ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಟ್ಟೆ ಎಸೆತ: ನಾವು ಹೋರಾಟಕ್ಕೆ ನಿಂತ್ರೆ ಸಿಎಂ ಎಲ್ಲೂ ಓಡಾಡಕ್ಕಾಗಲ್ಲ- ಸಿದ್ದರಾಮಯ್ಯ

|
Google Oneindia Kannada News

ಮಡಿಕೇರಿ, ಆಗಸ್ಟ್ 18: ಸರಕಾರ ಹಿಂದುಪರ ಸಂಘಟನೆ , ಬಿಜೆಪಿ ಕಾರ್ಯಕರ್ತರನ್ನು ಮುಂದೆ ಬಿಟ್ಟು ನನ್ನ ವಿರುದ್ಧ ಪ್ರತಿಭಟನೆ ಮಾಡಿಸಿದ್ದಾರೆ. ನನ್ನ ವಿರುದ್ಧ ಪ್ರತಿಭಟನೆ ಮಾಡಿದವರು ಹೇಡಿಗಳು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. ರಾಜ್ಯದಲ್ಲಿ 5 ಲಕ್ಷದ 23 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ಇವತ್ತಿನವರೆಗೆ ಸರ್ವೇ ಮಾಡಿ ಪರಿಹಾರ ಕೊಡುವ ಪ್ರಯತ್ನವನ್ನು ಸರ್ಕಾರ ಮಾಡಿಲ್ಲ. ಕೊಡಗಿನಲ್ಲೂ ಅಪಾರ ಮಳೆಯಾಗಿ ನಷ್ಟ ಸಂಭವಿಸಿದೆ. ನಾನು ಇದನ್ನೆಲ್ಲಾ ವೀಕ್ಷಣೆ ಮಾಡಬಾರದು ಎಂದು ಹಣ ಕೊಟ್ಟು ಜನರನ್ನು ಕರೆಸಿ ನನ್ನ ವಿರುದ್ಧ ಘೋಷಣೆ ಕೂಗಿಸಲಾಗಿದೆ ಎಂದು ಸರಕಾರವನ್ನು ಟೀಕಿಸಿದರು.

ಭಾರತ-ಪಾಕಿಸ್ತಾನ ವಿಭಜನೆಯ ಸಿದ್ದಾಂತ ಮೊದಲು ಮಂಡಿಸಿದ್ದೇ ಸಾವರ್ಕರ್: ಸಿದ್ದರಾಮಯ್ಯಭಾರತ-ಪಾಕಿಸ್ತಾನ ವಿಭಜನೆಯ ಸಿದ್ದಾಂತ ಮೊದಲು ಮಂಡಿಸಿದ್ದೇ ಸಾವರ್ಕರ್: ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊಟ್ಟೆ ಎಸೆಯುವ ಗೂಂಡಾಗಿರಿಯ ರಾಜಕೀಯ ಶುರುಮಾಡಬೇಡಿ. ಅದನ್ನು ಅಂತ್ಯ ಮಾಡುವುದು ಹೇಗೆ ಎಂದು ನಮಗೂ ಗೊತ್ತು. ನಮ್ಮ ಕಾರ್ಯಕರ್ತರು ನಿಮ್ಮವರಂತೆಯೇ ಬೀದಿಗಿಳಿದರೆ ನೀವು ಮನೆಯಿಂದ ಹೊರಬರುವುದು ಕೂಡಾ ಕಷ್ಟವಾಗಬಹುದು. ಯು.ಪಿ ಮಾದರಿ ಎಂದರೆ ಇದೆನಾ? ನಾವು ಸಮಾಜದಲ್ಲಿ ಸಾಮರಸ್ಯ ಬಯಸುವವರು, ಎಲ್ಲ ಜಾತಿ ಧರ್ಮದ ಜನರು ಒಂದೇ ತಾಯಿಯ ಮಕ್ಕಳಂತೆ ಬದುಕಬೇಕು ಎಂದು ಬಯಸುವವರು. ಬಿಜೆಪಿಯವರು ಮತ ಧ್ರುವಿಕರಣಕ್ಕಾಗಿ ಸಮಾಜ ಒಡೆಯುವವರು, ಗೋಡ್ಸೆಗೆ ಪೂಜೆ ಮಾಡುವುದು ದೇಶಪ್ರೇಮವೇ? ಎಂದು ಪ್ರಶ್ನಿಸಿದ್ದಾರೆ.

Siddaramaiah Lashed out at the BJP for Throwing Eggs at hi car in Madikeri

ಶಿವಮೊಗ್ಗದ ಗಲಭೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರೇ ಕಾರಣ. ಸಚಿವ ಸ್ಥಾನ ಕಳೆದುಕೊಂಡು ಮನೆಯಲ್ಲಿರುವ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನ ಖಾತರಿಯೂ ಇಲ್ಲ. ಇದರಿಂದ ಹತಾಶರಾಗಿರುವ ಈಶ್ವರಪ್ಪನವರು ಆರ್ ಎಸ್ ಎಸ್ ಒಡೆಯರನ್ನು ಒಲಿಸಿಕೊಳ್ಳಲು ಇದೆಲ್ಲ ಮಾಡುತ್ತಿದ್ದಾರೆ. ಸಾಧನೆಯ ಬಲದಿಂದ ಚುನಾವಣೆಯನ್ನು ಎದುರಿಸಲಿಕ್ಕಾಗದ ಬಿಜೆಪಿ ನಾಯಕರಿಗೆ ಸುಳ್ಳು ಸುದ್ದಿ ಮತ್ತು ಆಧಾರರಹಿತ ಆರೋಪಗಳೇ ಬಂಡವಾಳ. ಹಳೆಯ ಆಟವನ್ನು ಬಿಜೆಪಿ ರಾಜ್ಯದಲ್ಲಿ ಮತ್ತೆ ಶುರುಮಾಡಿದೆ. ಈ ಸುಳ್ಳಿನ ಸರದಾರರಿಗೆ ಸತ್ಯವನ್ನು ಎದುರಿಸುವ ನೈತಿಕತೆ ಇಲ್ಲಎಂದು ಕಿಡಿ ಕಾರಿದ್ದಾರೆ.

