ಸಮಾಜ ಕಲ್ಯಾಣ ಇಲಾಖೆ ರೂ. 10 ಸಾವಿರ ಶಿಷ್ಯ ವೇತನ, ಅರ್ಜಿ ಹಾಕಲು ಅರ್ಹತೆಗಳು
ಮಡಿಕೇರಿ, ಸೆಪ್ಟೆಂಬರ್ 23: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ 10 ಸಾವಿರ ರೂ. ಶಿಷ್ಯ ವೇತನದ ಜೊತೆಗೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಸಕ್ತ ಮತ್ತು ಅರ್ಹರು ನಿಗದಿತ ದಾಖಲಾತಿಗಳ ಜೊತೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಕೆ ಮಾಡಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಈಗ ದಿನಾಂಕವನ್ನು ವಿಸ್ತರಿಸಲಾಗಿದೆ.

ಅರ್ಜಿಯನ್ನು ಸಲ್ಲಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿಯು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳ ವಯೋಮಿತಿ 40 ವರ್ಷಗಳು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು 3 ಅಥವಾ 5 ವರ್ಷಗಳ ಒಳಗಡೆ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪ್ರಾಸಿಕ್ಯೂಟ್ ಬಳಿ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು.
ಅರ್ಜಿ ಸಲ್ಲಿಕೆಗೆ ನಿಯಮಗಳು: ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಬಿಟ್ಟು ಹೋಗಬಾರದು. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರಿ ಸಿಕ್ಕಿದಲ್ಲಿ ಮಾತ್ರ ನಿಯಮಾನುಸಾರ ಸಡಿಲಗೊಳಿಸಲಾಗುವುದು. ಒಂದು ವೇಳೆ ತರಬೇತಿ ಬಿಟ್ಟು ಹೋದಲ್ಲಿ ಅಂಥವರ ಶಿಷ್ಯ ವೇತನವನ್ನು ನಿಯಮಾನುಸಾರ ವಸೂಲಿ ಮಾಡಲಾಗುವುದು.
ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10 ಸಾವಿರ ಗಳಿಗೆ ಶಿಷ್ಯವೇತನವನ್ನು ನೀಡಲಾಗುವುದು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. 2.50 ಲಕ್ಷ ಮೀರತಕ್ಕದ್ದಲ್ಲ. ಸುಳ್ಳು ಮಾಹಿತಿ ದಾಖಲಾತಿಗಳನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿ ಪಡಿಸಲಾಗುವುದು. ಅಂತಹ ಅಭ್ಯರ್ಥಿಗಳಿಂದ ತರಬೇತಿ ಅವಧಿಯಲ್ಲಿ ನೀಡಿದ ಶಿಷ್ಯವೇತನವನ್ನು ಶೇ.10ರ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.
ಅರ್ಜಿಯಲ್ಲಿ ಪೂರ್ಣ ಮಾಹಿತಿ ಇಲ್ಲದಿದ್ದ ಪಕ್ಷದಲ್ಲಿ, ಅರ್ಜಿ ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಯು ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 3 ವರ್ಷದೊಳಗಾಗಿ ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೋಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್‍ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು.
ಅಭ್ಯರ್ಥಿಯು ಸುಳ್ಳು ಪ್ರಮಾಣ ಪತ್ರಗಳನ್ನು ನೀಡಿದ್ದಲ್ಲಿ ಮತ್ತು ತರಬೇತಿಗೆ ಮಾಹಿತಿ ನೀಡದೆ ಗೈರು ಹಾಜರಾಗಿದ್ದಲ್ಲಿ ಶಿಷ್ಯ ವೇತನವನ್ನು ತಡೆಯಲಾಗುವುದು. ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಕಾನೂನು ಪದವೀಧರ ತರಬೇತಿಗೆ ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ವೇಳೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರುಗೊಳಿಸಿ ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್: www.sw.kar.nic.inನಲ್ಲಿ ಸೆಪ್ಟೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಬೇಕಾದ ಕಚೇರಿಗಳ ವಿವರ. ಉಪನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ ಇವರನ್ನು ಸಂಪರ್ಕಿಸಬಹುದು.
ಮಡಿಕೇರಿ 9480843037, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ 9480843155, ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ 9480843156 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ 9480843157 ಅನ್ನು ಸಂಪರ್ಕಿಸಬಹುದು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications