇಳೆ ನಿರ್ದಿಷ್ಟವಾಗಿ ಗುರುತಿಸಲಾದ ಹುಲಿಯನ್ನು ಸೆರೆಹಿಡಿಯುವುದು ಅಸಾಧ್ಯವಾದಲ್ಲಿ ಮಾತ್ರ ಈ ಹುಲಿಯನ್ನು ಗುಂಡಿಕ್ಕುವುದನ್ನು ಕೊನೆಯ ಪ್ರಕ್ರಿಯೆಯನ್ನಾಗಿ ಪರಿಗಣಿಸಲು ಆದೇಶ ನೀಡಿದ್ದಾರೆ.

ಕೊಡಗಿನ ರೈತ ಸಂಘವು ಬೆಳ್ಳೂರು ಹೆದ್ದಾರಿಯಲ್ಲಿ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಹುಲಿಯನ್ನು ಸೆರೆ ಅಥವಾ ಗುಂಡಿಕ್ಕಿ ಕೊಲ್ಲುವ ವರೆಗೂ ಧರಣಿ ಮುಂದುವರಿಯಲಿದೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+