ಶಿವರಾತ್ರಿಗೆ ಕೊಡಗಿನ ಇರ್ಪುವಿನಲ್ಲಿ ತೀರ್ಥಸ್ನಾನ ಮಾಡುವುದೇಕೆ?
ಮಡಿಕೇರಿ, ಫೆಬ್ರವರಿ 25: ಕೊಡಗಿನಲ್ಲಿ ಹತ್ತಾರು ಜಲಪಾತಗಳಿದ್ದರೂ ಅವು ಕೇವಲ ಜಲಪಾತಗಳಾಗಿಯಷ್ಟೆ ಉಳಿದಿದೆ. ಆದರೆ ದಕ್ಷಿಣಕೊಡಗಿನಲ್ಲಿರುವ ಇರ್ಪು ಜಲಪಾತ ಬರೀ ಜಲಪಾತವಾಗಿ ಉಳಿಯದೆ ಇದು ಪರಮ ಪವಿತ್ರ ಜಲಧಾರೆಯಾಗಿ ಭಕ್ತರ ಇಷ್ಟಾರ್ಥ ನೆರವೇರಿಸುತ್ತಾ ಬರುತ್ತಿದ್ದು ಅದರಲ್ಲೂ ಶಿವರಾತ್ರಿಯಂದು ಮೇಲಿಂದ ಧುಮುಕುವ ಜಲಧಾರೆಗೆ ತಲೆಕೊಟ್ಟು ಮಿಂದರೆ ಪಾಪಗಳು ಪರಿಹಾರವಾಗುತ್ತವೆ ಎಂಬ ನಂಬಿಕೆಯಿರುವುದರಿಂದ ಜನಸಾಗರವೇ ಹರಿದು ಬರುವುದನ್ನು ನಾವು ಕಾಣಬಹುದಾಗಿದೆ.
ಇನ್ನು ಲಕ್ಷ್ಮಣ ಸೃಷ್ಟಿಸಿದ ಇರ್ಪು ಜಲಪಾತವನ್ನು ಲಕ್ಷ್ಮಣತೀರ್ಥ ಎಂದೇ ಕರೆಯಲಾಗುತ್ತದೆ. ಶಿವರಾತ್ರಿಯಂದು ಇಲ್ಲಿ ಪೂಜಾ ಕೈಂಕರ್ಯಗಳು ನಡೆಯುವುದರೊಂದಿಗೆ ಜಾಗರಣೆ ಬಳಿಕ ಇಲ್ಲಿ ತೀರ್ಥ ಸ್ನಾನ ಮಾಡಿದರೆ ದಾಂಪತ್ಯ ಸುಖಮಯವಾಗಿರುವುದರೊಂದಿಗೆ ಪಾಪಗಳು ಪರಿಹಾರವಾಗಿ ಪ್ರಸನ್ನರಾಗುತ್ತಾರೆ ಎಂಬ ನಂಬಿಕೆ ಹಿಂದಿನಿಂದಲೂ ಜನರಲ್ಲಿದೆ. ಇಲ್ಲಿನ ರಾಮೇಶ್ವರ ದೇಗುಲದಲ್ಲಿರುವ ಈಶ್ವರಲಿಂಗವನ್ನು ಶ್ರೀರಾಮನೇ ನಿರ್ಮಿಸಿ ಪ್ರತಿಷ್ಠಾಪಿಸಿದೆಂದೂ ನಂಬಲಾಗಿದೆ. ಹಾಗೆಯೇ ಆಂಜನೇಯ ಕಾಶಿಯಿಂದ ಹೊತ್ತು ತಂದ ಲಿಂಗವನ್ನು ಸಮೀಪದ ಹೇರ್ಮಾಡಿನಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಇಲ್ಲಿಯೂ ಶಿವರಾತ್ರಿ ಆಚರಣೆ ಅದ್ಧೂರಿಯಾಗಿ ನಡೆಯುವುದನ್ನು ಕಾಣಬಹುದು.