ವಿ.ಡಿ.ಸಾವರ್ಕರ್ ಬಗ್ಗೆ ಅಭಿಮಾನ ಇದ್ದರೆ ಅವರ ಬಗ್ಗೆ ಪುಸ್ತಕ ಬರೆದು, ಕಾರ್ಯಕ್ರಮಗಳನ್ನು ಆಯೋಜಿಸಿ ಅವರ ವಿರುದ್ಧದ ಆರೋಪಗಳಿಗೆ ಉತ್ತರ ಕೊಡಿ.. ಕೋಮುಗಲಭೆ ಹುಟ್ಟುಹಾಕಲು ಅವರ ಪೋಟೊವನ್ನು ಅಸ್ತ್ರವನ್ನಾಗಿ ಯಾಕೆ ಮಾಡುತ್ತಿದ್ದೀರಿ? ಇದನ್ನೇ ನಾನು ಪ್ರಶ್ನಿಸಿದ್ದು. ಮಹಾತ್ಮ ಗಾಂಧೀಜಿಯವರ ಪೋಟೊ ಹಾಕಿ ಜಾಹೀರಾತು ಕೊಡುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು, ಗಾಂಧೀಜಿ ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ಪೋಟೊ ಮೆರವಣಿಗ ಮಾಡಿದ ತಮ್ಮದೇ ಪಕ್ಷದ ಕಾರ್ಯಕರ್ತರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಸಾವರ್ಕರ್ ಅವರನ್ನು ಹೊತ್ತು ಮೆರೆಯುತ್ತಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ 52 ವರ್ಷಗಳ ಕಾಲ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಯಾಕೆ ಹಾರಿಸಿರಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸುತ್ತೀರಾ? ಎಂದು ಪ್ರಶ್ನೆಗಳ ಸುರಿಮಳೆಗೈದರು.

ತೆಲಂಗಾಣದೊಂದಿಗೆ ವಿಲೀನವಾಗಲು ರಾಯಚೂರು ಜನ ಬಯಸುತ್ತಿದ್ದಾರೆ: ಕಿಡಿ ಹೊತ್ತಿಸಿದ ಕೆಸಿಆರ್ ಹೇಳಿಕೆತೆಲಂಗಾಣದೊಂದಿಗೆ ವಿಲೀನವಾಗಲು ರಾಯಚೂರು ಜನ ಬಯಸುತ್ತಿದ್ದಾರೆ: ಕಿಡಿ ಹೊತ್ತಿಸಿದ ಕೆಸಿಆರ್ ಹೇಳಿಕೆ

ಬಿ.ಎಸ್ ಯಡಿಯೂರಪ್ಪ ಅವರಿಗೆ 75 ವರ್ಷ ಆಯ್ತು ಎಂದು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಯವಾಗಿ ಕೆಳಗಿಳಿಸಿದರು. ಅವರು ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದರು. ಈಗ ಮತ್ತೆ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ, ಅವರ ವಯಸ್ಸು ಕಡಿಮೆ ಆಯ್ತಾ? ಇದಕ್ಕೆ ಕಾರಣ ಅವರ ಮೇಲಿನ ಪ್ರೀತಿ ಅಲ್ಲ, ಸೋಲಿನ ಭಯ. ಯಡಿಯೂರಪ್ಪರನ್ನು ಸಮಾಧಾನ ಮಾಡಲು ಹಾಗೂ ಮುಂದಿನ ಚುನಾವಣೆಗಾಗಿ ಹೀಗೆ ಮಾಡುತ್ತಿದ್ದಾರೆ. ಹಿಂದೆ ಮುಖ್ಯಮಂತ್ರಿ ಸ್ಥಾನದಿಂದ ತೆಗೆದಿದ್ದಾರೆ, ಮತ್ತೆ ಮುಖ್ಯಮಂತ್ರಿ ಮಾಡುತ್ತಾರಾ? ಹೆಚ್ಚು ಅಂದ್ರೆ ಅವರ ಮಗನಿಗೆ ಟಿಕೆಟ್ ಕೊಡಿಸುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದರು.

Recommended Video

KL Rahul ಮಾಡಿದ ತ್ಯಾಗದಿಂದ ಟೀಂ‌ ಇಂಡಿಯಾ ಗೆದ್ದಿದ್ದು ಹೇಗೆ ಗೊತ್ತಾ? | *Cricket | OneIndia Kannada

English summary
Leader of Opposition in Karnataka Assembly Siddaramaiah lashed out at the BJP government after his car was attacked by Hindutva protesters in Madikeri.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X