ಶಿವರಾತ್ರಿಯಂದು ಭಕ್ತರಿಗೆ ತೀರ್ಥಸ್ನಾನ ಮಾಡಲು ಅನುಕೂಲವಾಗುವಂತೆ ಅಟ್ಟಳಿಗೆಯನ್ನು ನಿರ್ಮಿಸಲಾಗುತ್ತದೆ. ಇದರ ಮೇಲೆ ಹೋದರೆ ಮೇಲಿಂದ ಧುಮುಕುವ ಜಲಧಾರೆ ನಮ್ಮ ಶಿರವನ್ನು ಸ್ಪರ್ಶಿಸಿ ಮೈಮೇಲೆ ಹರಿಯುವುದರೊಂದಿಗೆ ಮಾನಸಿಕ ಮತ್ತು ದೈಹಿಕವಾಗಿ ಪ್ರಪುಲ್ಲರಾಗುತ್ತೇವೆ. ಇನ್ನು ಗಂಡಹೆಂಡತಿ ಕೈಕೈ ಹಿಡಿದುಕೊಂಡು ಜಲಧಾರೆಗೆ ತಲೆಕೊಟ್ಟು ಮೀಯುವುದರಿಂದ ದಾಂಪತ್ಯ ಇನ್ನಷ್ಟು ಗಟ್ಟಿಯಾಗಿ ಆಯುರಾರೋಗ್ಯ ಸಿದ್ಧಿಸುತ್ತದೆ ಎಂಬ ನಂಬಿಕೆ ಜನವಲಯದಲ್ಲಿದೆ.
ಕೇರಳೀಯ ವಾಸ್ತುಶಿಲ್ಪದ ರಾಮೇಶ್ವರ ದೇಗುಲ
ಇಲ್ಲಿರುವ ರಾಮೆಶ್ವರ ದೇವಾಲಯ ಕೇರಳೀಯರ ವಾಸ್ತುಶಿಲ್ಪದೊಂದಿಗೆ ವೃತ್ತಾಕಾರದ ಗರ್ಭಗುಡಿಯನ್ನು ಹೊಂದಿ ಬಲು ಸೊಗಸಾಗಿ ನಿರ್ಮಿಸಲ್ಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿರುವ ಇತರೆ ದೇವಾಲಯಕ್ಕಿಂತ ವಿಭಿನ್ನವಾಗಿ ಗೋಚರಿಸುತ್ತದೆ. ಈ ದೇಗುಲದಲ್ಲಿರುವ ಶಿವಲಿಂಗದ ಪ್ರತಿಷ್ಠಾಪನೆ ಹೇಗಾಯಿತು? ಮತ್ತು ಈ ಕ್ಷೇತ್ರ ಏಕೆ ಪವಿತ್ರ ಎಂಬುದನ್ನು ತಿಳಿಯಬೇಕಾದರೆ ಪೌರಾಣಿಕ ಕಥೆಯನ್ನೊಮ್ಮೆ ಮೆಲುಕು ಹಾಕ ಬೇಕಾಗುತ್ತದೆ. ಪುರಾಣದ ಕಥೆಗಳ ಪ್ರಕಾರ ಲಂಕೆಯಲ್ಲಿ ಯುದ್ದ ಮಾಡಿ ರಾಕ್ಷಸರನ್ನು ಸಂಹರಿಸಿ ಸೀತಾ ದೇವಿಯೊಂದಿಗೆ ಇರ್ಪುವಿಗೆ ಆಗಮಿಸಿದ ಶ್ರೀರಾಮ ಇಲ್ಲಿಯ ಪ್ರಶಾಂತ ವಾತಾವರಣ ಕಂಡು ದೇಗುಲ ನಿರ್ಮಾಣಕ್ಕೆ ಇದೇ ಸೂಕ್ತ ತಾಣವೆಂದು ನಿರ್ಧರಿಸುತ್ತಾನೆ.
ಪೂಜಾ ಕೈಂಕರ್ಯ ನೆರವೇರಿಸಲು ಶ್ರೀರಾಮನ ಆಜ್ಞೆಯಂತೆ ಆಂಜನೇಯ ಲಿಂಗತರಲೆಂದು ಕಾಶಿಯತ್ತ ಹೋಗುತ್ತಾನೆ. ಇತ್ತ ಶ್ರೀರಾಮ ಲಿಂಗಪ್ರತಿಷ್ಠಾಪನೆಗೆ ದಿನ ನಿಗದಿಪಡಿಸಿ ಮುನಿಪುಂಗವರನ್ನು ಆಹ್ವಾನಿಸಿ ಮುಹೂರ್ತವನ್ನು ನಿಗದಿ ಮಾಡಿದನು. ಆದರೆ ಮುಹೂರ್ತ ಸಮೀಪಿಸಿದರೂ ಲಿಂಗ ತರಲು ಹೋದ ಆಂಜನೇಯ ಬರಲೇ ಇಲ್ಲ. ಆಗ ಶ್ರೀರಾಮ ಸ್ವತಃ ಲಿಂಗವೊಂದನ್ನು ನಿರ್ಮಿಸಿ ಮುಹೂರ್ತದ ಸಮಯಕ್ಕೆ ಸರಿಯಾಗಿ ಲಿಂಗಪ್ರತಿಷ್ಠಾಪನೆ ಮಾಡಿದನಂತೆ. ಕಾರ್ಯ ಮುಗಿದ ಮೇಲೆ ಆಂಜನೇಯ ಲಿಂಗವನ್ನು ಹೊತ್ತು ತಂದನಂತೆ. ಆದರೆ ಆ ಲಿಂಗವನ್ನು ಆಂಜನೇಯನೇ ಪ್ರತಿಷ್ಠಾಪಿಸುವಂತೆ ಶ್ರೀರಾಮ ಹೇಳಿದ ಮೇರೆಗೆ ಆಂಜನೇಯ ಇರ್ಪುಗೆ ಹತ್ತು ಕಿ.ಮೀ. ದೂರವಿರುವ ಹೇರ್ಮಾಡಿನಲ್ಲಿ ಪ್ರತಿಷ್ಠಾಪಿಸಿದ ಎಂದು ಹೇಳಲಾಗುತ್ತಿದೆ.

ಲಕ್ಷ್ಮಣ ಸೃಷ್ಟಿಸಿದ ಜಲಧಾರೆಯೇ ಲಕ್ಷ್ಮಣತೀರ್ಥ
ಲಕ್ಷ್ಮಣತೀರ್ಥ ಸೃಷ್ಟಿಯಾಗಿದ್ದೇಗೆ ಎಂಬುದಕ್ಕೂ ಪುರಾಣ ಕಥೆಯಿದ್ದು ಅದರ ಪ್ರಕಾರ ಸೀತೆಯನ್ನು ಅರಸುತ್ತಾ ಹೊರಟ ರಾಮಲಕ್ಷ್ಮಣರು ಬ್ರಹ್ಮಗಿರಿಯ ತಪ್ಪಲಿಗೆ ಬರುತ್ತಾರೆ. ಈ ವೇಳೆ ಶ್ರೀರಾಮ ಸೇರಿದಂತೆ ವಾನರರು ನಡೆಯುತ್ತಿದ್ದರೆ ಲಕ್ಷ್ಮಣ ಮುಂದಕ್ಕೆ ಹೆಜ್ಜೆಯಿರಿಸದೆ ಅಲ್ಲಿಯೇ ಕುಳಿತುಕೊಂಡನಂತೆ. ಎಂದೂ ಹಿಂದೇಟು ಹಾಕದೆ ಮುನ್ನಡೆಯುತ್ತಿದ್ದ ಲಕ್ಷ್ಮಣ ಅಂದು ಹಾಗೆ ಕುಳಿತದ್ದೇ ಮಲಯಾಳದಲ್ಲಿ ಇರಿಕ್ಕನ್ (ಕುಳಿತುಕೊಳ್ಳುವುದು) ಪದದಿಂದ ಇರ್ಪು ಹುಟ್ಟಿತೆಂದು ಹೇಳಲಾಗುತ್ತಿದೆ. ಕೆಲಕಾಲದ ನಂತರ ಅಲ್ಲಿಂದ ಎದ್ದ ಲಕ್ಷ್ಮಣ ತನ್ನ ವರ್ತನೆಗೆ ನಾಚಿ ಅಣ್ಣ ಶ್ರೀರಾಮನನ್ನು ನೋಯಿಸಿದ್ದಕ್ಕಾಗಿ ಅಗ್ನಿಕುಂಡ ನಿರ್ಮಿಸಿ ಅದರಲ್ಲಿ ಆತ್ಮಾಹುತಿ ಮಾಡಲು ನಿರ್ಧರಿಸಿದನಂತೆ. ಇದನ್ನು ಕಂಡ ರಾಮ ಭಯಗೊಂಡು ಲಕ್ಷ್ಮಣನನ್ನು ಸಮಾಧಾನಗೊಳಿಸಿ ಆತನ ತಪ್ಪನ್ನು ಕ್ಷಮಿಸಿದ.
ಇದರಿಂದ ಸಂತೋಷಗೊಂಡ ಲಕ್ಷ್ಮಣ ತಾನು ನಿರ್ಮಿಸಿದ ಅಗ್ನಿಕುಂಡವನ್ನು ಆರಿಸಲು(ನಂದಿಸಲು) ಬಾಣಬಿಟ್ಟನಂತೆ ಹಾಗೆ ಬಿಟ್ಟ ಬಾಣ ಜಲಧಾರೆಯನ್ನು ಸೃಷ್ಟಿಸಿ ಅಗ್ನಿಕುಂಡವನ್ನು ನಂದಿಸಿತಂತೆ. ಈ ರೀತಿ ಸೃಷ್ಟಿಯಾದ ಜಲಧಾರೆಯನ್ನು ರಾಮನೇ ಲಕ್ಷ್ಮಣತೀರ್ಥವೆಂದು ಹೆಸರಿಸಿ ಎಲ್ಲರೂ ಕುಡಿದು ಸಂತುಷ್ಟಗೊಂಡರಂತೆ. ಆದುದರಿಂದ ಇಂದಿಗೂ ಲಕ್ಷ್ಮಣತೀರ್ಥವನ್ನು ಪವಿತ್ರ ಎಂದೇ ನಂಬಲಾಗುತ್ತದೆ. ಜೊತೆಗೆ ನಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಮಾಡಿ ಪಾಪಕೃತ್ಯಗಳಿಗೆ ಇಲ್ಲಿ ಸ್ನಾನ ಮಾಡುವುದರಿಂದ ಪರಿಹಾರ ಕಾಣಲು ಸಾಧ್ಯವಾಗಲಿದೆ. ಇರ್ಪುವಿಗೆ ತೆರಳುವವರಿಗೆ ನಿಗದಿತ ಸಮಯಕ್ಕೆ ಬೆಳಿಗ್ಗೆ ಹಾಗೂ ಮಧ್ಯಾಹ್ನ ಗೋಣಿಕೊಪ್ಪಲಿನಿಂದ ಬಸ್ಸು ವ್ಯವಸ್ಥೆಯಿದೆ. ಉಳಿದಂತೆ ಕುಟ್ಟಕ್ಕೆ ತೆರಳುವ ಬಸ್ಸಿನಲ್ಲಿ ಶ್ರೀಮಂಗಲ ಹಾಗೂ ಕುಟ್ಟದ ನಡುವೆ ಸಿಗುವ ಕಾಕೂರು ಅಥವಾ ಕಾಯಿಮಾನಿಯಲ್ಲಿಳಿದು ಅಲ್ಲಿಂದ ನಡೆದುಕೊಂಡು ಹೋಗಬಹುದಾಗಿದೆ. ಅಥವಾ ಶ್ರೀಮಂಗಲಕ್ಕೆ ತೆರಳಿ ಅಲ್ಲಿಂದ ಬಾಡಿಗೆ ವಾಹನಗಳಲ್ಲಿಯೂ ತೆರಳಬಹುದಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications